ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರೌಡಿ ವಾಸಿಮ್ ಮೇಲೆ ಪೊಲೀಸರ ಗುಂಡಿನ ದಾಳಿ,ಮತ್ತಿತರೆ ಕ್ರೈಂ ಸುದ್ದಿಗಳು

|
Google Oneindia Kannada News

ಬೆಂಗಳೂರು, ಡಿಸೆಂಬರ್ 18: ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ ರೌಡಿ ಶೀಟರ್ ವಾಸಿಮ ಮೇಲೆ ಜ್ಞಾನಭಾರತಿ ಪೊಲೀಸರು ಮಂಗಳವಾರ ಗುಂಡಿನ ದಾಳಿ ನಡೆಸಿದ್ದಾರೆ.ವಾಸಿಮ್ ಮೇಲೆ ಒಟ್ಟು 8 ಪ್ರಕರಣಗಳು ದಾಖಲಾಗಿತ್ತು.

2 ಕೊಲೆ, 3 ಕೊಲೆ ಯತ್ನ, 2 ಡಕಾಯಿತಿ, 1 ದರೋಡೆ ಪ್ರಕರಣಗಳು ದಾಖಲಾಗಿವೆ. ಜಬಿ ಉಳ್ಳಾಲ ಕೊಲೆ ಪ್ರಕರಣದಲ್ಲೂ ಈತ ಪ್ರಮುಖ ಆರೋಪಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

 ಪೇದೆಗೆ ಚಾಕು ಇರಿತ: ಆರೋಪಿಗಳ ಮೇಲೆ ಪೊಲೀಸ್ ಫೈರಿಂಗ್ ಪೇದೆಗೆ ಚಾಕು ಇರಿತ: ಆರೋಪಿಗಳ ಮೇಲೆ ಪೊಲೀಸ್ ಫೈರಿಂಗ್

ಬ್ಯಾಟರಾಯನಪುರ ಪೊಲೀಸ್ ಇನ್‌ಸ್ಪೆಕ್ಟರ್ ವೀರೇಂದ್ರ ಪ್ರಸಾದ್ ಅವರ ನೇತೃತ್ವದಲ್ಲಿ ದಾಳಿ ನಡೆದಿದ್ದು, ಘಟನೆಯಲ್ಲಿ ಪಿಎಸ್ ಹರೀಶ್ ಗಾಯಗೊಂಡಿದ್ದಾರೆ. ಅವರನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ದಾಖಲಾಗಿದೆ.

ಪೇದೆಗೆ ಚಾಕು ಇರಿತ: ಆರೋಪಿಗಳ ಮೇಲೆ ಪೈರಿಂಗ್

ಪೇದೆಗೆ ಚಾಕು ಇರಿತ: ಆರೋಪಿಗಳ ಮೇಲೆ ಪೈರಿಂಗ್

ಪೊಲೀಸರ ಮೇಲೆ ಹಲ್ಲೆ ಮಾಡಿದ ಆರೋಪಿಗಳ ಮೇಲೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಬೆಂಗಳೂರಿನ ಕೊಡತಿ ಬಸ್‌ ನಿಲ್ದಾಣದ ಬಳಿ ಸೋಮವಾರ ನಡೆದಿದೆ. ಯುವತಿಯೋರ್ವಳ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳ ಶೋಧಕಾರ್ಯದಲ್ಲಿ ತೊಡಗಿದ್ದರು, ಸಂದರ್ಭದಲ್ಲಿ ಆರೋಪಿಗಳು ಪೇದೆ ಮಹಂತೇಶ್ ಗೆ ಚಾಕುವಿನಿಂದ ಇರಿದಿದ್ದಾರೆ. ಸಂದರ್ಭದಲ್ಲಿ ಆತ್ಮರಕ್ಷಣೆಗಾಗಿ ಪೊಲೀಸರು ಆರೋಪಿಗಳ ಮೇಲೆ ಗುಂಡು ಹಾರಿಸಿದ್ದಾರೆ.

