ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸಲು ಹೊಸ ರಸ್ತೆ

Posted By:
Subscribe to Oneindia Kannada

ಬೆಂಗಳೂರು, ಜುಲೈ 11 : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸಲು ಮತ್ತೊಂದು ರಸ್ತೆಯನ್ನು ಅಭಿವೃದ್ಧಿ ಪಡಿಸಲು ಸರ್ಕಾರ ಮುಂದಾಗಿದೆ. 31 ಕೋಟಿ ವೆಚ್ಚದಲ್ಲಿ 3 ಕಿ.ಮೀ. ರಸ್ತೆಯನ್ನು ಅಭಿವೃದ್ಧಿಪಡಿಸಲಾಗುತ್ತದೆ.

ಸದ್ಯ, ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸಲು ಇರುವ ಬಳ್ಳಾರಿ ರಸ್ತೆಯಲ್ಲಿ ಸಂಚಾರ ದಟ್ಟಣೆ ಅಧಿಕವಾಗಿದೆ. ದಿನದಿಂದ ದಿನಕ್ಕೆ ವಾಹನಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಆದ್ದರಿಂದ, ನಾಗವಾರ ಜಂಕ್ಷನ್-ಥಣಿಸಂದ್ರ-ಬಾಗಲೂರು ರಸ್ತೆಯನ್ನು ಪರ್ಯಾಯವಾಗಿ ಅಭಿವೃದ್ಧಿ ಮಾಡಲು ಲೋಕೋಪಯೋಗಿ ಇಲಾಖೆ ಮುಂದಾಗಿದೆ. [ವಿಮಾನ ನಿಲ್ದಾಣಕ್ಕೆ ಬಿಎಂಟಿಸಿಯಿಂದ ಹೆಚ್ಚುವರಿ ಬಸ್]

kia

ಸರ್ಕಾರವೂ ಈ ಪ್ರಸ್ತಾವನೆಗೆ ಒಪ್ಪಿಗೆ ಸೂಚಿಸಿದ್ದು 31.50 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲು ಒಪ್ಪಿಗೆ ನೀಡಿದೆ. ಲೋಕೋಪಯೋಗಿ ಇಲಾಖೆ 3 ಕಿ.ಮೀ.ರಸ್ತೆಯನ್ನು ಅಭಿವೃದ್ಧಿಪಡಿಸಲಿದೆ. ಈ ಯೋಜನೆಗೆ 13 ಎಕರೆ ಭೂ ಸ್ವಾಧೀನ ಮಾಡಿಕೊಳ್ಳಬೇಕಿದೆ. [ಬೆಂಗಳೂರು ರಸ್ತೆಗಳಿಗೆ ವೈಟ್ ಟಾಪಿಂಗ್ ಭಾಗ್ಯ]

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನೈಋತ್ಯ ದಿಕ್ಕಿನಲ್ಲಿ ಇನ್ನೊಂದು ಪ್ರವೇಶ ದ್ವಾರ ತೆರೆಯುವ ಪ್ರಸ್ತಾವನೆ ಇದೆ. ನಾಗವಾರ ಜಂಕ್ಷನ್-ಥಣಿಸಂದ್ರ-ಬಾಗಲೂರು ರಸ್ತೆಯನ್ನು ಈ ಪ್ರವೇಶ ದ್ವಾರಕ್ಕೆ ಸಂಪರ್ಕಿಸುವ ಯೋಜನೆಯನ್ನು ತಯಾರಿಸಲಾಗಿದೆ. [ಬೆಂ-ಮೈಸೂರು 6 ಪಥದ ರಸ್ತೆ, ಭೂ ಸ್ವಾಧೀನ ಆರಂಭ]

ಬಳ್ಳಾರಿ ರಸ್ತೆಯಲ್ಲಿ 2015ರಲ್ಲಿ ಸುಮಾರು 1.80 ಕೋಟಿ ವಾಹನಗಳು ಸಂಚಾರ ನಡೆಸಿವೆ. ಈ ವರ್ಷವೂ ವಾಹನಗಳ ಸಂಖ್ಯೆ ಹೆಚ್ಚಾಗಿದೆ. ಇದರಿಂದಾಗಿ ನಿಗದಿತ ಸಮಯದಲ್ಲಿ ವಿಮಾನ ನಿಲ್ದಾಣ ತಲುಪುವುದು ಕಷ್ಟವಾಗಿದೆ. ಆದ್ದರಿಂದ, ಪ್ರತ್ಯೇಕ ರಸ್ತೆ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗಿದೆ.

ಪರ್ಯಾಯ ಮಾರ್ಗ ಅಭಿವೃದ್ಧಿಯ ಪ್ರಸ್ತಾವನೆ ಈಗಾಗಲೇ ಸಿದ್ಧವಾಗಿದೆ. ಶೀಘ್ರದಲ್ಲೇ ಕಾಮಗಾರಿಯನ್ನು ಆರಂಭಿಸಿ, ಆರು ತಿಂಗಳಿನಲ್ಲಿ ಯೋಜನೆಯನ್ನು ಪೂರ್ಣಗೊಳಿಸುವ ಉದ್ದೇಶವನ್ನು ಲೋಕೋಪಯೋಗಿ ಇಲಾಖೆ ಹೊಂದಿದೆ. [ಮಾಹಿತಿ : ಕರ್ನಾಟಕ ವಾರ್ತೆ]

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
Karnataka Public Works Department planning to develop new road to Kempegowda International Airport (KIA) Bengaluru. The new road will connect the airport via Nagavara-Thanisandra-Bagaluru.
Please Wait while comments are loading...