ರಾಜ್ಯದ ಜನ ನಮ್ಮ ಮೇಲೆ ವಿಶ್ವಾಸ ಇಟ್ಟಿದ್ದಾರೆ - ಸಿದ್ದರಾಮಯ್ಯ

Subscribe to Oneindia Kannada

ಬೆಂಗಳೂರು, ಮೇ 19: "ನಮ್ಮ ಸರ್ಕಾರದ ವಿರುದ್ಧ ಯಾವುದೇ ಅಭಿಪ್ರಾಯಗಳೂ ಇಲ್ಲ. ರಾಜ್ಯದ ಜನ ನಮ್ಮ ಮೇಲೆ ವಿಶ್ವಾಸ ಇಟ್ಟಿದ್ದಾರೆ. ಇತ್ತೀಚೆಗೆ ನಡೆದ ಎರಡು ಉಪಚುನಾವಣೆಯಲ್ಲಿ ದೊಡ್ಡ ಅಂತರದಿಂದ ನಾವು ಗೆದ್ದಿರುವುದೇ ಇದಕ್ಕೆ ಸಾಕ್ಷಿ," ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನಾಲ್ಕು ವರ್ಷಗಳನ್ನು ಪೂರೈಸಿದ ಹಿನ್ನಲೆಯಲ್ಲಿ ಬೆಂಗಳೂರು ಪ್ರೆಸ್ ಕ್ಲಬ್ ಮತ್ತು ವರದಿಗಾರರ ಕೂಟದಿಂದ ಆಯೋಜಿಸಿದ್ದ ಬೆಂಗಳೂರು ಮಾಧ್ಯಮ ಸಂವಾದದಲ್ಲಿ ಅವರು ಮಾತನಾಡುತ್ತಿದ್ದರು.

People have faith on our government - Siddaramaiah

ನಮ್ಮದು ನುಡಿದಂತೆ ನಡೆದ ಸರ್ಕಾರ. ನಾವು ಚುನಾವಣಾ ಸಂದರ್ಭದಲ್ಲಿ ನೀಡಿದ ಬಹುತೇಕ ಎಲ್ಲಾ ಭರವಸೆಯನ್ನೂ ಈಡೇರಿಸಿದ್ದೇವೆ. ನಮ್ಮ ಸರ್ಕಾರದ ವಿರುದ್ಧ ಅಧಿಕಾರ ವಿರೋಧಿ ಅಲೆ ವ್ಯಕ್ತವಾಗಿಲ್ಲ. ಇತ್ತೀಚಿನ ಉಪಚುನಾವಣಾ ಫಲಿತಾಂಶ ಇದನ್ನು ಸ್ಪಷ್ಟಪಡಿಸಿದೆ ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟಿದ್ದಾರೆ.

People have faith on our government - Siddaramaiah

ಈ ಮೂಲಕ ಮುಂದಿನ ಚುನಾವಣೆಯಲ್ಲೂ ನಾವೇ ಅಧಿಕಾರಕ್ಕೆ ಬರಲಿದ್ದೇವೆ ಎಂಬುದನ್ನು ಮುಖ್ಯಮಂತ್ರಿಗಳು ಹೇಳಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
“Still people are supporting us and have faith on our government. Bi election victory is indication of this faith,” said chief minister Siddaramaiah in an interaction with reporters here in Press Club of Bengaluru.
Please Wait while comments are loading...