ನಿವೃತ್ತಿಗೂ ಮುಂಚೆಯೇ ಶೇ.90% ಪೌರ ಕಾರ್ಮಿಕರ ಸಾವು

Posted By:
Subscribe to Oneindia Kannada

ಬೆಂಗಳೂರು, ಜನವರಿ 06: ಸ್ವಚ್ಛತೆ ಕೆಲಸ ಮಾಡುವ ಪೌರಕಾರ್ಮಿಕರಲ್ಲಿ ಅನಾರೋಗ್ಯ ಹೆಚ್ಚುತ್ತಿದ್ದು, ಶೇ 90ರಷ್ಟು ಕಾರ್ಮಿಕರು ನಿವೃತ್ತಿಗೆ ಮೊದಲೇ ಸಾವನ್ನುಪ್ಪುತ್ತಿದ್ದಾರೆ ಎಂದು ಸಚಿವ ಎಚ್. ಆಂಜನೇಯ ಆತಂಕ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ಸಫಾಯಿ ಕರ್ಮಚಾರಿ ಆಯೋಗದ ಕಚೇರಿ ಉದ್ಘಾಟನೆ ವೇಳೆ ಮಾತನಾಡಿದ ಅವರು, ಸಮಾಜದ ಆರೋಗ್ಯ ಕಾಪಾಡುವ ಕೆಲಸವನ್ನು ಪೌರ ಕಾರ್ಮಿಕರು ಮಾಡುತ್ತಿದ್ದಾರೆ, ಆದರೆ ಅವರ ಆರೋಗ್ಯದಿಂದ ವಂಚಿತರಾಗುತ್ತಿದ್ದಾರೆ ಎಂದು ಹೇಳಿದರು.

ಚಿತ್ರದುರ್ಗ ರಾಜಕಾರಣ : ಎಚ್.ಆಂಜನೇಯ ಕ್ಷೇತ್ರ ಬದಲಾವಣೆ?

ಕೊಳಕು, ದುರ್ವಾಸನೆ, ರೋಗ-ರುಜಿನಗಳ ನಡುವೆಯೇ ಪೌರಕಾರ್ಮಿಕರು ಕೆಲಸ ಮಾಡಬೇಕಿದ್ದು, ಅನಿವಾರ್ಯವಾಗಿ ಮದ್ಯ ಸೇವನೆ ಮಾಡುತ್ತಿದ್ದಾರೆ. ಇದರಿಂದಾಗಿ ರೋಗಗಳಿಗೆ ತುತ್ತಾಗಿ ಬೇಗ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಇದು ವ್ಯವಸ್ಥೆಯ ದುರಂತ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

Nearly 90% of civilian laborers die before retirement

ಪೌರ ಕಾರ್ಮಿಕರ ಆರೋಗ್ಯ ಸುಧಾರಣೆ ಮತ್ತು ಅವರ ಆರ್ಥಿಕ ಸ್ಥಿತಿ ಸುಧಾರಣೆಗೆ ಸರ್ಕಾರ ಹಲವು ಕಾರ್ಯಕ್ರಮಗಳನ್ನು ಹಾಕಿಕೊಂಡಿದೆ. ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮ ಸ್ಥಾಪಿಸಲಾಗಿದೆ. ಸದ್ಯದಲ್ಲೆ ಮುಖ್ಯಮಂತ್ರಿ ಮೂಲಕ ಕಚೇರಿ ಉದ್ಘಾಟನೆ ಮಾಡಿಸಲಾಗುವುದು ಎಂದು ಹೇಳಿದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Social Welfare minister H Anjaneya said nearly 90% civic labours die before their retirement age. He said civic labourers working for people health ironically they didn't getting proper health benefits.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