ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹೊಸ ವರ್ಷ ಆಚರಣೆ: ಬೆಂಗಳೂರಲ್ಲಿ ಪೊಲೀಸರ ಬಂದೋಬಸ್ತ್ ಹೇಗಿದೆ?

|
Google Oneindia Kannada News

ಬೆಂಗಳೂರು, ಡಿಸೆಂಬರ್ 26: ಹೊಸ ವರ್ಷವನ್ನು ಬರಮಾಡಿಕೊಳ್ಳಲು ಇನ್ನೇನು ಕೆಲವೇ ದಿನಗಳು ಬಾಕಿ ಇದೆ. ಆಚರಣೆ ಸಂದರ್ಭದಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಕಟ್ಟೆಚ್ಚರವಹಿಸಿದ್ದಾರೆ.

ಹೊಸ ವರ್ಷ ಸಂಭ್ರಮಾಚರಣೆ ವೇಳೆ ಬಂದೋಬಸ್ತ್ ಸಂಬಂಧ ನಾಲ್ಕೈದು ದಿನಗಳಿಂದ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಯುತ್ತಿದೆ. ಏನಾದರೂ ಅಹಿತಕರ ಘಟನೆಗಳು ನಡೆದರೆ ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳೇ ಹೊಣೆಯಾಗುತ್ತಾರೆ ಎಂಬ ಎಚ್ಚರಿಕೆಯನ್ನು ನಗರ ಪೊಲೀಸ್ ಆಯುಕ್ತ ಟಿ. ಸುನೀಲ್ ಕುಮಾರ್ ನೀಡಿದ್ದಾರೆ.

ಬೆಂಗಳೂರಲ್ಲಿ ಹೊಸ ವರ್ಷಾಚರಣೆ ಬೇಡ: ಪೊಲೀಸ್ ಆಯುಕ್ತರಿಗೆ ಪತ್ರ ಬೆಂಗಳೂರಲ್ಲಿ ಹೊಸ ವರ್ಷಾಚರಣೆ ಬೇಡ: ಪೊಲೀಸ್ ಆಯುಕ್ತರಿಗೆ ಪತ್ರ

800 ಪೊಲೀಸ್ ವಾಹನ

800 ಪೊಲೀಸ್ ವಾಹನ

ಡಿಸೆಂಬರ್ ತಿಂಗಳ ಕೊನೆಯ ದಿನ ನಗರ ವ್ಯಾಪ್ತಿಯಲ್ಲಿ 500 ಹೊಯ್ಸಳ ಹಾಗೂ 300 ಚೀತಾ ಸೇರಿ ಒಟ್ಟು 800 ವಾಹನಗಳಲ್ಲಿ ಪೊಲೀಸರು ಗಸ್ತು ತಿರುಗಲಿದ್ದಾರೆ. ಅಹಿತಕರ ಘಟನೆಗಳು ಸಂಭವಿಸದರೆ ತಕ್ಷಣವೇ ಪೊಲೀಸರ ಸ್ಪಂದಿಸಲಿದ್ದಾರೆ.

