ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಜ್ಯಸಭಾ ಚುನಾವಣೆಗೆ ಅಧಿಸೂಚನೆ ಪ್ರಕಟ

|
Google Oneindia Kannada News

ಬೆಂಗಳೂರು, ಮಾರ್ಚ್ 05: ರಾಜ್ಯದ ನಾಲ್ಕು ರಾಜ್ಯಸಭಾ ಸ್ಥಾನಗಳ ಚುನಾವಣೆಗೆ ಸೋಮವಾರ ಅಧಿಸೂಚನೆ ಹೊರಬಿದ್ದಿದೆ. ಕರ್ನಾಟಕ ವಿಧಾನಸಭೆಯ ಚುನಾಯಿತ ಸದಸ್ಯರಿಂದ ರಾಜ್ಯಸಭೆಗೆ ಆಯ್ಕೆಗೊಂಡ ನಾಲ್ಕು ಸದಸ್ಯರುಗಳು ಏಪ್ರಿಲ್ 2 ರಂದು ನಿವೃತ್ತ ರಾಗಲಿರುವುದರಿಂದ ಅವರ ಸ್ಥಾನಗಳನ್ನು ತುಂಬಲು ರಾಜ್ಯಸಭೆಗೆ ದ್ವೈವಾರ್ಷಿಕ ಚುನಾವಣೆಯನ್ನು ನಡೆಸಲಾಗುತ್ತದೆ.

ಮಾರ್ಚ್ 12 ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿರುತ್ತದೆ. ಮಾರ್ಚ್ 13 ರಂದು ನಾಮಪತ್ರ ಪರಿಶೀಲನೆ, ಮಾರ್ಚ್ 15 ರಂದು ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನ, ಮಾರ್ಚ್ 23 ರಂದು ಮತದಾನ ನಡೆಯಲಿದೆ. ಅಂದು ಬೆಳಗ್ಗೆ 9 ರಿಂದ ಸಂಜೆ 4 ರವರೆಗೆ ಮತದಾನ ನಡೆಯಲಿದೆ. ಮಾರ್ಚ್ 23 ರಂದು ಮತ ಎಣಿಕೆ, ಮಾರ್ಚ್ 26 ರ ಸೋಮವಾರ ಚುನಾವಣೆ ಮುಕ್ತಾಯಗೊಳ್ಳಲಿದೆ.

ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿ ಎ.ಎಸ್. ಮೂರ್ತಿ ಅವರು ಚುನಾವಣಾಧಿಕಾರಿಯಾಗಿ ಹಾಗೂ ಜಂಟಿ ಕಾರ್ಯದರ್ಶಿ ಎಂ.ಎಸ್. ಕುಮಾರಸ್ವಾಮಿ ಸಹಾಯಕ ಚುನಾವಣಾಧಿಕಾರಿಯಾಗಿರುತ್ತಾರೆ. ಚುನಾವಣೆಗೆ ಸ್ಫರ್ಧಿಸಲು ಇಚ್ಛಿಸುವ ಅಭ್ಯರ್ಥಿಗಳು ಮಾರ್ಚ್ 12 ರೊಳಗೆ ಚುನಾವಣಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಬಹುದು.

Notification issued for Rajyasabha poll

ಪ್ರತಿಯೊಬ್ಬ ಅಭ್ಯರ್ಥಿಯು ತಮ್ಮ ನಾಮಪತ್ರದ ದಸ್ತಾವೇಜನ್ನು ನಿಗದಿತ ನಮೂನೆ ೨ಸಿಯಲ್ಲಿ ಸಲ್ಲಿಸಬೇಕು ಮತ್ತು ಅವರ ಉಮೇದುವಾರಿಕೆಗೆ ಸೂಚಕರಾಗಿ, ಕನಿಷ್ಟ ಹತ್ತು ಜನ ಹಾಲಿ ವಿಧಾನಸಭಾ ಚುನಾಯಿತ ಸದಸ್ಯರು ಸಹಿ ಮಾಡಿರಬೇಕು. ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ನಾಮಪತ್ರದೊಂದಿಗೆ 5ಸಾವಿರ ರೂ ಹಾಗೂ ಇತರೆ ಅಭ್ಯರ್ಥಿಗಳು 10 ಸಾವಿರ ಗಳನ್ನು ಠೇವಣಿ ಇಡಬೇಕಾಗುತ್ತದೆ ಎಂದು ತಿಳಿಸಲಾಗಿದೆ.

English summary
Notification for four Rajyasabha seats election from Karnataka state assembly has been issued on Monday. The polling will be held on march 23 at Vidhana Soudha in Bengaluru and 224 legislators will cost the vote.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X