ರೌಡಿ ಶೀಟರ್ ರೂಪೇಶ್ ಮೇಲೆ ಪೊಲೀಸ್ ಫೈರಿಂಗ್

ರೌಡಿ ಶೀಟರ್ ರೂಪೇಶ್ ಮೇಲೆ ಪೊಲೀಸ್ ಫೈರಿಂಗ್

ರೌಡಿ ಶೀಟರ್ ರೂಪೇಶ್ ಅಲಿಯಾಸ್ ನಿರ್ಮಲ ಮೇಲೆ ಮಾರ್ಚ್ 28ರಂದು ಕಾಟನ್ ಪೇಟೆ ಬಳಿ ಪೊಲೀಸರು ಫೈರಿಂಗ್ ನಡೆಸಿದ್ದರು. ರೂಪೇಶ್ ಮೇಲೆ ಹಲವಾರು ಪ್ರಕಣಗಳು ದಾಖಲಾಗಿತ್ತು. 3 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ, ಪೊಲೀಸರು ಆತನನ್ನು ಹಲವಾರು ಪ್ರಕರಣಗಳಿಗೆ ಸಂಬಂಧಿಸಿದಂತೆ ಶೋಧ ನಡೆಸುತ್ತಿದ್ದರು, ಆತಮ ಕೋರ್ಟಿಗೂ ಹಾಜರಾಗದೆ ತಲೆ ಮರೆಸಿಕೊಂಡಿದ್ದ, ಬುಧವಾರ ಬೆಳಗ್ಗೆ ಪೊಲೀಸ್ ಕೈಗೆ ಸಿಕ್ಕಿಬಿದ್ದಿದ್ದಾನೆ. ಆತನನ್ನು ಬಂಧಿಸಲು ಯತ್ನಿಸಿದ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದ.

ರೌಡಿ ಶೀಟರ್ ರೂಪೇಶ್ ಮೇಲೆ ಪೊಲೀಸರ ಫೈರಿಂಗ್ ರೌಡಿ ಶೀಟರ್ ರೂಪೇಶ್ ಮೇಲೆ ಪೊಲೀಸರ ಫೈರಿಂಗ್

ಕುಖ್ಯಾತ ಕ್ರಿಮಿನಲ್ ಮುರಳೀಧರನ್ ಮೇಲೆ ಪೊಲೀಸರಿಂದ ಗುಂಡಿನ ದಾಳಿ

ಕುಖ್ಯಾತ ಕ್ರಿಮಿನಲ್ ಮುರಳೀಧರನ್ ಮೇಲೆ ಪೊಲೀಸರಿಂದ ಗುಂಡಿನ ದಾಳಿ

ಪೊಲೀಸರಿಗೆ ಚಾಕುವಿನಿಂದ ಇರಿದು ಪರಾರಿಯಾಗಲು ಯತ್ನಿಸುತ್ತಿದ್ದ ಆರೋಪಿ ಮುರಳೀಧರನ್ ಮೇಲೆ ಬೈಯಪ್ಪನಹಳ್ಳಿ ಪೊಲೀಸರು ಗುಂಡು ಹಾರಿಸಿದ್ದರು. 34 ಕೇಸುಗಳಲ್ಲಿ ಭಾಗಿಯಾಗಿದ್ದ ಮುರಳೀಧರನ್ ಹಲವಾರು ದಿನಗಳಿಂದ ತಲೆಮರೆಸಿಕೊಂಡಿದ್ದ, ಆತನಿದ್ದ ಖಚಿತ ಮಾಹಿತಿಯೊಂದಿಗೆ ಪೊಲೀಸರು ಆ ಜಾಗಕ್ಕೆ ಧಾವಿಸಿದ್ದರು. ಬೈಯಪ್ಪನಹಳ್ಳಿ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ರಮೇಶ್ ಹಾಗೂ ಸಿಬ್ಬಂದಿಗಳು ಬುಧವಾರ ರಾತ್ರಿ ಕತ್ತಳಿಪಾಳ್ಯ ಮುಖ್ಯರಸ್ತೆಯಲ್ಲಿ ವಾಹನ ತಪಾಸಣೆ ಮಾಡುತ್ತಿದ್ದರು.

ಬೆಳಗಿನ ಜಾವ ಸುಮಾರು 3.30ರ ವೇಳೆ ಮೋಹನ್ ಹೋಂಡಾ ಆಕ್ಟೀವಾದಲ್ಲಿ ವೇಗವಾಗಿ ಹೋಗುತ್ತಿದ್ದಾಗ ಆರೋಪಿಯನ್ನು ತಡೆದು ನಿಲ್ಲಿಸಿ ಶರಣಾಗುವಂತೆ ಸೂಚಿಸಿದಾಗ ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ. ಬಳಿಕ ಪೊಲೀಸರು ತಮ್ಮ ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ್ದರು.

