ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಲ್ಟಿಪ್ಲೆಕ್ಸ್ ಗಳಲ್ಲಿ ವಸೂಲಿ: ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 24: ಇತ್ತೀಚೆಗಷ್ಟೇ ಮುಂಬೈನ ಮಲ್ಟಿಪ್ಲೆಕ್ಸ್ ಗಳಲ್ಲಿ ಹೊರಗಿನ ತಿಂಡಿಗಳನ್ನು ತೆಗೆದುಕೊಂಡು ಹೋಗಲು ಮುಂಬೈ ಹೈಕೋರ್ಟ್ ಆದೇಶ ಕೊಟ್ಟಿತ್ತಲ್ಲದೇ ಮಲ್ಟಿಪ್ಲೆಕ್ಸ್ ಗಳಲ್ಲಿ ಮಾರಾಟವಾಗುವ ತಿಂಡಿತಿನಿಸುಗಳ ಮೇಲೆ ಯಾವುದೇ ರೀತಿಯ ಹೆಚ್ಚಿನ ದರ ವಿಧಿಸದಂತೆ ಆದೇಶ ನೀಡಿತ್ತು.

ಇದರ ಬೆನ್ನಲ್ಲೇ ಬೆಂಗಳೂರಿನ ಮಲ್ಟಿಪ್ಲೆಕ್ಸ್ ಗಳಲ್ಲಿ ಮನಬಂದಂತೆ ಹೇರುವ ದರದ ಮೇಲೆ ನಿಗಾ ಇಡುವಂತೆ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ಬೆಂಗಳೂರಿನ ಮಲ್ಟಿಪ್ಲೆಕ್ಸ್ ಗಳಲ್ಲಿ ಕನ್ನಡ ಸಿನಿಮಾಗಳು ಸೇರಿದಂತೆ ಎಲ್ಲಾ ಸಿನಿಮಾಗಳಿಗೆ ಪ್ರವೇಶದ ದರದ ಮೇಲೆ ಈಗಾಗಲೇ ರಾಜ್ಯ ಸರ್ಕಾರ ಹಿಡಿತ ಸಾಧಿಸಿ ಆದೇಶ ಹೊರಡಿಸಿದ್ದರೂ ಪ್ರಯೋಜನಕ್ಕೆ ಬಂದಿಲ್ಲ.

ಮಹಾರಾಷ್ಟ್ರದಲ್ಲಿನ್ನು ಮಲ್ಟಿಪ್ಲೆಕ್ಸ್ ಗಳಿಗೆ ಹೊರಗಿನ ಆಹಾರ ಪ್ರವೇಶ, ಕರ್ನಾಟಕದಲ್ಲಿ? ಮಹಾರಾಷ್ಟ್ರದಲ್ಲಿನ್ನು ಮಲ್ಟಿಪ್ಲೆಕ್ಸ್ ಗಳಿಗೆ ಹೊರಗಿನ ಆಹಾರ ಪ್ರವೇಶ, ಕರ್ನಾಟಕದಲ್ಲಿ?

ಇದೀಗ 10 ಪಟ್ಟು ಹೆಚ್ಚಿನ ದರ ವಿಧಿಸಿ ತಿಂಡಿತಿನಿಸುಗಳ ಮೇಲೆ ಹಣ ವಸೂಲಿ ಮಾಡುವ ಮಲ್ಟಿಪ್ಲೆಕ್ಸ್ ಗಳಿಗೆ ಮೂಗುದಾರ ಹಾಕುವಂತೆ ನಾಗರಿಕರೊಬ್ಬರು ಹೈಕೋರ್ಟ್‌ಗೆ ಮೊರೆ ಹೋಗಿದ್ದಾರೆ.

PIL questioning restrictions on outside food in multiplex

ಗರಿಷ್ಠ ಮಾರಾಟ ಬೆಲೆಗಿಂತ ಹತ್ತು ಪಟ್ಟಿನ ವರೆಗೂ ಆಹಾರ ಪದಾರ್ಥಗಳಿಗೆ ದರ ನಿಗದಿಪಡಿಸಲಾಗಿದೆ. ಗ್ರಾಹಕರು ಹೊರಗಿನಿಂದ ಆಹಾರ ಪದಾರ್ಥಗಳನ್ನು ತೆಗೆದುಕೊಂಡು ಹೋಗುವುದಕ್ಕೂ ನಿರ್ಬಂಧ ವಿಧಿಸಲಾಗಿದೆ.

ಹೊರಗಿನ ಆಹಾರ ಪದಾರ್ಥಗಳನ್ನು ತೆಗೆದುಕೊಂಡು ಹೋಗಬಾರದು ಎಂದು ಯಾವ ಕಾನೂನಿನಲ್ಲೂ ಹೇಳಿಲ್ಲ. ‌ಹೀಗಾಗಿ ಮಲ್ಟಿಪ್ಲೆಕ್ಸ್ ಗಳಲ್ಲಿ ಆಹಾರ ಪದಾರ್ಥಗಳ ದರವನ್ನು ಕಡಿಮೆ ಮಾಡುವ ಸಂಬಂಧ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

 ಟಿಕೆಟ್ ದರದಲ್ಲೂ 'ಬಾಹುಬಲ' ಮೆರೆದ ಬೆಂಗಳೂರು ಮಲ್ಟಿಪ್ಲೆಕ್ಸ್ ಗಳು ಟಿಕೆಟ್ ದರದಲ್ಲೂ 'ಬಾಹುಬಲ' ಮೆರೆದ ಬೆಂಗಳೂರು ಮಲ್ಟಿಪ್ಲೆಕ್ಸ್ ಗಳು

ಈ ವಿಚಾರದಲ್ಲಿ ಕ್ರಮ ಜರುಗಿಸಲು ಕಾನೂನಿನಲ್ಲಿ ಜಿಲ್ಲಾಧಿಕಾರಿಗೆ ಇರುವ ಅಧಿಕಾರವನ್ನು ವಿವರಿಸುವಂತೆ ಅರ್ಜಿದಾರರ ಪರ ವಕೀಲರಿಗೆ ಸೂಚಿಸಿ, ಅ.10ಕ್ಕೆ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ.

English summary
Public interest litigation has been submitted in the high court questioning restrictions on outside food in multiplex of Bengaluru. The PIL sought control on the prices of food.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X