ಬೆಂಗಳೂರು : ಕೆ.ಆರ್.ಪುರಂ ಬಳಿ ಖಾಸಗಿ ಬಸ್ಗೆ ಬೆಂಕಿ
ಬೆಂಗಳೂರು, ಡಿ.2 : ಬೆಂಗಳೂರಿನ ಕೆ.ಆರ್.ಪುರಂ ಬಳಿ ಖಾಸಗಿ ಬಸ್ಗೆ ಬೆಂಕಿ ಹೊತ್ತಿಕೊಂಡಿದ್ದು, ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ಸಿನ ಮುಂಭಾಗ ಮೊದಲು ಬೆಂಕಿ ಹೊತ್ತಿಕೊಂಡಿದ್ದು ಬಸ್ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ. ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದಾರೆ.
ಕೋಲಾರದಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ಗೆ ಮಂಗಳವಾರ ಮಧ್ಯಾಹ್ನ ಕೆ.ಆರ್.ಪುರಂ ಸರ್ಕಾರಿ ಕಾಲೇಜು ಬಳಿ ಬೆಂಕಿ ಹೊತ್ತಿಕೊಂಡಿದೆ. ಬಸ್ಗೆ ಅಡ್ಡವಾಗಿ ದ್ವಿಚಕ್ರ ವಾಹನ ಎದುರಾಗಿದೆ. ಇದನ್ನು ತಪ್ಪಿಸಲು ಯತ್ನಿಸಿದ ಚಾಲಕ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದ್ದಾನೆ. ಇದರಿಂದ ತಕ್ಷಣ ಬಸ್ಸಿನ ಮುಂಭಾಗಕ್ಕೆ ಬೆಂಕಿ ಹೊತ್ತಿಕೊಂಡಿದೆ.

6 ಅಗ್ನಿ ಶಾಮಕ ದಳಗಳು ಸ್ಥಳಕ್ಕೆ ಆಗಮಿಸಿದ್ದು ಬೆಂಕಿ ನಂದಿಸುವ ಕಾರ್ಯಾಚರಣೆಯನ್ನು ನಡೆಸುತ್ತಿದ್ದಾರೆ. ಅಪಘಾತದಲ್ಲಿ ಮೂವರು ಗಾಯಗೊಂಡಿದ್ದು, ಹತ್ತಿರದ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ. ಅಪಘಾತದಿಂದಾಗಿ ಕೆ.ಆರ್.ಪುರಂ ಬಳಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಬಸ್ಸಿನ ಬೆಂಕಿ ನಂದಿಸಿದ ತಕ್ಷಣ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಸಂಚಾರಿ ಪೊಲೀಸರು ಹೇಳಿದ್ದಾರೆ.
ಅಪಘಾತ ನಡೆದದ್ದು ಹೇಗೆ : ಕೋಲಾರದಿಂದ ಬರುತ್ತಿದ್ದ ಶ್ರೀ ಕೃಷ್ಣ ಟ್ರಾವೆಲ್ಸ್ಗೆ ಸೇರಿದ ಬಸ್ಗೆ ಮೂವರು ಸವಾರರಿದ್ದ ಬೈಕ್ ಎದುರಾಗಿದೆ ಅವರನ್ನು ರಕ್ಷಿಸಲು ಹೋದ ಬಸ್ ಚಾಲಕ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದ್ದಾನೆ. ನಿಯಂತ್ರಣ ತಪ್ಪಿದ ಬೈಕ್ ಬಸ್ಸಿನ ಅಡಿ ಸಿಲುಕಿದೆ.
ಬೈಕ್ಗೆ ಮೊದಲು ಹೊತ್ತಿಕೊಂಡ ಬೆಂಕಿ ನಂತರ ಬಸ್ಸಿಗೆ ಹಬ್ಬಿದೆ. ಬೈಕ್ನಲ್ಲಿದ್ದ ಮೂವರು ಬಸ್ ಕೆಳಗೆ ಸಿಲುಕಿದ್ದು, ಅವರನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಬೆಂಕಿ ಹೊತ್ತಿಕೊಂಡಿದ್ದು ತಿಳಿಯುತ್ತಿದ್ದಂತೆಯೇ ಬಸ್ಸಿನಲ್ಲಿದ್ದವರು ಕೆಳಗಿಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸೋಮವಾರ ಮುಂಜಾನೆ ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಗೆ ಉಪ್ಪಿನಂಗಡಿ ಬಳಿ ಬೆಂಕಿ ಹೊತ್ತಿಕೊಂಡಿತ್ತು. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದರು. [ಮಂಗಳೂರು ಬಸ್ ದುರಂತದ ಚಿತ್ರಗಳು]
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್












Click it and Unblock the Notifications