ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಂಗಶಂಕರದಲ್ಲಿ ಹೆಣ್ಣೊಬ್ಬಳ ಸಲಿಂಗ ಪ್ರೇಮ ಕುರಿತ ನಾಟಕ

By Mahesh
|
Google Oneindia Kannada News

ಬೆಂಗಳೂರು, ಮಾರ್ಚ್ 01: ಒಂದು ಪ್ರೀತಿಯ ಕಥೆ, ಸಲಿಂಗ ಪ್ರೀತಿ ಮತ್ತು ಈ ಪ್ರೇಮಿಗಳ ಜೀವನದಲ್ಲಿ ಸಮಾಜ ಸೃಷ್ಟಿಸುವ ತಲ್ಲಣಗಳ ಕಥೆ. 1982ರಲ್ಲಿ ವಿಜಯ್ ತೆಂಡೂಲ್ಕರ್ ಅವರು ರಚಿಸಿದ 'ಮಿತ್ರಾಚಿ ಗೋಶ್ಟ್' ನಾಟಕವನ್ನು ವೆಂಕಟೇಶ್ ಪ್ರಸಾದ್ 'ಒಂದು ಪ್ರೀತಿಯ ಕಥೆ' ಎಂಬ ಹೆಸರಿನೊಂದಿಗೆ ಕನ್ನಡಕ್ಕೆ ರೂಪಾಂತರಿಸಿ ನಿರ್ದೇಶಿಸಿದ್ದಾರೆ. ಈ ನಾಟಕ ಮತ್ತೊಮ್ಮೆ ಮಾರ್ಚ್ 02 ಹಾಗೂ 03ರಂದು ರಂಗಶಂಕರದಲ್ಲಿ ಪ್ರದರ್ಶನವಾಗುತ್ತಿದೆ.

ಸಲಿಂಗ ಕಾಮ ವೈಯಕ್ತಿಕ ಆಯ್ಕೆಯಲ್ಲ. ನೈಸರ್ಗಿಕವಾಗಿಯೇ ಈ ರೀತಿಯ ಆಸಕ್ತಿಗಳು ಮೂಡುತ್ತವೆ ಎಂದು ವೈದ್ಯಕೀಯ ವಿಜ್ಞಾನ ತಿಳಿಸುತ್ತದೆ. ಪ್ರಾಣಿಗಳಲ್ಲಿಯೂ ಈ ಬಗೆಯ ಸಂಬಂಧಗಳನ್ನು ಕಾಣಬಹುದು. ಸಲಿಂಗವು ಅಸಾಮಾನ್ಯ ಪ್ರವೃತ್ತಿಯಲ್ಲ. ಗಂಡು ಹೆಣ್ಣಿನ ಪ್ರೀತಿ ಹೇಗೆ ಸಾಗುತ್ತದೆಯೋ ಹಾಗೆಯೇ ಇಬ್ಬರು ಹೆಣ್ಣು ಮಕ್ಕಳ ಪ್ರೇಮವನ್ನೂ ನಾಟಕದಲ್ಲಿ ಹೆಣೆಯಲಾಗಿದೆ.

ಇದು ಅಸಹಜವಲ್ಲ ಎನ್ನುವುದನ್ನು ಪ್ರೇಕ್ಷಕರ ಮನಮುಟ್ಟುವಂತೆ ಸಾರುವುದೇ ನಾಟಕದ ಉದ್ದೇಶ. ಗಂಡು ಹೆಣ್ಣಿನ ಪ್ರೇಮಕ್ಕೆ ಎದುರಾಗುವ ಎಲ್ಲ ಅಡೆತಡೆಗಳು ಸಲಿಂಗಿಗಳ ಪ್ರೀತಿಗೂ ಎದುರಾಗುತ್ತವೆ, ಆದರೆ ಸಲಿಂಗ ಕಾಮಿಗಳನ್ನು ಈ ಸಮಾಜ ನೋಡುವ ಬಗೆ ಮತ್ತು ಅವರ ಪ್ರೀತಿಗೆ ಸಮಾಜ ಕೊಡುವ ಅನೈತಿಕತೆಯ ಪಟ್ಟ, ಅದರಿಂದಾಗಿ ಈ ಪ್ರೇಮಿಗಳ ಬದುಕಿನಲ್ಲಾಗುವ ಪರಿಣಾಮಗಳ ಬಗೆಗೆ ನಾಟಕ ಬೆಳಕು ಚೆಲ್ಲುತ್ತದೆ.

