ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಸ್ತೆಗುಂಡಿ ಮುಚ್ಚದ ಬಿಬಿಎಂಪಿ ಮೂವರು ಇಂಜಿನಿಯರ್ ಅಮಾನತು

|
Google Oneindia Kannada News

ಬೆಂಗಳೂರು, ನವೆಂಬರ್ 08 : ನೀಡಿದ ಗಡುವಿನೊಳಗೆ ರಸ್ತೆ ಗುಂಡಿ ಮುಚ್ಚಲು ವಿಫಲವಾದ ಮೂವರು ಇಂಜಿನಿಯರ್‌ಗಳನ್ನು ಬಿಬಿಎಂಪಿ ಅಮಾನತು ಮಾಡಿದೆ. ನವೆಂಬರ್ 6ರೊಳಗೆ ಗುಂಡಿಗಳನ್ನು ಮುಚ್ಚುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಕೊಟ್ಟಿದ್ದರು.

ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್ ಮೂವರು ಇಂಜಿನಿಯರ್‌ಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಕರ್ತವ್ಯಲೋಪದಡಿ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದು ಬಿಬಿಎಂಪಿ ಉಪ ಆಯುಕ್ತರು ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.

ಬೆಂಗಳೂರಿನ ರಸ್ತೆಗುಂಡಿ ಮೇಲೆ ಸಾಂಗ್ #SpotThePotಬೆಂಗಳೂರಿನ ರಸ್ತೆಗುಂಡಿ ಮೇಲೆ ಸಾಂಗ್ #SpotThePot

bbmp

ಸಿ.ವಿ.ರಾಮನ್ ನಗರ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಅಮೃತ್ ಕುಮಾರ್ ಸಾಲಂಕಿ, ಶಿವಾಜಿನಗರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಸೈಫುದ್ದೀನ್, ಬಾಣಸವಾಡಿ ವಾರ್ಡ್ ಸಹಾಯಕ ಇಂಜಿನಿಯರ್ ಮಲ್ಲಿನಾಥ್ ಮಲ್ಕಾಪುರೆ ಅಮಾನತುಗೊಂಡವರು.

ಬೆಂಗಳೂರಿನ ರಸ್ತೆ ಗುಂಡಿಗಳು, ಬಿಬಿಎಂಪಿ ಕೊಟ್ಟ ಲೆಕ್ಕಬೆಂಗಳೂರಿನ ರಸ್ತೆ ಗುಂಡಿಗಳು, ಬಿಬಿಎಂಪಿ ಕೊಟ್ಟ ಲೆಕ್ಕ

ನವೆಂಬರ್ 6ರೊಳಗೆ ನಗರದ ರಸ್ತೆಗುಂಡಿಗಳನ್ನು ಮುಚ್ಚುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದರು. ನ.7ರಂದು ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಸಮರ್ಪಕವಾಗಿ ರಸ್ತೆ ಗುಂಡಿಗಳನ್ನು ಮುಚ್ಚದಿರುವುದು ಬೆಳಕಿಗೆ ಬಂದಿದೆ. ಆದ್ದರಿಂದ, ಅಮಾನತು ಮಾಡಲಾಗಿದೆ.

ರಸ್ತೆಗುಂಡಿ ಮುಚ್ಚುವ ಕೆಲಸ, ನಗರ ಪ್ರದಕ್ಷಿಣೆ ನಡೆಸಿದ ಜಾರ್ಜ್ರಸ್ತೆಗುಂಡಿ ಮುಚ್ಚುವ ಕೆಲಸ, ನಗರ ಪ್ರದಕ್ಷಿಣೆ ನಡೆಸಿದ ಜಾರ್ಜ್

ಮೂರು ತಂಡಗಳ ರಚನೆ : ರಸ್ತೆ ಗುಂಡಿಗಳನ್ನು ಮುಚ್ಚಿರುವ ಕುರಿತು ಪರಿಶೀಲನೆ ನಡೆಸಲು ಮೂರು ತಂಡಗಳನ್ನು ರಚನೆ ಮಾಡಲಾಗಿದೆ. ಮೇಯರ್, ಬಿಬಿಎಂಪಿ ಆಯುಕ್ತ, ವಿಶೇಷ ಆಯುಕ್ತರ ನೇತೃತ್ವದಲ್ಲಿ ತಂಡಗಳನ್ನು ರಚನೆ ಮಾಡಲಾಗಿದೆ.

ಬುಧವಾರದಿಂದಲೇ ಈ ತಂಡಗಳು ನಗರದ ವಿವಿಧ ಭಾಗಗಳಲ್ಲಿ ತಪಾಸಣೆ ನಡೆಸಲಿವೆ. ಈ ಸಮಯದಲ್ಲಿ ಗುಂಡಿ ಮುಚ್ಚದೇ ಇರುವುದು ಕಂಡು ಬಂದರೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ.

English summary
BBMP commissioner Manjunath Prasad suspended three engineers who fail to fill pothole in the deadline given by Chief Minister Siddaramaiah.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X