ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜಿಲ್ಲೆ, ತಾಲೂಕು ಕೇಂದ್ರಗಳಲ್ಲೂ ಟ್ರಾಫಿಕ್ ನಿಯಮ ಉಲ್ಲಂಘಿಸಿದರೆ ದಂಡ

|
Google Oneindia Kannada News

ಬೆಂಗಳೂರು, ಮಾರ್ಚ್ 31: ಜಿಲ್ಲೆ ಹಾಗೂ ತಾಲೂಕು ಕೇಂದ್ರಗಳಲ್ಲಿಯೂ ಬೆಂಗಳೂರು ಮಾದರಿಯಲ್ಲಿ ಸಂಚಾರ ನಿಯಮ ಉಲ್ಲಂಘಿಸುವವರಿಗೆ ದಂಡ ವಿಧಿಸಲಾಗುತ್ತದೆ.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಚುನಾವಣೆಯ ಮುಖ್ಯ ದಿನಾಂಕಗಳು

ಇನ್ನುಮುಂದೆ ಅಡ್ಡಾದಿಡ್ಡಿ ವಾಹನ ಚಾಲನೆ, ಹೆಲ್ಮೆಟ್ ಇಲ್ಲದೆ ವಾಹನ ಓಡಿಸುವುದು, ಮನಬಂದಂತೆ ಸಂಚಾರ ನಿಯಮ ಉಲ್ಲಂಘಿಸಿದರೆ ಮುಲಾಜಿಲ್ಲದೆ ದಂಡ ಕಟ್ಟಬೇಕಾಗುತ್ತದೆ. ರಾಜ್ಯದ ಜನರಲ್ಲಿ ಸಂಚಾರ ಶಿಸ್ತು ಮೂಡಿಸಲು ಮುಂದಾಗಿರುವ ಸಂಚಾರ ಮತ್ತು ಅಪರಾಧ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.ಎ. ಸಲೀಂ ಅವರು, ಸಂಚಾರ ಉಲ್ಲಂಘಿಸುವವರ ವಿರುದ್ಧ ದಂಡ ಪ್ರಯೋಗಿಸುವಂತೆ ಪೊಲೀಸರಿಗೆ ಕಟ್ಟುನಿಟ್ಟಾಗಿ ಸೂಚಿಸಿದ್ದಾರೆ.

ಟ್ರಾಫಿಕ್ ಪೊಲೀಸರ ಕೈಗೆ ಹೊಸ ಮೊಬೈಲ್, ನಿಯಮ ಉಲ್ಲಂಘನೆ ಅಸಾಧ್ಯಟ್ರಾಫಿಕ್ ಪೊಲೀಸರ ಕೈಗೆ ಹೊಸ ಮೊಬೈಲ್, ನಿಯಮ ಉಲ್ಲಂಘನೆ ಅಸಾಧ್ಯ

ಈ ವಿಶೇಷ ಕಾರ್ಯಾಚರಣೆಯಣೆ ಸಂಬಂಧ ಹೊರ ಜಿಲ್ಲೆಗಳ ಸಿಬ್ಬಂದಿಯನ್ನು ಬೆಂಗಳೂರಿಗೆ ಕರೆಸಿ ಅವರಿಗೆ ವಿಶೇಷ ತರಬೇತಿ ನೀಡಲಾಗಿದ್ದು, ರಾಜ್ಯದ ಎಲ್ಲ 114 ಸಂಚಾರ ಠಾಣೆಗಳಿಗೂ ಬೆಂಗಳೂರು ಸಂಚಾರ ಪೊಲೀಸರು ಬಳಸುವ ಆಧುನಿಕ ಸಾಧನೆಗಳನ್ನು ವಿತರಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Penalty impose on traffic violations in taluk and district places too

ರಾಜ್ಯದಲ್ಲಿ 114 ಸಂಚಾರ ಪೊಲೀಸ್ ಠಾಣೆಗಳಿವೆ. ಈ ಪೈಕಿ 44 ಠಾಣೆಗಳು ಬೆಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿದೆ. ಇನ್ನುಳಿದ 70 ಠಾಣೆಗಳಿಗೂ ಹೆಚ್ಚಿನ ಆದ್ಯತೆ ನೀಡಿ, ಸಂಚಾರ ನಿಯಮಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಮೊದಲ ಹಂತವಾಗಿ ಎಲ್ಲ ಸಂಚಾರ ಠಾಣೆಗಳ ಅಯ್ದ ಸಿಬ್ಬಂದಿಗೆ ಸಂಚಾರ ನಿಯಮಗಳ ಜಾರಿ ಬಗ್ಗೆ ವಿಶೇಷ ತರಬೇತಿ ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

English summary
Traffic violations in taluk and district head quarters will be streamlined soon, says ADGP traffic and safety, AM Saleem. He has issued an order to all 114 traffic police stations in the state to impose penalty on traffic violations as per the rules in all taluk and district places.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X