ಪಾರ್ವತಮ್ಮ ರಾಜ್ ಕುಮಾರ್ ಅವರಿಗೆ ಶುಭ ಹಾರೈಸಿದ ಸಿದ್ದರಾಮಯ್ಯ

Posted By:
Subscribe to Oneindia Kannada

ಬೆಂಗಳೂರು, ಮೇ 16: ಹಿರಿಯ ನಿರ್ಮಾಪಕಿ, ಡಾ.ರಾಜ್ ಕುಮಾರ್ ಅವರ ಪತ್ನಿ ಪಾರ್ವತಮ್ಮ ರಾಜ್ ಕುಮಾರ್ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದು, ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ಭೇಟಿ ನೀಡಿ, ಶ್ರೀಘ್ರವೇ ಗುಣಮುಖರಾಗುವಂತೆ ಶುಭ ಹಾರೈಸಿದರು.

ಸಿಎಂ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ತೆರಳಿ ಪಾರ್ವತಮ್ಮ ಅವರ ಆರೋಗ್ಯ ವಿಚಾರಿಸಿದ್ದಾರೆ. ಈ ವೇಳೆ ನಟ ಪುನೀತ್ ರಾಜ್ ಕುಮಾರ್ ಸಿಎಂಗೆ ಪಾರ್ವತಮ್ಮ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದಾರೆ.

CM Siddaramaiah tweets about Producer Parvathamma Rajkumar hospitalized

ಈಗಾಗಲೇ ಪಾರ್ವತಮ್ಮ ಅವರನ್ನು ವಿವಿಧ ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದೆ. ವರದಿ ಬಂದ ನಂತರ ಡಿಸ್ಜಾರ್ಜ್ ಮಾಡುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದೆಂದು ವೈದ್ಯರು ತಿಳಿಸಿದ್ದಾರೆ.

ಈ ಹಿಂದೆ ಮಾರ್ಚ್ 7 ರಂದು ಪಾರ್ವತಮ್ಮ ಅವರು ಅನಾರೋಗ್ಯದ ಹಿನ್ನಲೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದರು. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಪಾರ್ವತಮ್ಮ ರಾಜ್ ಕುಮಾರ್ ಅವರಿಗೆ ಕಿಮೋಥೆರಪಿ ಮೂಲಕ ಕಾಯಿಲೆಯನ್ನು ಗುಣಮುಖಗೊಳಿಸಲಾಗಿದೆ ಎಂದು ವೈದ್ಯರು ಇದೇ ಸಂದರ್ಭದಲ್ಲಿ ಹೇಳಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
CM Siddaramaiah today(May 16) visited MS Ramaiah Hospital and wished speedy recovery to Kannada Producer Parvathamma Rajkumar
Please Wait while comments are loading...