ಶಾಸಕ ಸ್ಥಾನಕ್ಕೆ ವಿ. ಶ್ರೀನಿವಾಸ್ ಪ್ರಸಾದ್ ರಾಜೀನಾಮೆ

Posted By: Prithviraj
Subscribe to Oneindia Kannada

ಬೆಂಗಳೂರು, ಅಕ್ಟೋಬರ್, 17: ಕಾಂಗ್ರೆಸ್ ಹಿರಿಯ ದಲಿತ ಮುಖಂಡ, ನಂಜನಗೂಡು ಶಾಸಕ ವಿ. ಶ್ರೀನಿವಾಸ ಪ್ರಸಾದ್ ಅವರು ಶಾಸಕ ಸ್ಥಾನಕ್ಕೆ ಸೋಮವಾರ (ಅ.17) ರಾಜೀನಾಮೆ ಸಲ್ಲಿಸಿದ್ದಾರೆ.

ವಿಧಾನಸೌಧದಲ್ಲಿ ಸಭಾಧ್ಯಕ್ಷ ಕೆ.ಬಿ.ಕೋಳಿವಾಡ ಅವರನ್ನು ಭೇಟಿ ಮಾಡಿ ಶ್ರೀನಿವಾಸ್ ಪ್ರಸಾದ್ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೂ ಅವರು ರಾಜೀನಾಮೆ ಸಲ್ಲಿಸುವ ಸಾಧ್ಯತೆ ಇದೆ.

Nanjanagud cong mla backward class leader Srinivas Prasad resigns

ಈ ಕುರಿತು ಪ್ರತಿಕ್ರಿಯೆ ನೀಡಿರುವ ಶ್ರೀನಿವಾಸ ಪ್ರಸಾದ್ ಸ್ವಇಚ್ಛೆಯಿಂದ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ. ರಾಜೀನಾಮೆಯನ್ನು ಇನ್ನೂ ಅಂಗೀಕಾರ ಮಾಡಿಲ್ಲ ಎಂದು ಸಭ್ಯಾದ್ಯಕ್ಷ ಕೆ.ಬಿ.ಕೋಳಿವಾಡ ಹೇಳಿದ್ದಾರೆ.

'ರಾಜೀನಾಮೆ ಕೊಟ್ಟ ತಕ್ಷಣ ಅಂಗೀಕರಿಸಬೇಕೆಂಬ ನಿಯಮವೇನೂ ಇಲ್ಲ, ರಾಜೀನಾಮೆಗೆ ಅವರು ಕೊಟ್ಟ ಕಾರಣ ಸೂಕ್ತವೇ ಎಂದು ಪರಿಗಣಿಸಬೇಕು' ಎಂದು ಅವರು ತಿಳಿಸಿದ್ದಾರೆ.

ರಾಜೀನಾಮೆ ಅಂಗೀಕರಾವಾದಲ್ಲಿ ನಂಜನಗೂಡು ಕ್ಷೇತ್ರಕ್ಕೆ ಇನ್ನೂ 6 ತಿಂಗಳಲ್ಲಿ ಉಪಚುನಾವಣೆ ನಡೆಯಲಿದೆ. 2018ರ ಸಾರ್ವತ್ರಿಕ ಚುನಾವಣೆಗೂ ಮುನ್ನ ಮತ್ತೊಂದು ಚುನಾವಣೆ ಎದುರಾಗಲಿದೆ. ಇತ್ತೀಚೆಗಷ್ಟೇ ದಲಿತ ಮುಖಂಡ ಕೆ.ಶಿವರಾಂ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದರು, ಈಗ ಶ್ರೀನಿವಾಸ್ ಪ್ರಸಾದ್ ಕಾಂಗ್ರೆಸ್ ತೊರೆದಿದ್ದಾರೆ.

ಒಂದೆಡೆ ದಲಿತ ಮುಖಂಡರನ್ನು ಪಕ್ಷಕ್ಕೆ ಸೇರ್ಪಡಿಸಿಕೊಳ್ಳುವರಲ್ಲಿ ಬಿಜೆಪಿ ಯಶಸ್ವಿಯಾಗುತ್ತಿದೆ. ಆದರೆ ಕಾಂಗ್ರೆಸ್ ಪಕ್ಷ ದಲಿತ ಸಮುದಾಯವನ್ನು ಕಳೆದುಕೊಳ್ಳುತ್ತಿದೆ ಎಂದು ಸಾಮಾಜಿಕ ಜಾಲಾತಾಣಗಳಲ್ಲಿ ಟೀಕೆಗಳು ಪ್ರಕಟವಾಗುತ್ತಿವೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಕಂದಾಯ ಸಚಿವರಾಗಿ ಶ್ರೀನಿವಾಸ್ ಪ್ರಸಾದ್ ಅವರು ಕಾರ್ಯನಿರ್ವಹಿಸಿದ್ದರು, ಮತ್ತು ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಅವರು ಗುರುತಿಸಿಕೊಂಡಿದ್ದರು. [ಕಾಂಗ್ರೆಸ್ ಗೆ ರಾಜೀನಾಮೆ ನೀಡಲು ಶ್ರೀನಿವಾಸ್ ಪ್ರಸಾದ್ ನಿರ್ಧಾರ]

ಸಚಿವ ಸಂಪುಟ ಪುನರ್ ರಚನೆ ಸಂದರ್ಭದಲ್ಲಿ ಅವರನ್ನು ಕೈಬಿಟ್ಟದ್ದರಿಂದ ತೀವ್ರ ಅಸಮಾಧಾನಗೊಂಡಿದ್ದ ಅವರು ಕಳೆದ ವಾರ ರಾಜೀನಾಮೆ ನಿರ್ಧಾರ ಪ್ರಕಟಿಸಿದ್ದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
Former minister senior congress leader V. Srinivas prasad has submitted resign letter to speaker K.B.Koliwada as Nanjangudu constituency on Oct. 17.
Please Wait while comments are loading...