ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮತದಾರರ ಚೀಟಿಗೂ ಆಧಾರ್ ನಂಬರ್ ಜೋಡಣೆ?

|
Google Oneindia Kannada News

ನವದೆಹಲಿ, ಆ.10 : ಶೀಘ್ರದಲ್ಲೇ ಮತದಾರರ ಗುರುತಿನ ಚೀಟಿಯನ್ನು ಆಧಾರ್ ಸಂಖ್ಯೆಯೊಂದಿಗೆ ಜೋಡಿಸಬೇಕಾಗಬಹುದು. ಹೌದು, ಚುನಾವಣಾ ಆಯೋಗ ಈ ಕುರಿತು ಚಿಂತನೆ ನಡೆಸುತ್ತಿದೆ.

ಚುನಾವಣಾ ಗುರುತಿನ ಚೀಟಿ ಜೊತೆ ಆಧಾರ್ ನಂಬರ್ ಜೋಡಿಸಲು ಅನುಮತಿ ನೀಡಬೇಕು ಎಂದು ಚುನಾವಣಾ ಆಯೋಗ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ಆಯೋಗದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, 'ಪಡಿತರ ಹಂಚಿಕೆ ಹೊರತುಪಡಿಸಿ ಬೇರೆ ಯಾವುದೇ ಉದ್ದೇಶಕ್ಕೆ ಆಧಾರ್ ನಂಬರ್ ಉಪಯೋಗಿಸಬಾರದು' ಎಂದು ಮಧ್ಯಂತರ ತೀರ್ಪು ನೀಡಿದೆ.

You may have to link Aadhaar number to your voter ID

'ಕೇಂದ್ರ ಚುನಾವಣಾ ಆಯೋಗ ಆಧಾರ್ ಮತ್ತು ಮತದಾರರ ಗುರುತಿನ ಚೀಟಿ ಜೋಡಿಸುವ ಕುರಿತು ಚಿಂತನೆ ನಡೆಸುತ್ತಿದೆ. ಸೂಕ್ತ ಸಮಯದಲ್ಲಿ ಈ ಕುರಿತ ನಿರ್ಧಾರ ಪ್ರಕಟಿಸಲಾಗುತ್ತದೆ' ಎಂದು ಬುಧವಾರ ಮಾಹಿತಿ ಮತ್ತು ತಂತ್ರಜ್ಞಾನ ಖಾತೆ ರಾಜ್ಯಸಚಿವ ಪಿ.ಪಿ.ಚೌಧರಿ ಸಂಸತ್ತಿಗೆ ತಿಳಿಸಿದ್ದಾರೆ.

ಈಗಾಗಲೇ ಕೇಂದ್ರ ಸರ್ಕಾರ ಆದಾಯ ತೆರಿಗೆ ಪಾವತಿ ಮಾಡಲು, ಸಬ್ಸಿಡಿ ಪಡೆಯಲು, ಪ್ಯಾನ್ ಕಾರ್ಡ್‌ಗೆ ಆಧಾರ್ ನಂಬರ್ ಜೋಡಿಸುವುದನ್ನು ಕಡ್ಡಾಯಗೊಳಿಸಿದೆ. ಭೂಮಿ ಖರೀದಿ ಮತ್ತು ಡ್ರೈವಿಂಗ್ ಲೈಸೆನ್ಸ್ ಪಡೆಯಲು ಆಧಾರ್ ಕಡ್ಡಾಯಗೊಳಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.

English summary
The Election Commission of India is considering linking Aadhaar number to voter identification card. The government has already made Aadhaar compulsory for PAN, filing income tax returns online and subsidies.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X