ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸ್ಮಾರ್ಟ್‌ ಸಿಟಿ ಯೋಜನೆ ನೇರ ವೀಕ್ಷಣೆಗೆ ಶೀಘ್ರ ವೆಬ್‌ಸೈಟ್‌

By Nayana
|
Google Oneindia Kannada News

ಬೆಂಗಳೂರು, ಜು.19: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಸ್ಮಾರ್ಟ್‌ ಸಿಟಿ ಯೋಜನೆಯ ರೂಪುರೇಷೆಗಳು ಹಾಗೂ ಯೋಜನೆಯು ಯಾವ ಹಂತದಲ್ಲಿದೆ ಎನ್ನುವುದನ್ನು ಅಧಿಕಾರಿಗಳು ಮಾತ್ರವಲ್ಲದೆ ಸಾರ್ವಜನಿಕರು ಕೂಡ ವೀಕ್ಷಿಸಲು ಅನುವು ಮಾಡಿಕೊಡಲಾಗುತ್ತಿದೆ.

ಹಾಗಾಗಿ ನೂತನವಾಗಿ ಅದಕ್ಕೊಂದು ವೆಬ್‌ಸೈಟ್‌ ತೆರೆಯಲಾಗುತ್ತದೆ. ಯೋಜನೆಗೆ ಕಳೆದ ಸಾಲಿನಲ್ಲಿ ಏಳು ನಗರಗಳು ಆಯ್ಕೆಯಾಗಿದ್ದು, ಈ ಬಾರಿ ಬೆಂಗಳೂರು ಕೂಡ ಸೇರ್ಪಡೆಯಾಗಿದೆ. ಯೋಜನೆ ಅನುಷ್ಠಾನಕ್ಕಾಗಿ ಸ್ಥಳೀಯ ಕಾರ್ಪೊರೇಟರ್‌ ಆರು ಆರು ಸದಸ್ಯರು ಸೇರಿದಂತೆ ಅಲ್ಲಿನ ಅಧಿಕಾರಿಗಳನ್ನೊಳಗೊಂಡ ಸಮಿತಿಯೊಂದನ್ನು ರಚಿಸಲಾಗಿದೆ.

ಹೊಸ ಸ್ಮಾರ್ಟ್ ಸಿಟಿ ಪಟ್ಟಿಯಲ್ಲಿ ನಮ್ಮ ಬೆಂಗಳೂರು ಹೊಸ ಸ್ಮಾರ್ಟ್ ಸಿಟಿ ಪಟ್ಟಿಯಲ್ಲಿ ನಮ್ಮ ಬೆಂಗಳೂರು

ಸಮಿತಿಯು ಪ್ರತಿ ತಿಂಗಳಿಗೊಮ್ಮೆ ಸಭೆ ನಡೆಸಿ ಅಭಿವೃದ್ಧಿ ಕಾಮಗಾರಿಗಳ ಕುರಿತು ಇಲಾಖೆಯ ಕಾರ್ಯದರ್ಶಿಗೆ ಆಯಾ ತಿಂಗಳು ವರದಿ ಸಲ್ಲಿಸಬೇಕು. ತಪ್ಪಿದರೆ ಸಮಿತಿ ಸದಸ್ಯರ ವಿರುದ್ಧ ಕ್ರಮ ಕೈಗೊಳ್ಳಲಾಗವುದು ಎಂದು ಸಚಿವ ಯು.ಟಿ. ಖಾದರ್ ಹೇಳಿದ್ದಾರೆ.

New website for smart city project

ದೇಶದಲ್ಲೇ ಮೊದಲ ಬಾರಿಗೆ ಸ್ಮಾರ್ಟ್ ಸಿಟಿ ಯೋಜನೆಗೆ ಆಯ್ಕೆಯಾಗಿರುವ ರಾಜ್ಯದ ನಗರಗಳಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ನೇರವಾಗಿ ಸಾರ್ವಜನಿಕರು ವೀಕ್ಷಿಸಬಹುದು. ಯೋಜನೆ ಅನುಷ್ಠಾನಗೊಳಿಸಲು ಪ್ರತಿ ಸ್ಮಾರ್ಟ್‌ ಸಿಟಿಗೊಬ್ಬರಂತೆ ವ್ಯವಸ್ಥಾಪಕ ನಿರ್ದೇಶಕರನ್ನು ನಿಯೋಜಿಸಲಾಗುತ್ತದೆ. ಒಟ್ಟು 14,798 ಕೋಟಿ ವೆಚ್ಚದ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.

English summary
Central government is launching new website for smart city project. Through this website citizens can check the status of the project and other details.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X