ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಜೆಪಿ ಈಗಲೂ ಹಿಂಬಾಗಿಲಿನಿಂದ ಅಧಿಕಾರಕ್ಕೆ ಯತ್ನ: ಖರ್ಗೆ ಆರೋಪ

By Nayana
|
Google Oneindia Kannada News

ಬೆಂಗಳೂರು. ಆಗಸ್ಟ್ 7: ಜನರಿಂದ ತಿರಸ್ಕರಿಸಲ್ಪಟ್ಟ ಬಿಜೆಪಿ ಈಗಲೂ ರಾಜ್ಯಪಾಲರನ್ನು ದುರ್ಬಳಕೆ ಮಾಡಿಕೊಂಡು ಹಿಂಬಾಗಿಲಿನಿಂದ ಅಧಿಕಾರಕ್ಕೆ ಏರಲು ಹವಣಿಸುತ್ತಿದೆ. ಹೀಗಾಗಿ ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರ್ಕಾರವನ್ನು ಟೀಕಸಲು ಬಿಜೆಪಿ ನಾಯಕರಿಗೆ ಯಾವುದೇ ನೈತಿಕ ಹಕ್ಕಿಲ್ಲ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯಕ್ಕೆ ಮೂವರು ಮುಖ್ಯಮಂತ್ರಿಗಳು ಎಂದು ಕರ್ನಾಟಕ ಬಿಜೆಪಿ ಟ್ವೀಟ್‌ ಮಾಡಿರುವ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು ಕಾಂಗ್ರೆಸ್‌ ಜೆಡಿಎಸ್‌ ಸಮ್ಮಿಶ್ರ ಸರ್ಕಾರಕ್ಕೆ ಜನಾದೇಶವಿದೆ.ಹಿಂಬಾಗಿಲಿನಿಂದ ಅಧಿಕಾರಕ್ಕೇರಲು ಪ್ರಯತ್ನಿಸುತ್ತಿರುವ ಬಿಜೆಪಿ ವಿಫಲ ಯತ್ನ ನಡೆಸಿ ಹತಾಶೆಗೊಂಡಿದೆ.

Priyank Kharge criticizes Bjp leaders have lost morality

ಎರಡನೇ ರಾಜಧಾನಿಯ ಸಿಎಂ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ಅಸಮಾಧಾನಎರಡನೇ ರಾಜಧಾನಿಯ ಸಿಎಂ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ಅಸಮಾಧಾನ

ಹೀಗಾಗಿ ತನ್ನ ನೈತಿಕತೆಯನ್ನು ಮೀರಿ ರಾಜ್ಯ ಸಮ್ಮಿಶ್ರ ಸರ್ಕಾರವನ್ನು ಟೀಕಿಸಲು ಬಿಜೆಪಿ ನಾಯಕರು ಮುಂದಾಗಿದ್ದಾರೆ. ರಾಜ್ಯಕ್ಕೆ ಮೂವರು ಮುಖ್ಯಮಂತ್ರಿಗಳಿಲ್ಲ, ರಾಜ್ಯಕ್ಕೆ ಒಬ್ಬರೇ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ,ಇದನ್ನು ಅರಗಿಸಿಕೊಳ್ಳಲು ಬಿಜೆಪಿಗೆ ಸಾಧ್ಯವಾಗುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.

English summary
Social welfare minister Priyank Kharge has criticized the Bjp as the leaders still trying come to power by misusing governor for back door entry. He also slammed the Bjp has lost its credibility and morality.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X