ಬೆಂಗಳೂರು ಥಿಯೇಟರ್ ಕಲೆಕ್ಟಿವ್ ಪ್ರಯೋಗ

ಬೆಂಗಳೂರು ಥಿಯೇಟರ್ ಕಲೆಕ್ಟಿವ್ ಪ್ರಯೋಗ

ಸಲಿಂಗಿಗಳ ವಿವಾಹ ವಿಷಯ ಕುರಿತು ರಂಗಪ್ರಯೋಗಗಳಾಗಿದ್ದು ವಿರಳ. ತೃತೀಯ ಲಿಂಗಿಗಳು, ಸಲಿಂಗಿಗಳು ಹಾಗೂ ಲೈಂಗಿಕ ಅಲ್ಪಸಂಖ್ಯಾತರನ್ನು ಮುಖ್ಯವಾಹಿನಿಯ ಕಲಾ ಪ್ರಕಾರಗಳಲ್ಲಿ ಹಾಸ್ಯದ ವಸ್ತುವಾಗಿ ಬಳಸಿಕೊಂಡಿದ್ದೇ ಹೆಚ್ಚು. ಇಲ್ಲವೇ ಅವರನ್ನು ವ್ಯವಸ್ಥೆಯ ಬಲಿಪಶುಗಳು ಎನ್ನುವಂತೆ ಬಿಂಬಿಸಲಾಗುತ್ತದೆ.

ಆದರೆ, ಈ ಎರಡೂ ಸಿದ್ಧ ಮಾದರಿಯ ಸಾಧ್ಯತೆಗಳಾಚೆ ಸಲಿಂಗ ವಿವಾಹ ಹಾಗೂ ಸಲಿಂಗ ಪ್ರೀತಿ ಅತಿ ಸಹಜವಾದುದು ಎನ್ನುವುದನ್ನು ಗಟ್ಟಿಯಾದ ನಿಲುವಿನೊಂದಿಗೆ ಪ್ರತಿಪಾದಿಸಲು ಬೆಂಗಳೂರು ಥಿಯೇಟರ್ ಕಲೆಕ್ಟಿವ್' ಈ ಪ್ರಯೋಗದ ಮೂಲಕ ಪ್ರಯತ್ನ ಪಡುತ್ತಿದೆ.

ಪೂರ್ವಾಗ್ರಹಗಳು ಜನರಲ್ಲಿ ಗಟ್ಟಿಯಾಗಿ ಬೇರೂರಿವೆ

ಪೂರ್ವಾಗ್ರಹಗಳು ಜನರಲ್ಲಿ ಗಟ್ಟಿಯಾಗಿ ಬೇರೂರಿವೆ

ಈ ನಾಟಕ ರಚನೆಯಾದದ್ದು 1980ರ ದಶಕದಲ್ಲಿ. ಅಂದಿನ ದಿನಗಳಿಗೂ, ಇಂದಿನ ಪರಿಸ್ಥಿತಿಗೂ ಸಲಿಂಗಿಗಳ ಕುರಿತು ನಮ್ಮ ಸಮಾಜ ಹೊಂದಿರುವ ಮನಸ್ಥಿತಿಯಲ್ಲಿ ಬಹುದೊಡ್ಡ ಬದಲಾವಣೆಗಳಾಗಿಲ್ಲ. ಲೈಂಗಿಕ ಅಲ್ಪಸಂಖ್ಯಾತರ ಕುರಿತು ಜನರು ಹೊಂದಿರುವ ಪೂರ್ವಾಗ್ರಹಗಳು ಜನರಲ್ಲಿ ಗಟ್ಟಿಯಾಗಿ ಬೇರೂರಿವೆ. ಸಲಿಂಗ ವಿವಾಹವಾಗುವವರು ಅಸಾಮಾನ್ಯರು, ಅಸಹಜರು ಎನ್ನುವ ಧೋರಣೆಯನ್ನು ತೊಲಗಿಸುವ ನಿಟ್ಟಿನಲ್ಲಿ ರಂಗತಂಡ ಕಾರ್ಯಪ್ರವೃತ್ತವಾಗಿದೆ

