ಭಾರತದ ಅತೀದೊಡ್ಡ ರಾಜಕೀಯ ಸಮೀಕ್ಷೆ. ನೀವು ಭಾಗವಹಿಸಿದ್ದೀರಾ?
 • search

ಫೆಬ್ರವರಿ 16ರಂದು ಕಾವೇರಿ ವಿವಾದದ ಅಂತಿಮ ತೀರ್ಪು

By Manjunatha
Subscribe to Oneindia Kannada
For Quick Alerts
ALLOW NOTIFICATIONS
For Daily Alerts

  ಬೆಂಗಳೂರು, ಫೆಬ್ರವರಿ 15: ಕಾವೇರಿ ನದಿ ನೀರು ಹಂಚಿಕೆ ವಿವಾದ ಕುರಿತ ಸುಪ್ರೀಂಕೋರ್ಟ್‌ನ ಅಂತಿಮ ತೀರ್ಪು ನಾಳೆ (ಫೆ.16) ಅಥವಾ ಫೆಬ್ರವರಿ 23ರೊಳಗೆ ಪ್ರಕಟವಾಗುವ ಸಾಧ್ಯತೆಯಿದೆ.

  ರಾಜ್ಯದ ಕಾನೂನು ಸಚಿವ ಟಿ.ಬಿ.ಜಯಚಂದ್ರ, ನೀರಾವರಿ ಸಚಿವ ಎಂ.ಬಿ.ಪಾಟೀಲ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರುಗಳೇ ಈ ವಿಷಯ ಸ್ಪಷ್ಟಪಡಿಸಿದ್ದು, ಕಾವೇರಿ ತೀರ್ಪು ಫೆಬ್ರವರಿ 23ರೊಳಗೆ ಹೊರಬೀಳಲಿದೆ ಎಂದಿದ್ದಾರೆ.

  ಕಾವೇರಿ ತೀರ್ಪಿನ ಹಿನ್ನೆಲೆ: ಮೈಸೂರಿನಾದ್ಯಂತ ಬಿಗಿ ಬಂದೋಬಸ್ತ್

  ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನೀರಾವರಿ ಸಚಿವ ಎಂ.ಬಿ.ಪಾಟೀಲ್ ಫೆ.23ರೊಳಗೆ ಕಾವೇರಿ ವಿವಾದದ ಕುರಿತ ಸುಪ್ರೀಂ ಕೋರ್ಟ್‌ನ ಅಂತಿಮ ತೀರ್ಪು ಹೊರಬೀಳಲಿದ್ದು, ರಾಜ್ಯದ ಪರ ತೀರ್ಪು ಬರುವ ವಿಶ್ವಾಸವಿದೆ ಎಂದಿದ್ದಾರೆ.

  On February 23 Supreme court giving its final verdict on Cauvery issue

  ರಾಜ್ಯದಲ್ಲಿನ ಬರಗಾಲ ಪರಿಸ್ಥಿತಿ, ಕಾವೇರಿ ನದಿ ಪಾತ್ರದ ಕೃಷಿ ಇಳುವರಿ, ಬೆಳೆ ಪದ್ಧತಿಗಳನ್ನು ಪರಿಗಣಿಸಬೇಕಾಗಿ ನಮ್ಮ ವಕೀಲರ ತಂಡ ವಾದ ಸುಪ್ರಿಂನಲ್ಲಿ ಮಂಡಿಸಿದ್ದು, ರಾಜ್ಯದ ಪರವಾದ ತೀರ್ಪು ಬರುವ ವಿಶ್ವಾಸವಿದೆ ಎಂದಿದ್ದಾರೆ.

  ಕಾನೂನು ಸಚಿವ ಟಿ.ಬಿ.ಜಯಚಂದ್ರ ಮಾತನಾಡಿ, ಕಾವೇರಿ ಪ್ರಕರಣದ ವಿಚಾರಣೆ ನಡೆಸುತ್ತಿರುವ ಸುಪ್ರಿಂಕೋರ್ಟ್‌ ನ ವಿಭಾಗೀಯ ಪೀಠದ ನ್ಯಾಯಮೂರ್ತಿಯೊಬ್ಬರು ನಿವೃತ್ತಿ ಆಗುತ್ತಿದ್ದು, ಫೆಬ್ರವರಿ 23ರಂದು ಅಂತಿಮ ತೀರ್ಪು ಬರಲಿದೆ ಎಂದು ಮಾಹಿತಿ ನೀಡಿದ್ದಾರೆ.

  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಇದೇ ವಿಷಯವನ್ನು ಹೇಳಿದ್ದು, ರಾಜ್ಯದ ಪರವಾಗಿಯೇ ತೀರ್ಪು ಬರುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

  ಕಾವೇರಿ ನದಿ ನೀರು ಹಂಚಿಕೆಯ ಕುರಿತು 2007ರ ಹೈಕೋರ್ಟ್ ತೀರ್ಪಿನ ವಿರುದ್ಧ ಕರ್ನಾಟಕ, ತಮಿಳುನಾಡು, ಕೇರಳ ರಾಜ್ಯಗಳು ಮೇಲ್ಮನವಿ ಸಲ್ಲಿಸಿದ್ದು, ಸುಪ್ರಿಂಕೋರ್ಟ್‌ನ ಮುಖ್ಯನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಪೀಠವು ಪ್ರಕರಣದ ವಿಚಾರಣೆ ನಡೆಸಿದ್ದು, ಫೆಬ್ರವರಿ 23ರೊಳಗೆ ತೀರ್ಪು ನೀಡಲಿದೆ.

  ಮಹಾದಾಯಿ ನ್ಯಾಯಾಧಿಕರಣಕ್ಕೆ ಭೇಟಿ

  ನವಲಗುಂದ ಶಾಸಕ ಎನ್‌.ಕೆ.ಕೋನರೆಡ್ಡಿ ಅವರು ಮಹದಾಯಿ ನ್ಯಾಯಾಧಿಕರಣದ ಕಲಾಪದಲ್ಲಿ ಭಾಗವಹಿಸಿ ಕಲಾಪ ವೀಕ್ಷಿಸಿದರು. ರಾಜ್ಯದ ಪರ ಮಹದಾಯಿ ನ್ಯಾಯಾಧಿಕರಣದಲ್ಲಿ ವಕಾಲತ್ ವಹಿಸಿರುವ ಮೋಹನ್ ಕಾತರ್ಕಿ ಮತ್ತು ಸೋಮಪ್ಪನೂರ್ ಅವರನ್ನು ಭೇಟಿ ಮಾಡಿ ಪ್ರಕರಣದ ಗತಿಯ ಬಗ್ಗೆ ಮಹಿತಿ ಪಡೆದರು.

  ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

  English summary
  Supreme Court giving out its final verdict about Cauvery river dispute before February 23. Tamil Nadu, Karnataka and Kerala governments have appealed to supreme Court against the verdict of Cauvery water dispute tribunal.

  Oneindia ಬ್ರೇಕಿಂಗ್ ನ್ಯೂಸ್,
  ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

  X
  We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more