ಅಂತರ್ಜಾಲ ಬಳಸಿರಿ, ಪೊಲೀಸರಿಗೆ ದೂರು ದಾಖಲಿಸಿರಿ
ಬೆಂಗಳೂರು, ನ. 15 : ಬೆಂಗಳೂರಿನಲ್ಲಿ ಪೊಲೀಸರಿಗೆ ಜನರು ಸುಲಭವಾಗಿ ದೂರು ನೀಡಲು ಸಹಾಯಕವಾಗುವ ಬ್ಯಾಂಕ್ ಎಟಿಎಂ ಮಾದರಿಯ ಮೊದಲ 'ಎಫ್ಐಆರ್ ನೊಂದಣಿ ಕೇಂದ್ರ'ವನ್ನು ಆರಂಭಿಸಲಾಗಿದೆ. ಮೂರು ತಿಂಗಳ ಮಟ್ಟಿಗೆ ಪ್ರಾಯೋಗಿಕವಾಗಿ ಇದನ್ನು ಜಾರಿಗೊಳಿಸಲಾಗಿದ್ದು, ಜನರ ಪ್ರತಿಕ್ರಿಯೆ ನಂತರ ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ.
ಮಂತ್ರಿಮಾಲ್ನಲ್ಲಿ ಬೆಂಗಳೂರು ನಗರ ಪೊಲೀಸರು ಹಾಗೂ ಸಿಸ್ಕೊ ಸಂಸ್ಥೆ ಸಹಯೋಗದಲ್ಲಿ ಸ್ಥಾಪಿಸಿರುವ 'ಎಫ್ಐಆರ್ ನೊಂದಣಿ ಕೇಂದ್ರ'ವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಉದ್ಘಾಟಿಸಿದ್ದಾರೆ. ಇದು ದೇಶದಲ್ಲೇ ಮೊದಲ ಕೇಂದ್ರವಾಗಿದ್ದು, ಆರಂಭವಾದ ಮೊದಲ ದಿನವೇ ವಾಹನ ಕಳ್ಳತನದ ಕುರಿತು ಕೇಂದ್ರದಲ್ಲಿ ಪ್ರಕರಣ ದಾಖಲಾಗಿವೆ.

ಪೊಲೀಸ್ ಠಾಣೆಗಳಿಗೆ ದೂರು ನೀಡಲು ಬರುವ ನಾಗರಿಕರನ್ನು ಗೌರವಯುತವಾಗಿ ಠಾಣಾಧಿಕಾರಿಗಳು ನಡೆಸಿಕೊಳ್ಳಬೇಕು. ಜನರಿಂದ ಸಲ್ಲಿಕೆಯಾಗುವ ದೂರುಗಳನ್ನು ಕಡ್ಡಾಯವಾಗಿ ಅಧಿಕಾರಿಗಳು ದಾಖಲು ಮಾಡಿಕೊಂಡು ತನಿಖೆ ನಡೆಸಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.
ಎಫ್ಐಆರ್ ನೊಂದಣಿ ಯೋಜನೆಯಿಂದ ಜನರಿಗೆ ಸಾಕಷ್ಟು ಅನುಕೂಲತೆಗಳಿದ್ದು, ಠಾಣೆಗಳಿಗೆ ದೂರು ಕೊಡಲು ಅಲೆಯುವುದು ತಪ್ಪಲಿದೆ ಎಂದು ಸಿದ್ದರಾಮಯ್ಯ ಹೇಳಿದರು. ಕೇಂದ್ರದ ಮೂಲಕ ಭ್ರಷ್ಟ ಅಧಿಕಾರಿಗಳ ವಿರುದ್ಧ ಜನರು ದೂರು ದಾಖಲಿಸಬಹುದು. ಈ ಕೇಂದ್ರದಲ್ಲಿ 24 ತಾಸು ಕಾರ್ಯನಿರ್ವಹಣೆಗೆ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಸಿಎಂ ಕೇಂದ್ರದ ಬಗ್ಗೆ ಮಾಹಿತಿ ನೀಡಿದರು.

ಆನ್ ಲೈನ್ ಸೇವೆಗೆ ಚಾಲನೆ : ಕಳುವಾಗಿರುವ ವಸ್ತುಗಳ ಬಗ್ಗೆ ಸಾರ್ವಜನಿಕರು ಆನ್ಲೈನ್ ಮೂಲಕವೇ ದೂರು ಸಲ್ಲಿಸಿ, ಸ್ವೀಕೃತಿ ಪತ್ರ ಪಡೆಯುವ ವ್ಯವಸ್ಥೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದ್ದಾರೆ. ಜನರು ಸಿಮ್ಕಾರ್ಡ್, ಚಾಲನಾ ಪರವಾನಗಿ, ಶೈಕ್ಷಣಿಕ ದಾಖಲಾತಿಗಳು, ಪಾಸ್ಪೋರ್ಟ್ ಸೇರಿದಂತೆ ಇನ್ನಿತರ ವಸ್ತುಗಳನ್ನು ಕಳೆದುಕೊಂಡಾಗ, ಅವುಗಳ ನಕಲು ಪ್ರತಿ ಪಡೆಯಲು ಠಾಣೆಯಲ್ಲಿ ಎಫ್ಐಆರ್ ದಾಖಲಿಸಿ ಸ್ವೀಕೃತಿ ಪಡೆಯಬೇಕಾಗುತ್ತದೆ.

ಆದರೆ, ಇಂಥ ದೂರುಗಳನ್ನು ದಾಖಲಿಸಿಕೊಳ್ಳುವಲ್ಲಿ ಸಿಬ್ಬಂದಿ ನಿರ್ಲಕ್ಷ ವಹಿಸುತ್ತಾರೆ ಎಂಬ ಆರೋಪದ ಹಿನ್ನಲೆಯಲ್ಲಿ ಆನ್ಲೈನ್ ಸ್ವೀಕೃತಿ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಈ ಸೇವೆ ಪಡೆಯಲು ಬಯಸುವವರು http://www.bcp.gov.in/home.aspx ವೆಬ್ಸೈಟ್ಗೆ ಭೇಟಿ ನೀಡಿ, ಅಲ್ಲಿ 'Lost Report' ಎಂಬ ಆಯ್ಕೆಯನ್ನು ಒತ್ತಿದಾಗ ವಿವರಗಳು ಲಭ್ಯವಾಗುತ್ತವೆ.
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Samarth Shamanur: ದಾವಣಗೆರೆ ಉಪಚುನಾವಣೆ ಕಾಂಗ್ರೆಸ್ ಟಿಕೆಟ್ ಫೈಟ್ ಅಂತ್ಯ: ಶಾಮನೂರು ಕುಟುಂಬದ ಕುಡಿ ಸಮರ್ಥ್ ಕಣಕ್ಕೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ











Click it and Unblock the Notifications