ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಲ್ಲಿ ಮಲಯಾಳಂ ಫ್ಲೆಕ್ಸ್ ಏಕೆ?: ಹ್ಯಾರಿಸ್ ವಿರುದ್ಧ ಕಿಡಿ

|
Google Oneindia Kannada News

ಬೆಂಗಳೂರು, ಜುಲೈ 8: ಶಾಂತಿನಗರ ವಿಧಾನಸಭೆ ಕ್ಷೇತ್ರದ ಶಾಸಕ ಎನ್.ಎ. ಹ್ಯಾರಿಸ್ ಅವರಿಗೆ ಆಯೋಜಿಸಿದ್ದ ಅಭಿನಂದನಾ ಸಮಾರಂಭದ ಫಲಕದಲ್ಲಿ ಮಲಯಾಳಂ ಭಾಷೆಯಲ್ಲಿ ಬರೆದಿದ್ದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ವಿರೋಧ ವ್ಯಕ್ತವಾಗಿದೆ.

ಮಲಬಾರ್ ಮುಸ್ಲಿಂ ಅಸೋಸಿಯೇಷನ್ (ಎಂಎಂಎ) ಶನಿವಾರ ನಗರದ ಪುರಭವನದಲ್ಲಿ ಎನ್‌.ಎ. ಹ್ಯಾರಿಸ್ ಅವರಿಗೆ ಅಭಿನಂದನಾ ಸಮಾರಂಭವನ್ನು ಆಯೋಜಿಸಿತ್ತು.

ಬೆಂಗಳೂರು: ಏರ್‌ಪೋರ್ಟ್‌ ಬಳಿ ರಾಜಕಾಲುವೆ ಒತ್ತುವರಿ ತೆರವುಗೊಳಿಸಿದ ಡಿಸಿಬೆಂಗಳೂರು: ಏರ್‌ಪೋರ್ಟ್‌ ಬಳಿ ರಾಜಕಾಲುವೆ ಒತ್ತುವರಿ ತೆರವುಗೊಳಿಸಿದ ಡಿಸಿ

ಕಾರ್ಯಕ್ರಮಕ್ಕೆ ಸ್ವಾಗತ ಕೋರುವ ಸಲುವಾಗಿ ಪುರಭವನದ ಮುಂಭಾಗದಲ್ಲಿ ಬೃಹತ್ ಫ್ಲೆಕ್ಸ್ ಅಳವಡಿಸಲಾಗಿತ್ತು.

People on social media slams MLA Harris for Malayalam flex

ಆ ಫ್ಲೆಕ್ಸ್‌ನಲ್ಲಿ 'ಶಾಂತಿನಗರದ ಜನಪ್ರಿಯ ಶಾಸಕರಾದ ಎನ್‌.ಎ. ಹ್ಯಾರಿಸ್ ಅವರಿಗೆ ಅಭಿನಂದನಾ ಸಮಾರಂಭ' ಎಂದು ಕನ್ನಡದಲ್ಲಿ ಬರೆಯಲಾಗಿತ್ತು. ಆದರೆ, ಅದರ ಕೆಳಭಾಗದಲ್ಲಿ ದೊಡ್ಡ ಗಾತ್ರದ ಅಕ್ಷರದಲ್ಲಿ ಮಲಯಾಳಂ ಭಾಷೆಯಲ್ಲಿ ಮುದ್ರಿಸಲಾಗಿತ್ತು.

ಇದಕ್ಕೆ ಕನ್ನಡಿಗರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಕರ್ನಾಟಕದಲ್ಲಿ ಅನಗತ್ಯವಾಗಿ ಮಲಯಾಳಂ ಭಾಷೆಯನ್ನು ಬಳಸಿದ್ದರ ಔಚಿತ್ಯವೇನು ಎಂದು ಪ್ರಶ್ನಿಸಿದ್ದಾರೆ.

ಆಯ್ಕೆಯಾಗಿರುವುದು ಕರ್ನಾಟಕದಲ್ಲಿಯಾದರೂ ಹ್ಯಾರಿಸ್ ಅವರ ಮಲಯಾಳಂ ಪ್ರೀತಿ ಹೆಚ್ಚಿದೆ ಎಂದು ಅನೇಕರು ವ್ಯಂಗ್ಯವಾಡಿದ್ದಾರೆ.

ಈ ಹಿಂದೆಯೂ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಮಲಯಾಳಂ ಭಾಷೆಯಲ್ಲಿ ಅವರು ಕರಪತ್ರಗಳನ್ನು ಹಂಚಿದ್ದರು ಎಂದು ಆಕ್ರೋಶ ವ್ಯಕ್ತವಾಗಿತ್ತು.

English summary
A program was held on Saturday in Bengaluru Pura Bhavan to facilitate MLA NA Harris. People criticised using Malayalam in the flex along with Kannada
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X