ಫ್ಲೈಓರ್, ಎಂಜಿ ರಸ್ತೆ ಪ್ರವೇಶ ನಿಷೇಧ

ಫ್ಲೈಓರ್, ಎಂಜಿ ರಸ್ತೆ ಪ್ರವೇಶ ನಿಷೇಧ

ನಗರದ ಎಲ್ಲಾ ಮೇಲ್ಸೇತುವೆಗಳು ಹಾಗೂ ಎಂಜಿ ರಸ್ತೆ ವ್ಯಾಪ್ತಿ ಡಿಸೆಂಬರ್ 31ರ ಮಧ್ಯಾಹ್ನ 3ರಿಂದ ಜನವರಿ 1ರ ಬೆಳಗ್ಗೆ 6ರವರೆಗೆ ವಾಹನ ಸಂಚಾರವನ್ನು ನಿಷೇಧಿಸಲಾಗುತ್ತದೆ. ಸಂಭ್ರಮಾಚರಣೆ ಮತ್ತಿನಲ್ಲಿ ಕೆಲವರು ಮದ್ಯ ಸೇವಿಸಿ ವಾಹನ ಚಲಾಯಿಸುತ್ತಾರೆ. ಇದರಿಂದ ಮೇಲ್ಸೇತುವೆಗಳಲ್ಲಿ ಅಪಘಾತಕ್ಕೂ ಕಾರಣವಾಗಲಿದೆ. ಇನ್ನು ಕೆಲವು ಕಿಡಿಗೇಡಿಗಳು ಆಚರಣೆ ನೆಪದಲ್ಲಿ ಪಾನಮತ್ತರಾಗಿ ವಾಹನಗಳನ್ನು ಅಡ್ಡಾದಿಡ್ಡಿ ಚಲಾಯಿಸಿ ನಾಗರಿಕರಿಗೆ ತೊಂದರೆ ಕೊಡುವ ಸಾಧ್ಯತೆಗಳಿವೆ.

ಎಂಜಿರಸ್ತೆಯಲ್ಲಿ, ಬ್ರಿಗೇಡ್ ರಸ್ತೆಯಲ್ಲಿ ಪೊಲೀಸರ ಸಂಖ್ಯೆ

ಎಂಜಿರಸ್ತೆಯಲ್ಲಿ, ಬ್ರಿಗೇಡ್ ರಸ್ತೆಯಲ್ಲಿ ಪೊಲೀಸರ ಸಂಖ್ಯೆ

ಸಂಭ್ರಮಾಚರಣೆ ಕೇಂದ್ರ ಬಿಂದುವಾದ ಎಂಜಿ ರಸ್ತೆ, ಬ್ರಿಗೆಡ್ ಹಾಗೂ ಚರ್ಚ್ ಸ್ಟ್ರೀಟ್‌ಗಳ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟು, ಪಶ್ಚಿಮ ವಿಭಾಗದ ಹೆಚ್ಚುವರಿ ಆಯುಕ್ತ ಬಿಕೆಪಿ ಸಿಂಗ್ ನೇತೃತ್ವದಲ್ಲಿ 500 ಮಹಿಳಾ ಸಿಬ್ಬಂದಿ ಸೇರಿ 2 ಸಾವಿರ ಪೊಲೀಸರನ್ನು ನಿಯೋಜನೆಗೊಳ್ಳಲಿದ್ದಾರೆ. 300ಕ್ಕೂ ಹೆಚ್ಚು ಸಿಸಿಟಿವಿ ಅಳವಡಿಸಲಾಗುತ್ತದೆ.

ನಗರಾದ್ಯಂತ ಪೊಲೀಸ್ ಬಂದೋಬಸ್ತ್

ನಗರಾದ್ಯಂತ ಪೊಲೀಸ್ ಬಂದೋಬಸ್ತ್

ಡಿಸೆಂಬರ್ 31ರಂದು ರಾತ್ರಿ ಕಾನ್‌ಸ್ಟೇಬಲ್ ಗಳೂ ಸೇರಿದಂತೆ ನಾಲ್ವರು ಹೆಚ್ಚುವರಿ ಆಯಕ್ತರು, 19 ಡಿಸಿಪಿಗಳು ಸೇರಿದಂತೆ ಸುಮಾರು 15 ಸಾವಿರಕ್ಕೂ ಅಧಿಕ ಪೊಲೀಸರನ್ನು ನೇಮಿಸಲಾಗುತ್ತಿದೆ. ಹಾಗೆಯೇ ನಗರ ಮತ್ತು ರಾಜ್ಯ ಸಶಸ್ತ್ರ ಮೀಸಲು ಪಡೆಗಳು ಸಹ ಬಳಕೆಯಾಗಲಿವೆ.

English summary
After last year’s ‘mass molestation’ at Bengaluru’s Brigade Road and MG Road on New Year’s Eve, the city police will have to take an extra level of precaution this year. Plans are underway to ensure the same incident doesn’t repeat itself.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X