ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪ್ಲಾಸ್ಟಿಕ್ ಬಳಕೆ ಸಂಪೂರ್ಣ ನಿಷೇಧಕ್ಕೆ ಉತ್ಪಾದಕರ ಕೆಂಗಣ್ಣು

By Nayana
|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 1: ಪ್ಲಾಸ್ಟಿಕ್ ಬಳಕೆ ಸಂಪೂರ್ಣವಾಗಿ ನಿಷೇಧಿಸಿರುವ ಸರ್ಕಾರದ ಕ್ರಮವನ್ನು ಪ್ಲಾಸ್ಟಿಕ್ ಉತ್ಪಾದಕರು ವಿರೋಧಿಸಿದ್ದಾರೆ. ನಾಗರೀಕರು ಉಪಯೋಗಿಸುವ ಕೆಲ ವಸ್ತುಗಳನ್ನು ಬಳಸಿಕೊಳ್ಳಲು ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿದ್ದಾರೆ.

ಪ್ಲಾಸ್ಟಿಕ್ ಮೇಲೆ ನೂರಾರು ಉದ್ದಿಮೆಗಳು ಅವಲಂಬಿತವಾಗಿವೆ. ಸಿದ್ಧ ಉಡುಪು, ಪ್ಯಾಕಿಂಗ್ ಸೇರಿದಂತೆ ಎಲ್ಲಾ ಉದ್ದಿಮೆಗಳಿಗೂ ಪ್ಲಾಸ್ಟಿಕ್ ಬೇಕಿದೆ. ಆದರೆ ಸರ್ಕಾರ ಇದನ್ನು ಪರಿಗಣನೆಗೆ ತೆಗೆದುಕೊಂಡಿಲ್ಲ. ಆದರೆ ಸಿದ್ಧೊಡಿಸಿದ ಆಹಾರ ಪ್ಯಾಕ್ ಗಳಲ್ಲಿ ಬಳಕೆಗೆ ಅವಕಾಶ ನೀಡಲಾಗಿದೆ. ಇದು ಸರಿಯಲ್ಲ ಎಂದು ಆರೋಪಿಸಿದರು.

ಪ್ಲಾಸ್ಟಿಕ್ ಉತ್ಪನ್ನ ನಿಗ್ರಹಕ್ಕೆ ಶೇ.5ರಷ್ಟು ಹೆಚ್ಚುವರಿ ತೆರಿಗೆ ಹೇರಲು ಸರ್ಕಾರ ಚಿಂತನೆಪ್ಲಾಸ್ಟಿಕ್ ಉತ್ಪನ್ನ ನಿಗ್ರಹಕ್ಕೆ ಶೇ.5ರಷ್ಟು ಹೆಚ್ಚುವರಿ ತೆರಿಗೆ ಹೇರಲು ಸರ್ಕಾರ ಚಿಂತನೆ

ಪ್ಲಾಸ್ಟಿಕ್ ನಿಷೇಧದ ಹೆಸರಿನಲ್ಲಿ ಬಿಬಿಎಂಪಿ ಅಧಿಕಾರಿಗಳು ಉದ್ಯಮದ ಸಿಬ್ಬಂದಿಗಳಿಗೆ ಕಿರುಕುಳ ನೀಡುತ್ತಿದ್ದಾರೆ.ಕೆಲವೊಂದು ಉತ್ಪನ್ನಗಳಿಗೆ ವಿನಾಯ್ತಿ ಸಿಕ್ಕಿದ್ದರೂ , ಎಲ್ಲಾ ಬಗೆಯ ಪ್ಲಾಸ್ಟಿಕ್ ನಿಷೇಧ ಮಾಡಲಾಗಿದೆ ಎಂದು ಅಂಗಡಿಗಳ ಬಾಗಿಲು ಹಾಕಿಸುತ್ತಿದ್ದಾರೆ ಎಂದು ರಾಜ್ಯ ಪ್ಲಾಸ್ಟಿಕ್ ಸಂಘದ ಅಧ್ಯಕ್ಷ ವಿ. ವಿಜಯಕುಮಾರ್ ತಿಳಿಸಿದ್ದಾರೆ.

ಕೊಪ್ಪಳದಲ್ಲಿ ನಗರಸಭೆಯಿಂದ ಅಂಗಡಿಗಳ ಮೇಲೆ ದಾಳಿ: 30 ಕೆ.ಜಿ. ಪ್ಲಾಸ್ಟಿಕ್ ವಶಕೊಪ್ಪಳದಲ್ಲಿ ನಗರಸಭೆಯಿಂದ ಅಂಗಡಿಗಳ ಮೇಲೆ ದಾಳಿ: 30 ಕೆ.ಜಿ. ಪ್ಲಾಸ್ಟಿಕ್ ವಶ

Plastic manufacturers oppose ban on plastic usage

50 ಮೈಕ್ರೋ ಗ್ರಾಂಗಿಂತ ಹೆಚ್ಚಿನ ಪ್ರಮಾಣದ ಕ್ಯಾರಿ ಬ್ಯಾಗ್ ಬಳಕೆ ಮಾಡಲು ಅವಕಾಶ, ಸಮಾರಂಭಗಳಲ್ಲಿ ಬಳಸುವ ಪರಿಕರ ಮೇಲಿನ ನಿಷೇಧ ರದ್ದು ಮಾಡಬೇಕು, ಬಾಧಿತ ವಲಯದಲ್ಲಿ ಸರಕು, ಸಾಗಣೆ, ವಿತರಣೆಗೆ ಪ್ಲಾಸ್ಟಿಕ್ ಬಳಕೆ ಮಾಡಬೇಕಿದೆ.

ಸರ್ಕಾರಿ ಕಚೇರಿಯಲ್ಲಿ ಪ್ಲಾಸ್ಟಿಕ್ ಕುಡಿಯುವ ನೀರಿನ ಬಾಟಲ್ ಬಳಕೆ ನಿಷೇಧಸರ್ಕಾರಿ ಕಚೇರಿಯಲ್ಲಿ ಪ್ಲಾಸ್ಟಿಕ್ ಕುಡಿಯುವ ನೀರಿನ ಬಾಟಲ್ ಬಳಕೆ ನಿಷೇಧ

ಎಂಎನ್ ಸಿ ಕಂಪನಿಗಳ ಉತ್ಪನ್ನಕ್ಕೆ ಬಳಸಿರುವ ಪ್ಲ್ಯಾಸ್ಟಿಕ್ ನಿರ್ಬಂಧ ಹೇರಬೇಕು. ನಿತ್ಯ ಎರಡು ಬಾರಿ ಕಸ ವಿಲೇವಾರಿ ಮಾಡಿ ಪ್ಲಾಸ್ಟಿಕ್ ಹಾವಳಿಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದ್ದಾರೆ.

English summary
Plastic manufacturers have strongly opposed total ban on plastic things in the state and urged the state government to allow usage of carry bags of more than 50 microns.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X