ದೇವೇಗೌಡರ ಮೊಮ್ಮಗ ಪ್ರಜ್ವಲ್ ಗೆ ಈ ಕ್ಷೇತ್ರದಿಂದ ಸ್ಪರ್ಧಿಸುವ ಆಸೆ

Posted By:
Subscribe to Oneindia Kannada
prajwal revanna interested contest from rajrajeshwari assembly constituency

ಬೆಂಗಳೂರು, ಅಕ್ಟೋಬರ್ 11: ಮಾಜಿ ಪ್ರಧಾನಿ ಎಚ್​. ಡಿ ದೇವೆಗೌಡರ ಮೊಮ್ಮಗ ಮತ್ತು ಎಚ್​.ಡಿ ರೇವಣ್ಣ ಅವರ ಮಗ ಪ್ರಜ್ವಲ್ ರೇವಣ್ಣ ಅವರು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರಾ? ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ? ಎಂಬ ಕುತೂಹಲ ಇನ್ನೂ ತಣಿದಿಲ್ಲ.

'ರಾಜಕೀಯ ಗುರು' ಮಾತಿಗೆ ಬೆಲೆ, ಎಚ್ಡಿಡಿ ಅವರಲ್ಲಿ ಪ್ರಜ್ವಲ್ ಕ್ಷಮೆ

ಈ ನಡುವೆ, ಬೆಂಗಳೂರಿನ ಕಾರ್ಯಕ್ರಮವೊಂದರಲ್ಲಿ ಬುಧವಾರದಂದು ಮಾತನಾಡಿದ ಪ್ರಜ್ವಲ್ ರೇವಣ್ಣ ಅವರು ಮಾತನಾಡಿ, ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದಿಂದ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಇಚ್ಛೆ ವ್ಯಕ್ತಪಡಿಸಿದ್ದಾರೆ.

Prajwal Revanna interested to contest from Rajarajeshwari Assembly constituency

'ನಾನು ರಾಜಕೀಯವಾಗಿ ಬೆಳೆದೆರೆ ತಮ್ಮ ಕಳ್ಳಾಟ ನಡೆಯುವುದಿಲ್ಲವೆಂದು ಕೆಲವರು ನನ್ನ ವಿರುದ್ಧ ಪಿತೂರಿ ನಡೆಸಿದ್ದಾರೆ. ನನ್ನ ಶಕ್ತಿ ಕುಂದಿಸುವ ಕೆಲಸ ಮಾಡಿದ್ದಾರೆ ಆದರೆ ನಾನು ಈವರೆಗೆ ಬಿದ್ದಿಲ್ಲ, ಬೀಳುವುದಿಲ್ಲ. ತಾಯಿ ರಾಜರಾಜೇಶ್ವರಿ ಆಶೀರ್ವಾದ ಮಾಡಿದರೆ ನಿಮ್ಮ ಮಗನಾಗಿ ದುಡಿಯುತ್ತೇನೆ' ಎಂದಿದ್ದಾರೆ. ಈ ಮೂಲಕ ಸೂಟ್ ಕೇಸ್ ಹೇಳಿಕೆ ವಿರುದ್ಧ ತಿರುಗಿಬಿದ್ದವರಿಗೆ ಮತ್ತೆ ಟಾಂಗ್ ನೀಡಿದ್ದಾರೆ.

ಬ್ರಿಟಿಷರ ಆಡಳಿತ ವೈಖರಿ ಕಂಡು ಬೆರಗಾದ ಪ್ರಜ್ವಲ್ ರೇವಣ್ಣ

ಹುಣಸೂರು ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವ ಬಗ್ಗೆ ಈ ಹಿಂದೆ ಸುದ್ದಿ ಹಬ್ಬಿತ್ತು. ಈ ಬಗ್ಗೆ ಪ್ರಜ್ವಲ್ ಕೂಡಾ ಒಲವು ತೋರಿದ್ದರು. ಆದರೆ, ಹುಣಸೂರಿನಲ್ಲಿ ಸ್ಪರ್ಧೆ ಸಾಧ್ಯವಾಗದ ಹಿನ್ನೆಲೆಯಲ್ಲಿ ರಾಜರಾಜೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧೆ ಬಯಸಿದ್ದಾನೆ. ಹುಣಸೂರಿನಲ್ಲಿನ ನೀಡಿದ ಹೇಳಿಕೆ ಕುರಿತು ಮಾತನಾಡಿದ ಪ್ರಜ್ವಲ್, 'ನನ್ನ ಹೇಳಿಕೆಯನ್ನು ತಿರುಚಿದ್ದಾರೆ ಆ ಘಟನೆಯಿಂದ ಸಾಕಷ್ಟು ನೊಂದಿದ್ದೇನೆ, ಈ ಬಗ್ಗೆ ಮತ್ತೆ ಚರ್ಚೆ ಬೇಡ ಎಂದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Prajwal Revanna son of MLA HD Revanna expresses his interest to contest from Rajarajeshwari Assembly constituency in Bengaluru.
Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