ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪೌರಕಾರ್ಮಿಕರ ಖಾತೆಗೆ ವೇತನ: ಹೈಕೋರ್ಟ್ ಗೆ ಪ್ರಮಾಣಪತ್ರ ಸಲ್ಲಿಕೆ

|
Google Oneindia Kannada News

ಬೆಂಗಳೂರು, ಫೆಬ್ರವರಿ 22 : ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ವೇತನ ಪಾವತಿಯಲ್ಲಿ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸುವ ನಿಟ್ಟಿನಲ್ಲಿ ಅವರ ಬ್ಯಾಂಕ್ ಖಾತೆಗೆ ನೇರವಾಗಿ ವೇತನ ಪಾವತಿಸಲು ಸರ್ಕಾರ ನಿರ್ಧರಿಸಿದೆ ಎಂದು ಬಿಬಿಎಂಪಿ ಹೈಕೋರ್ಟ್ ಗೆ ಮಾಹಿತಿ ನೀಡಿದೆ.

ಪೌರಕಾರ್ಮಿಕರಿಗೆ ಇಂದಿರಾ ಕ್ಯಾಂಟೀನ್ ಊಟ?ಪೌರಕಾರ್ಮಿಕರಿಗೆ ಇಂದಿರಾ ಕ್ಯಾಂಟೀನ್ ಊಟ?

ಪೌರಕಾರ್ಮಿಕರಿಗೆ ಬ್ಯಾಂಕ್ ಖಾತೆಗಳ ಮೂಲಕ ನೇರವಾಗಿ ವೇತನ ಪಾವತಿಸಲು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಎಸ್.ಎನ್. ಬಾಲಸುಬ್ರಹ್ಮಣ್ಯ ಸೇರಿ 70 ಕ್ಕೂ ಅಧಿಕ ಕಸ ವಿಲೇವಾರಿ ಗುತ್ತಿಗೆದಾರರು ಸಲ್ಲಿಸಿರುವ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿನೀತ್ ಕೊಠಾರಿ ಅವರಿದ್ದ ಪೀಠ ಬಿಬಿಎಂಪಿ ಪರ ವಕೀಲ ವಿ. ಶ್ರೀನಿಧಿ ಪ್ರಮಾಣಪತ್ರ ಸಲ್ಲಿಸಿ ಈ ಮಾಹಿತಿ ನೀಡಿದರು.

Poura Karmikas salary through bank account only:BBMP

ಪೌರಕಾರ್ಮಿಕರಿಗೆ ನೇರವಾಗಿ ವೇತನ ಪಾವತಿಸುವ ಸರ್ಕಾರದ ನೀತಿ ಸರಿಯಾಗಿದೆ ಎಂದ ಬಿಬಿಎಂಪಿ ಪರ ವಕೀಲರು, ಬಾಕಿ ಉಳಿಸಿಕೊಂಡಿರುವ ಪೌರಕಾರ್ಮಿಕರ ವೇತನವನ್ನು ಇನ್ನೆರೆಡು ವಾರದಲ್ಲಿ ಪಾವತಿಸಲಾಗುವುದು ಎಂದು ನ್ಯಾಯಾಲಯಕ್ಕೆ ಭರವಸೆ ನೀಡಿದರು. ಇದರಿಂದ ನ್ಯಾಯಪೀಠ ಅರ್ಜಿ ವಿಚಾರಣೆಯನ್ನು ಮಾರ್ಚ್ 7ಕ್ಕೆ ಮುಂದೂಡಿತು.

English summary
Thousands of Pourakarmikas who were working in BBMP will get their salary through bank accounts only. The BBMP has been filed an affidavit before the High Court.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X