ಜಾತಿ ಗಣತಿಯಲ್ಲಿ ಸರಿಯಾದ ಮಾಹಿತಿ ಕೊಡಿ
ಬೆಂಗಳೂರು, ಡಿ. 1: ರಾಜ್ಯದಲ್ಲಿ 81 ವರ್ಷಗಳ ನಂತರ ಜಾತಿ ಗಣತಿ ನಡೆಯುತ್ತಿದೆ. ಎಲ್ಲ ಜಾತಿ, ವರ್ಗಗಳ ಜನರು ಗಣತಿ ಸಂದರ್ಭದಲ್ಲಿ ಸೂಕ್ತ ಮಾಹಿತಿ ನೀಡಿ ಸಹಕರಿಸಬೇಕೆಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್. ಆಂಜನೇಯ ಮನವಿ ಮಾಡಿದ್ದಾರೆ.
ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಜಾತಿ ಸಮೀಕ್ಷೆ ಕುರಿತು ಸಾಹಿತಿಗಳು, ಚಿಂತಕರು, ಕಲಾವಿದರೊಂದಿಗೆ ಸೋಮವಾರ ಏರ್ಪಡಿಸಿದ್ದ ಸಮಾಲೋಚನೆ ಸಭೆಯ ನಂತರ ಪತ್ರಕರ್ತರೊಂದಿಗೆ ಸಚಿವರು ಮಾತನಾಡಿದರು. [ಜಾತಿ ಗಣತಿಗೆ ಬರ್ತಾರೆ ಚಿತ್ರ ನಟರು]
ನಿಖರ ಮಾಹಿತಿ ನೀಡಿದರೆ ಹಿಂದುಳಿದ ವರ್ಗಗಳಿಗೆ ಸರ್ಕಾರದ ಸೌಲಭ್ಯ ಒದಗಿಸಲು ಸಾಧ್ಯವಾಗಲಿದೆ. ಆದ್ದರಿಂದ ಎಲ್ಲ ಸಮುದಾಯಗಳ ಜನರು ಮಾಹಿತಿ ಒದಗಿಸಬೇಕು. ಗಣತಿ ಕುರಿತು ಜಾಗೃತಿ ಮೂಡಿಸಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮೂಲಕ ಪ್ರಚಾರಾಂದೋಲನ ಏರ್ಪಡಿಸಲಾಗುವುದು ಎಂದು ತಿಳಿಸಿದರು. [ಜಾತಿ ಸಮೀಕ್ಷೆಗೆ ಸರ್ಕಾರ ಸಮ್ಮತಿ]

ಒಂದು ದಿನದ ಕಾರ್ಯಾಗಾರ: ಶೀಘ್ರ ಜಿಲ್ಲಾ ಉಸ್ತುವಾರಿ ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಮಹಾನಗರ ಪಾಲಿಕೆಗಳ ಆಯುಕ್ತರಿಗೆ ಒಂದು ದಿನದ ಕಾರ್ಯಾಗಾರ ಏರ್ಪಡಿಸಲಾಗುವುದೆಂದು ತಿಳಿಸಿದರು. [ಜಾತಿ ಮೀಸಲಾತಿ ನಿಷೇಧ ಅಸಾಧ್ಯ, ಏಕೆಂದರೆ?]
ಸಮೀಕ್ಷೆ ಕಾರ್ಯಕ್ಕೆ ಶಿಕ್ಷಕರನ್ನು ಬಳಸಿಕೊಳ್ಳುವುದಿಲ್ಲ. ಕಂದಾಯ ಇಲಾಖೆ ಸಿಬ್ಬಂದಿ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರ ಸೇವೆಯನ್ನು ಬಳಸಿಕೊಳ್ಳಲಾಗುವುದು. ಗಣತಿಗಾಗಿ 1.2 ಲಕ್ಷ ಸಿಬ್ಬಂದಿ ಅಗತ್ಯ. ಈಗಾಗಲೇ 60 ಸಾವಿರ ಜನರನ್ನು ನೇಮಕ ಮಾಡಿಕೊಂಡು ತರಬೇತಿ ನೀಡಲಾಗುತ್ತಿದೆ ಎಂದು ವಿವರಿಸಿದರು. [ಬ್ರಾಹ್ಮಣ, ವೈಶ್ಯರಿಗೂ ಮೀಸಲಾತಿ]
ಸಭೆಯಲ್ಲಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕಾಂತರಾಜ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಚಂದ್ರಶೇಖರ ಕಂಬಾರ, ನಾಡೋಜ ಹಂ.ಪ. ನಾಗರಾಜಯ್ಯ, ಸಂಗೀತ ನಿರ್ದೇಶಕ ಹಂಸಲೇಖಾ, ಸಾಹಿತಿ ಡಾ. ಸಿದ್ದಲಿಂಗಯ್ಯ, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಎಸ್.ವಿ. ರಾಜೇಂದ್ರಸಿಂಗ್‍ಬಾಬು, ಜಿ.ಕೆ. ಸತ್ಯ, ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ದ್ವಾರಕಾನಾಥ್, ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷ ಬಿ.ಕೆ. ರವಿ, ದೇವರಾಜ ಅರಸು ಅಭಿವೃದ್ಧಿ ನಿಗಮದ ಅಧ್ಯಕ್ಷ ರಾಮಚಂದ್ರಪ್ಪ, ಕನ್ನಡ ಮತ್ತು ಸಂಸ್ಕೃತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ದೇಶಕ ಎನ್.ಆರ್. ವಿಶುಕುಮಾರ್ ಇತರರು ಪಾಲ್ಗೊಂಡಿದ್ದರು.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ












Click it and Unblock the Notifications