ಕಲೆಗಳಲ್ಲಿ ಹಾಸ್ಯಕ್ಕೆ ಬಳಸಿಕೊಳ್ಳುವುದು

ಕಲೆಗಳಲ್ಲಿ ಹಾಸ್ಯಕ್ಕೆ ಬಳಸಿಕೊಳ್ಳುವುದು

ಲೈಂಗಿಕ ಅಲ್ಪಸಂಖ್ಯಾತರನ್ನು ಕಲೆಗಳಲ್ಲಿ ಹಾಸ್ಯಕ್ಕೆ ಬಳಸಿಕೊಳ್ಳುವುದು ಅಥವಾ ಅವರ ಸಮಸ್ಯೆಗಳನ್ನು ವೈಭವೀಕರಿಸುವುದು, ಅಲ್ಲದೆ ವೀಕ್ಷಕರಿಂದ ಕಣ್ಣೀರು ಹಾಕಿಸಿ, ಸಮಾಜದಲ್ಲಿ ಸಲಿಂಗಿಗಳು ಸಹಜವಾಗಿ ಬದುಕಲು ಸಾಕಷ್ಟು ಶ್ರಮಪಡಬೇಕಾಗುತ್ತದೆ ಎಂಬುದನ್ನು ತಿಳಿಸುವುದು ಸರಿಯಲ್ಲ. ಇದರಿಂದ ಸಲಿಂಗಿಗಳನ್ನು ನೋಡುವ ಸಮಾಜದ ದೃಷ್ಟಿಕೋನದಲ್ಲಿ ಯಾವುದೇ ಬದಲಾವಣೆಗಳಾಗುವುದಿಲ್ಲ. ಹಾಗಾಗಿ ಈ ನಾಟಕದ ನಿರೂಪಣೆಯನ್ನು ಸಹಜವಾಗಿ ಕಟ್ಟಲಾಗಿದೆ.

ನವಿರಾದ ಪ್ರೀತಿಯ ಕಥೆ

ನವಿರಾದ ಪ್ರೀತಿಯ ಕಥೆ

ಇದು ಸಮಸ್ಯೆಯ ವೈಭವೀಕರಣವಲ್ಲ. ನವಿರಾದ ಪ್ರೀತಿಯ ಕಥೆ - ಒಂದು ಪ್ರೀತಿಯ ಕಥೆ
ನಾಟಕ : ಒಂದು ಪ್ರೀತಿಯ ಕಥೆ..!
ಮರಾಠಿ ಮೂಲ : ವಿಜಯ್ ತೆಂಡೂಲ್ಕರ್ ರ 'ಮಿತ್ರಾಚಿ ಗೋಶ್ಟ್'
ನಿರ್ದೇಶನ : ವೆಂಕಟೇಶ್ ಪ್ರಸಾದ್
ಸಹ ನಿರ್ದೇಶನ : ಉಜ್ವಲ ರಾವ್
ಮಾರ್ಚ್ 02 ಮತ್ತು 03 | ರಂಗ ಶಂಕರ | ಮಧ್ಯಾಹ್ನ 3.30 ಹಾಗೂ ಸಂಜೆ 7:30 | 150/- ಟಿಕೆಟ್‍ಗಳು ರಂಗ ಶಂಕರದಲ್ಲಿ ದೊರೆಯುತ್ತವೆ.

ಮೈಸೂರಿನ ಇಂಜಿನೀಯರ್ ಕಾಲೇಜೊಂದರದಲ್ಲಿ ನಡೆದಿರಬಹುದಾದ ಈ ಕಥೆ ಗಂಡು-ಹೆಣ್ಣಿನ ಮಧ್ಯೆ ಇರುವ ಪ್ರೀತಿ ಎಷ್ಟು ಸಹಜವೋ, ಅಷ್ಟೇ ಸಹಜವಾಗಿ ಹೆಣ್ಣು ಮತ್ತೊಂದು ಹೆಣ್ಣಿನ ಮೇಲೆ ತೋರುವ ಪ್ರೀತಿಯನ್ನು ಪ್ರತಿಫಲಿಸುತ್ತದೆ. ಸಲಿಂಗ ಪ್ರೀತಿ ಪ್ರಕೃತಿಗೆ ವಿರುದ್ದವಾದುದು, ಅಸಹಜವಾದುದು ಎನ್ನುವ ಪೂರ್ವಾಗ್ರಹವನ್ನು ತೊಲಗಿಸುವ ನಿಟ್ಟಿನಲ್ಲಿ ಈ ನಾಟಕ ಪ್ರಯೋಗಿಸಲಾಗುತ್ತಿದೆ.

English summary
Ondu Preetiya Kathe, Kannada Play based on Vijay Tendulkars 'A Friends Story' talks about a love story between two women. The intriguing play is set in a college and is a stark commentary on love. The play directed by Venkatesh Prasad will be staged at Ranga Shankara, Bengaluru on March 02 and 03.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X