ವೇಶ್ಯಾವಾಟಿಕೆ ದಂಧೆಯಲ್ಲಿ ಸಿಕ್ತು ಕಾರ್ಡ್ ಸ್ವೈಪಿಂಗ್ ಮೆಷಿನ್!

Written By: Ramesh
Subscribe to Oneindia Kannada

ಬೆಂಗಳೂರು, ಡಿಸೆಂಬರ್. 18 : ಐನೂರು ಹಾಗೂ ಸಾವಿರ ಮುಖಬೆಲೆಯ ನೋಟ್ ಬ್ಯಾನ್ ಎಫೆಕ್ಟ್ ವೇಶ್ಯಾವಾಟಿಕೆ ದಂಧೆಗೂ ತಟ್ಟಿದೆ.

ವೇಶ್ಯಾವಾಟಿಕೆ ದಂಧೆ ನಡೆಯುತ್ತಿದ್ದ ಮನೆಯೊಂದರ ಮೇಲೆ ಪರಪ್ಪನ ಅಗ್ರಹಾರ ಪೊಲೀಸರು ದಾಳಿ ನಡೆಸಿದ ವೇಳೆ ಕಾರ್ಡ್ ಸ್ವೈಪಿಂಗ್ ಮೆಷಿನ್ ಪತ್ತೆಯಾಗಿದೆ. ಗಿರಾಕಿಗಳ ಬಳಿ ನಗದು ಕೊರತೆ ಇದ್ದ ಕಾರಣ ಸ್ವೈಪಿಂಗ್ ಮಷಿನ್ ಬಳಸಲಾಗುತ್ತಿತ್ತು ಎನ್ನಲಾಗಿದೆ.

note-ban-effect-swiping-machine-found-at-an-illegal-prostitution-home-in-bengaluru

ಎಲೆಕ್ಟ್ರಾನಿಕ್ ಸಿಟಿಯ ಆನಂದ್ ರೆಡ್ಡಿ ಲೇಔಟ್‍ ನ ಮನೆಯೊಂದರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರಿಗೆ ಪರಪ್ಪನ ಅಗ್ರಹಾರ ಪೊಲೀಸರು ದಾಳಿ ಮಾಡಿದ್ದಾರೆ.

ಉತ್ತರ ಪ್ರದೇಶದ ಅಲ್ಕಾ ಸಿಂಗ್ ಹಾಗೂ ಬೆಂಗಳೂರಿನ ನಹೀಂ ಎನ್ನುವರನ್ನು ಬಂಧಿಸಿ 3 ಸಾವಿರ ರೂ. ನಗದು, ಡೆಬಿಟ್ ಹಾಗೂ ಕ್ರೆಡಿಟ್ ಕಾರ್ಡ್, ಸ್ವೈಪಿಂಗ್ ಮೆಷಿನ್, 5 ಮೊಬೈಲ್ ಫೋನ್ ಹಾಗೂ 2 ದ್ವಿಚಕ್ರವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ದಾಳಿ ವೇಳೆ ಪಶ್ಚಿಮ ಬಂಗಾಳ ಮೂಲದ ಇಬ್ಬರು ಯುವತಿಯರನ್ನು ರಕ್ಷಿಸಿದ್ದಾರೆ. ನಹೀಂ ಎಂಬಾತ ಕೆಲಸ ಕೊಡಿಸುವುದಾಗಿ ಹೇಳಿ ಪಶ್ಚಿಮ ಬಂಗಾಳದಿಂದ ಮಹಿಳೆಯರನ್ನು ಬೆಂಗಳೂರಿಗೆ ಕರೆಸಿ ಅವರಿಗೆ ಹಣದ ಆಮಿಷ ತೋರಿಸಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
Rs 500 and 1000 note ban effect swiping machine found at prostitution home. Parappana agrahara police raided the house at Anand Reddy layout in electronics city 2nd stage Bengaluru on December 17.
Please Wait while comments are loading...