ಪೊಲೀಸರು ಕ್ರಿಮಿನಲ್ ಚಟುವಟಿಕೆಯಲ್ಲಿ ಭಾಗಿಯಾದರೆ ಕಠಿಣ ಶಿಕ್ಷೆ

Posted By:
Subscribe to Oneindia Kannada

ಬೆಂಗಳೂರು, ಡಿಸೆಂಬರ್ 7: ಕ್ರಿಮಿನಲ್ ಚಟುವಟಿಕೆಗಳಲ್ಲಿ ಭಾಗಿಯಾಗುವ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಗೃಹ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಮುಖ್ಯಮಂತ್ರಿಯವರು, ನೋಟು ಬದಲಾವಣೆ, ರಿಯಲ್ ಎಸ್ಟೇಟ್ ನಂತಹ ದಂಧೆಗಳಲ್ಲಿ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳೇ ಭಾಗಿಯಾಗುತ್ತಿರುವ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.[ಸಿಎಂರಿಂದ ಬಂಪರ್ ಕೊಡುಗೆ: 11 ಸಾವಿರ ಪೊಲೀಸರಿಗೆ ಬಡ್ತಿ]

police were involved in criminal activities, strict punishment: cm

ಕ್ರಿಮಿನಲ್ ಚಟುವಟಿಕೆಗಳಲ್ಲಿ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳು ಭಾಗಿಯಾಗುತ್ತಿರುವ ಕುರಿತು ಮಾಧ್ಯಮಗಳಲ್ಲಿ ನಿತ್ಯ ಸುದ್ದಿಗಳು ಬಿತ್ತರವಾಗುತ್ತಿವೆ. ಇಂತಹ ಪ್ರಕರಣಗಳು ಬೆಂಗಳೂರು ನಗರದಲ್ಲಿ ಹೆಚ್ಚಾಗಿ ಕಂಡು ಬರುತ್ತಿವೆ. ಈ ಪ್ರಕರಣಗಳಿಗೆ ಮುಂದಿನ ದಿನಗಳಲ್ಲಿ ಕಡಿವಾಣ ಹಾಕಬೇಕು. ಕ್ರಿಮಿನಲ್ ಚಟುವಟಿಕೆಗಳಲ್ಲಿ ಭಾಗಿಯಾಗುವ ಸಿಬ್ಬಂದಿ ವಿರುದ್ಧ ತಕ್ಷಣ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆದೇಶ ನೀಡಿದರು.[ಪೊಲೀಸರಿಗೆ ಇನ್ನು ಮುಂದೆ ವಾರದ ರಜೆ ಕಡ್ಡಾಯ: ಸಿದ್ದರಾಮಯ್ಯ]

ಕ್ರಿಮಿನಲ್ ಪ್ರಕರಣಗಳಲ್ಲಿ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳು ಭಾಗಿಯಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿ. ತಪ್ಪಿತಸ್ಥರನ್ನು ಶಿಕ್ಷೆಗೆ ಗುರಿಪಡಿಸಿ ಎಂದು ಮುಖ್ಯಮಂತ್ರ್ರಿಯವರು ಸೂಚಿಸಿದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
If the police were involved in criminal activities, strict punishment said cm siddaramaiah in Review the progress of the Home Department in home in krishna bengaluru.
Please Wait while comments are loading...