ರೌಡಿ ಶೀಟರ್‌ ರವಿ ಮೇಲೆ ಸಿಸಿಬಿ ಪೊಲೀಸರಿಂದ ಗುಂಡಿನ ದಾಳಿ

ರೌಡಿ ಶೀಟರ್‌ ರವಿ ಮೇಲೆ ಸಿಸಿಬಿ ಪೊಲೀಸರಿಂದ ಗುಂಡಿನ ದಾಳಿ

ಹಲವಾರು ಕೊಲೆ ಪ್ರಕರಣಗಳಲ್ಲಿ ಭಣಾಗಿಯಾಗಿದ್ದ ರೌಡಿ ಸೀಟರ್‌ ಸೈಕಲ್‌ ರವಿ ಮೇಲೆ ಸಿಸಿಬಿ ಪೊಲೀಸರು ಗುಂಡಿನ ದಾಳಿ ನಡೆಸಿದ್ದರು.

ಕೆಂಗೇರಿ ಬಳಿ ನೈಸ್‌ ರಸ್ತೆಯಲ್ಲಿ ಸೈಕಲ್ ರವಿ ಇರುವ ಮಾಹಿತಿ ಪಡೆದ ಸಿಸಿಬಿ ಪೊಲೀಸರು ದಾಳಿ ನಡೆಸಿದಾಗ ಮಾರಕಾಸ್ತ್ರಗಳಿಂದ ಪೊಲೀಸರ ಮೇಲೆ ಆತ ಹಾಗೂ ಆತನ ಸಹಚರರು ದಾಳಿ ನಡೆಸಿದರು ಎನ್ನಲಾಗಿದೆ. ಆದ್ದರಿಂದ ಆತ್ಮರಕ್ಷಣೆಗಾಗಿ ರವಿ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದರು.

ಸೈಕಲ್‌ ರವಿ 6 ಕೊಲೆ,, 4 ಕೊಲೆ ಯತ್ನ ಪ್ರಕರಣದಲ್ಲಿ ಭಾಗಿಯಾಗಿದ್ದ, ನಗರದ ಹಲವು ಪೊಲೀಸ್‌ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದವು. ಗಾಯಾಳುವ ರವಿಯನ್ನು ನಗರದ ಆರ್‌ಆರ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು.

 ಇಸ್ಪೀಟ್ ಕ್ಲಬ್‌ ಮೇಲೆ ದಾಳಿ:23 ಮಂದಿ ಬಂಧನ

ಇಸ್ಪೀಟ್ ಕ್ಲಬ್‌ ಮೇಲೆ ದಾಳಿ:23 ಮಂದಿ ಬಂಧನ

ಸಿಸಿಬಿ ಪೊಲೀಸರು ಇಸ್ಪೀಟ್ ಕ್ಲಬ್‌ ಮೇಲೆ ದಾಳಿ ನಡೆಸಿ 23 ಮಂದಿಯನ್ನು ಬಂಧಿಸಿದ್ದಾರೆ. ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ನ್ಯೂ ಬಿಇಎಲ್ ರಸ್ತೆ, ಚಿಕ್ಕಮಾರನಹಳ್ಳಿ ಯ ಸಾಯಿ ಚಿರಾಗ್ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ದಾಳ ನಡೆಸಿ 29 ಮಂದಿಯನ್ನು ಬಂಧಿಸಿದ್ದಾರೆ. ಅವರ ಬಳಿ 71,220 ಸಾವಿರ ರೂ ನಗದನ್ನು ವಶಪಡಿಸಿಕೊಳ್ಳಲಾಗಿದೆ. ಬೆಂಗಳೂರು ನಗರ ಹೆಚ್ಚುವರಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಮಾರ್ಗದರ್ಶನದಲ್ಲಿ ದಾಳಿ ನಡೆದಿದೆ.

English summary
Police have opened firing on rowdy sheeter Wasim at Jnanabharati police station limits on Tuesday.who was involved in several murder cases
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X