ರವೀಂದ್ರ ಕಲಾಕ್ಷೇತ್ರದಲ್ಲಿ ರಾಜ್ ಕುರಿತ ಕಾರ್ಯಕ್ರಮ

Posted By:
Subscribe to Oneindia Kannada

ಬೆಂಗಳೂರು, ಏಪ್ರಿಲ್ 19: ವಾರ್ತಾ ಮತ್ತು ಸಾರ್ವಜನಿಕರ ಇಲಾಖೆ ಹಾಗೂ ಕರ್ನಾಟಕ ಚಲನಚಿತ್ರ ಅಕಾಡೆಮಿ ವತಿಯಿಂದ ಏಪ್ರಿಲ್ 24 ರಂದು ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಡಾ. ರಾಜ್‍ಕುಮಾರ್ 89ನೇ ಜನ್ಮ ದಿನಾಚರಣೆಯನ್ನು ಹಮ್ಮಿಕೊಂಡಿದೆ.

ಸಮಾರಂಭದ ಉದ್ಫಾಟನೆಯನ್ನು ಖ್ಯಾತ ಕಲಾವಿದೆ ಲಕ್ಷ್ಮೀ ಅವರು ನೆರವೇರಿಸಲಿದ್ದಾರೆ. ವಿಧಾಸಭಾ ಸದಸ್ಯ ಆರ್.ವಿ. ದೇವರಾಜ್ ಅವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಸಾಹಿತಿ ಬರಗೂರು ರಾಮಚಂದ್ರಪ್ಪ ಪ್ರಧಾನ ಭಾಷಣ ಮಾಡಲಿದ್ದಾರೆ.

Programme on Dr.Raj at Ravindra Kalakshetra on April 24

ರಾಸಾಯನಿಕ ಮತ್ತು ರಸಗೊಬ್ಬರ ಕೇಂದ್ರ ಸಚಿವರು ಹಾಗೂ ಸಂಸದರು ಆದ ಅನಂತಕುಮಾರ್, ಬೆಂಗಳೂರು ಅಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು ಹಾಗೂ ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಿದ್ದಾರೆ.

ಹಿರಿಯ ಚಲನಚಿತ್ರ ನಿರ್ಮಾಪಕಿ ಶ್ರೀಮತಿ ಪಾರ್ವತಮ್ಮ ರಾಜ್‍ಕುಮಾರ್, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಎಸ್.ವಿ. ರಾಜೇಂದ್ರ ಸಿಂಗ್ ಬಾಬು, ಶ್ರೀ ಕಂಠೀರವ ಸ್ಟುಡಿಯೋ ನಿಮಯತದ ಅಧ್ಯಕ್ಷರಾದ ಶ್ರೀಮತಿ ಅಶ್ವಿನಿ ಕೃಷ್ಣಮೂರ್ತಿ, ಕರ್ನಾಟಕ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ. ಗೋವಿಂದು, ಹಿರಿಯ ಕಲಾವಿದ ಡಾ. ಶಿವರಾಜ್‍ಕುಮಾರ್, ಡಾ. ರಾಘವೇಂದ್ರ ರಾಜ್‍ಕುಮಾರ್ ಹಾಗೂ ಪುನೀತ್ ರಾಜ್‍ಕುಮಾರ್ ಅವರುಗಳು ಸಮಾರಂಭದಲ್ಲಿ ಉಪಸ್ಥಿತರಿರುವರು.

ಈ ಸಂದರ್ಭದಲ್ಲಿ ಡಾ. ರಾಜ್‍ಕುಮಾರ್ ಚಿತ್ರಗಳ ಗೀತಗುಚ್ಫ ಕಾರ್ಯಕ್ರಮ ನಡೆಯಲಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Department of Information has organised a function about veteran film actor Dr. Rajkumar on 24th April, 2017 to remember him on his 89th birth anniversary.
Please Wait while comments are loading...