ಬೆಂಗಳೂರಿನಲ್ಲಿರುವ ದೀಪಿಕಾ ಪಡುಕೋಣೆ ಕುಟುಂಬಕ್ಕೆ ಪೊಲೀಸ್ ಬಿಗಿ ಭದ್ರತೆ

Posted By:
Subscribe to Oneindia Kannada

ಬೆಂಗಳೂರು, ನವೆಂಬರ್ 21 : ಪದ್ಮಾವತಿ ಚಿತ್ರದ ವಿವಾದದ ಹಿನ್ನಲೆಯಲ್ಲಿ ಬಾಲಿವುಡ್ ನ ಖ್ಯಾತ ನಟಿ ದೀಪಿಕಾ ಪಡುಕೋಣೆ ಅವರಿಗೆ ಬೆದರಿಕೆ ಇರುವುದರಿಂದ ಬೆಂಗಳೂರಿನಲ್ಲಿರುವ ಅವರ ಕುಟುಂಬಕ್ಕೆ ರಕ್ಷಣೆ ಒದಗಿಸಿದೆ.

ಕರ್ಣಿ ಸೇನಾ ಏಟಿಗೆ ಡಿ.1 ಬಿಟ್ಟು ಮುಂದೆ ಓಡಿದ 'ಪದ್ಮಾವತಿ'

ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರ ಸೂಚನೆ ಮೇರೆಗೆ ದೀಪಿಕಾ ಕುಟುಂಬ ವಾಸವಿರುವ ಬೆಂಗಳೂರಿನ ಜೆ.ಸಿ.ನಗರದ ನಂದಿದುರ್ಗ ರಸ್ತೆಯಲ್ಲಿರುವ 'ವುಡ್ಸ್ ವೇಲ್' ಅಪಾರ್ಟ್ ಮೆಂಟ್‌ ಗೆ ಪೊಲೀಸರು ಬಿಗಿ ಭದ್ರತೆ ಒದಗಿಸಿದ್ದಾರೆ.

Padmavati row: Security deployed at Deepika’s family home in Bengaluru

ಸಂಜಯ್‌ ಲೀಲಾ ಬನ್ಸಾಲಿ ನಿರ್ದೇಶನದ ಪದ್ಮಾವತಿ ಚಿತ್ರದ ಮುಖ್ಯ ಪಾತ್ರ ನಿರ್ವಹಿಸಿರುವ ದೀಪಿಕಾ ಪಡುಕೋಣೆ ಅವರ ಶಿರಚ್ಛೇದ ಹಾಗೂ ಮೂಗು ಕತ್ತರಿಸುವ ಬೆದರಿಕೆಗಳನ್ನು ರಜಪೂತ್ ಕರ್ಣಿ ಸೇನೆ ಬೆದರಿಕೆ ಹಾಕಿದೆ.

ಈ ಹಿನ್ನೆಯಲ್ಲಿ ಮುಂಜಾಗ್ರತ ಕ್ರಮವಾಗಿ ಬೆಂಗಳೂರಿನಲ್ಲಿ ನೆಲೆಸಿರುವ ದೀಪಿಕಾ ಕುಟುಂಬಕ್ಕೆ ಪೊಲೀಸ್‌ ಭದ್ರತೆ ಒದಗಿಸಲಾಗಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
A day after the Bharatiya Janata Party’s chief media coordinator for Haryana offered a reward to anyone who beheads Deepika Padukone for her role in the film Padmavati, the Congress government in Karnataka—the actor’s home State — has provided round-the-the-clock security at her family home here in Bengaluru.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