ಶಿವಾಜಿನಗರದಲ್ಲಿ ನಾರಾಯಣ ಹೃದಯಾಲಯದ ಆಸ್ಪತ್ರೆ ಸ್ಥಾಪನೆ

Posted By:
Subscribe to Oneindia Kannada

ಬೆಂಗಳೂರು, ಸೆಪ್ಟೆಂಬರ್ 16 : ನಾರಾಯಣ ಹೃದಯಾಲಯದ 100 ಹಾಸಿಗೆಗಳ ಆಸ್ಪತ್ರೆ ಬೆಂಗಳೂರಿನ ಶಿವಾಜಿನಗರದಲ್ಲಿ ಸ್ಥಾಪನೆಯಾಗಲಿದೆ. ಈಗಾಗಲೇ ಕಟ್ಟಡ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಬಿಬಿಎಂಪಿ ಕಟ್ಟಡ ನಿರ್ಮಾಣಕ್ಕೆ ಸುಮಾರು 12 ಕೋಟಿ ರೂ. ವೆಚ್ಚ ಮಾಡಿದೆ.

ಶುಕ್ರವಾರ ನಾರಾಯಣ ಹೃದಯಾಲಯದ ಸಂಸ್ಥಾಪಕ ಅಧ್ಯಕ್ಷ ಡಾ. ದೇವಿಶೆಟ್ಟಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು. ನಗರಾಭಿವೃದ್ಧಿ ಸಚಿವ ರೋಷನ್ ಬೇಗ್ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.[ಗೋಣಿಕೊಪ್ಪ ಆಸ್ಪತ್ರೆಯಲ್ಲಿ ಧೂಳು ಹಿಡಿದ ಎಕ್ಸ್ ರೇ ಯಂತ್ರ]

Narayana Hrudayalaya to set-up hospital in Shivaji Nagar

ಈ ಭೇಟಿಯ ಬಳಿಕ ಮಾತನಾಡಿದ ಸಚಿವ ರೋಷನ್ ಬೇಗ್ ಅವರು, 'ಬಡವರಿಗೆ ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ಒದಗಿಸಲು ನಾರಾಯಣ ಹೃದಯಾಲಯದ ಜೊತೆಗೂಡಿ ಶಿವಾಜಿನಗರದಲ್ಲಿ ಆಸ್ಪತ್ರೆಯನ್ನು ಆರಂಭಿಸಲಾಗುತ್ತಿದೆ' ಎಂದು ತಿಳಿಸಿದರು.[ಕಾಸರಗೋಡು ಸರ್ಕಾರಿ ಆಸ್ಪತ್ರೆಯಲ್ಲಿ ಸಮಸ್ಯೆಗಳೇ ಹೆಚ್ಚು]

'ಆಸ್ಪತ್ರೆಯ ಕಟ್ಟಡ ನಿರ್ಮಾಣ ಕಾರ್ಯವನ್ನು ಬಿಬಿಎಂಪಿ ಈಗಾಗಲೇ ಆರಂಭಿಸಿದೆ. ಇದಕ್ಕಾಗಿ ಸುಮಾರು 12 ಕೋಟಿ ವೆಚ್ಚ ಮಾಡಲಾಗಿದೆ. ಡಾ.ದೇವಿಶೆಟ್ಟಿ ಅವರು, 20 ಕೋಟಿಗೂ ಅಧಿಕ ಮೌಲ್ಯದ ವೈದ್ಯಕೀಯ ಉಪಕರಣಗಳನ್ನು ಒದಗಿಸಲಿದ್ದಾರೆ' ಎಂದರು.[ಚಿತ್ರಗಳು : ಬೆಂಗಳೂರಲ್ಲಿ ಧರ್ಮಸ್ಥಳ ಆಯುರ್ವೇದ ಆಸ್ಪತ್ರೆ ಉದ್ಘಾಟನೆ]

100 ಹಾಸಿಗೆಗಳ ಆಸ್ಪತ್ರೆ ಇದಾಗಿದ್ದು, ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆ ನಿರ್ಮಾಣಕ್ಕೆ ನೆರವು ನೀಡುತ್ತಿರುವ ಡಾ.ದೇವಿಶೆಟ್ಟಿ ಅವರಿಗೆ ಸಚಿವರು ಧನ್ಯವಾದ ಸಲ್ಲಿಸಿದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Narayana Hrudayalaya will set up multi-specialty hospital in Shivaji Nagar, Bengaluru.
Please Wait while comments are loading...