ಅಕ್ಟೋಬರ್ನಲ್ಲಿ ಈರುಳ್ಳಿ ಬೆಲೆ 100 ರೂಪಾಯಿ!
ಬೆಂಗಳೂರು, ಜೂ.19: ಈರುಳ್ಳಿ ಬೆಲೆ ಮತ್ತೊಮ್ಮೆ ಏರಿಕೆಯಾಗಲಿದ್ದು ಅಕ್ಟೋಬರ್ ವೇಳೆಗೆ ಒಂದುಕೆ.ಜಿ ಈರುಳ್ಳಿ ಬೆಲೆ ನೂರು ರೂಪಾಯಿಗೆ ತಲುಪುವ ಸಾಧ್ಯತೆಯಿದೆ ಎಂದು ಮಾರುಕಟ್ಟೆ ಪಂಡಿತರು ವಿಶ್ಲೇಷಿಸಿದ್ದಾರೆ.
ದೇಶದಲ್ಲಿ ಕಳೆದ ಅಕ್ಟೋಬರ್ನಲ್ಲಿ ಈರುಳ್ಳಿ ಬೆಲೆ ಕೆ.ಜಿಗೆ 100 ರೂಪಾಯಿ ಗಡಿ ದಾಟಿತ್ತು. ಈ ಬಾರಿಯೂ ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ಹೆಚ್ಚಳವಾಗಲಿದೆ ಎನ್ನುವುದನ್ನು ಮನಗಂಡಿರುವ ಕೇಂದ್ರ ಸರ್ಕಾರ ಎಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.
ಈರುಳ್ಳಿ ಬೆಲೆ ಏರಿಕೆಯನ್ನು ತಡೆಯುವ ಸಲುವಾಗಿ ಕೇಂದ್ರ ಸರ್ಕಾರ ಇದೀಗ ಕನಿಷ್ಠ ರಫ್ತು ದರ (ಎಮ್ಇಪಿ) ನಿಗದಿ ಮಾಡಿದೆ. ಈ ದರ ಪ್ರಕಾರ ಪ್ರತಿ ಟನ್ ಈರುಳ್ಳಿಗೆ 300 ಡಾಲರ್ (ಅಂದಾಜು 18 ಸಾವಿರ ರೂ) ನಿಗದಿ ಮಾಡಿದೆ. ಒಂದು ವೇಳೆ ರಫ್ತು ಮಾಡುವ ವೇಳೆ ಈ ದರ ಸಿಗದಿದ್ದರೆ, ಈರುಳ್ಳಿಯನ್ನು ದೇಶೀಯ ಮಾರುಕಟ್ಟೆಯಲ್ಲಿ ಮಾರಾಟ ಮಾಡಬೇಕಾಗುತ್ತದೆ. ಹೀಗಾಗಿ ಈರುಳ್ಳಿ ಬೆಲೆ ನಿಯಂತ್ರಣಕ್ಕೆ ಬರಬಹುದು ಎನ್ನುವ ಲೆಕ್ಕಾಚಾರ ಸರ್ಕಾರದ್ದು.[ಕಳೆದ ಬಾರಿ ಈರುಳ್ಳಿ ಬೆಲೆ ಏರಿಕೆಯಾಗಿದ್ದು ಹೇಗೆ?]
ಸರ್ಕಾರ ಎಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದರೂ ಈರುಳ್ಳಿ ಬೆಲೆ ಈ ವರ್ಷವು ಜಾಸ್ತಿಯಾಗಲಿದೆ. ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶಲ್ಲಿ ಈರುಳ್ಳಿಯನ್ನು ಹೆಚ್ಚು ಬೆಳೆಯಲಾಗುತ್ತಿದ್ದು 2013-14ರಲ್ಲಿ 192 ಟನ್ ಈರುಳ್ಳಿ ಉತ್ಪಾದನೆಯಾಗಿತ್ತು.

ಮಾರ್ಚ್ ನಿಂದ ಮೇವರೆಗೆ ಬೇಸಿಗೆಯಲ್ಲಿ ಬಿದ್ದ ಅಕಾಲಿಕ ಮಳೆಯಿಂದಾಗಿ ಬೇಸಿಗೆ ಬೆಳೆ ಅಥವಾ ರಬಿ ಕ್ರಾಪ್ ಹಾಳಾಗಿದೆ. ದೇಶದ ಶೇ.50ರಷ್ಟು ಭಾಗ ಈರುಳ್ಳಿಯ ಬೇಸಿಗೆ ಬೆಳೆಯನ್ನು ಅವಲಂಬಿಸಿದೆ.
ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಈರುಳ್ಳಿ ಬಿತ್ತನೆ ಬೀಜದ ಬೆಲೆ ಶೇ.400 ರಷ್ಟು ಏರಿಕೆಯಾಗಿದೆ. ಹೀಗಾಗಿ ದೇಶದಲ್ಲಿ ಬಹಳಷ್ಟು ಈರುಳ್ಳಿ ಬೆಳೆಯುವ ರೈತರು ಬೀಜ ಬಿತ್ತನೆಯನ್ನು ಮಾಡಿಲ್ಲ. ಜೊತೆಗೆ ಈಗ ಮಾನ್ಸೂನ್ ಅಭಾವದಿಂದಾಗಿ ಈರುಳ್ಳಿ ಉತ್ಪಾದನೆ ಕಡಿಮೆಯಾಗಬಹುದು ಎಂದು ಹೇಳಲಾಗುತ್ತಿದೆ.
ಈ ಮಧ್ಯೆ ಇರಾಕ್ನಲ್ಲಿ ನಡೆಯುತ್ತಿರುವ ಕಲಹದಿಂದಾಗಿ ಡಿಸೇಲ್ ಬೆಲೆ ಹೆಚ್ಚಳವಾಗುವ ಸಾಧ್ಯತೆಯಿದೆ. ಒಂದು ವೇಳೆ ಹೀಗೆ ಏನಾದರೂ ಆದಲ್ಲಿ ಈರುಳ್ಳಿ ಬೆಲೆ ಮತ್ತಷ್ಟು ಏರಲಿದೆ.[ಇರಾಕ್ ಮರಣಮೃದಂಗ: ಅಪಹೃತ 39 ಭಾರತೀಯರ ಹತ್ಯೆ?]
"ಕಳೆದ ಮೂರು ದಿನಗಳ ಹಿಂದೆ 15 - 20 ರೂಪಾಯಿ ಇದ್ದ ಈರುಳ್ಳಿ ಬೆಲೆ ಈಗ 25-30 ರೂಪಾಯಿಗೆ ತಲುಪಿದೆ. ಸದ್ಯದಲ್ಲೇ ಬೆಲೆ ಹೆಚ್ಚಾಗಲಿದೆ. ಈರುಳ್ಳಿ ಬೆಳೆಯುವ ರಾಜ್ಯದಿಂದಲೇ ಸರಿಯಾಗಿ ಈರುಳ್ಳಿ ವಿತರಣೆ ಆಗುತ್ತಿಲ್ಲ"
ಅಬ್ದುಲ್ ಹಾಜಿಂ, ಕೆ.ಆರ್.ಮಾರುಕಟ್ಟೆ ಈರುಳ್ಳಿ ವಾಪಾರಸ್ಥರು.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications