ಅಪ್ರಾಪ್ತೆ ಇಟ್ಟುಕೊಂಡು ವೇಶ್ಯಾವಾಟಿಕೆ : ಇಬ್ಬರ ಬಂಧನ

Posted By:
Subscribe to Oneindia Kannada

ಬೆಂಗಳೂರು, ಮಾರ್ಚ್ 24 : ಅಪ್ರಾಪ್ತ ವಯಸ್ಕ ಬಾಲಕಿಯನ್ನು ದಾಳವಾಗಿ ಬಳಸಿಕೊಂಡು, ಮನೆಗೆ ಗಿರಾಕಿಗಳನ್ನು ಕರೆಸಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರನ್ನು ಬಂಧಿಸುವಲ್ಲಿ ಕೇಂದ್ರ ಅಪರಾಧಿ ವಿಭಾಗದ ಪೊಲೀಸರು ಯಶಸ್ವಿಯಾಗಿದ್ದು, ಬಾಲಕಿಯನ್ನು ರಕ್ಷಿಸಿದ್ದಾರೆ.

27 ವರ್ಷದ ವಿಜಯ್ ಮತ್ತು 25 ವರ್ಷದ ಶಿವಲಿಂಗ ಸಿಸಿಬಿ ಪೊಲೀಸರಿಗೆ ಸಿಕ್ಕಿಬಿದ್ದಿರುವ ದುರುಳರು. ಹೆಣ್ಣೂರು ಪೊಲೀಸ್ ಠಾಣಾ ಸರಹದ್ದಿನಲ್ಲಿ, ಪಿ ಅಂಡ್ ಟಿ ಲೇಔಟಲ್ಲಿರುವ ಮನೆಯಲ್ಲಿ ಇವರಿಬ್ಬರೂ ಪಶ್ಚಿಮ ಬಂಗಾಳ ಮೂಲದ ಬಾಲಕಿಯನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು.

ಇವರಿಬ್ಬರೂ ವೇಶ್ಯಾವಾಟಿಕೆ ನಡೆಸುತ್ತಿರುವುದರ ಬಗ್ಗೆ ಬಾತ್ಮೀದಾರರಿಂದ ಬಂದ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು, ವಿಜಯ್ ಮತ್ತು ಶಿವಲಿಂಗನಿಂದ ಎರಡು ಮೊಬೈಲ್, ಎರಡು ಕಾಂಡೋಮ್, 2,000 ರು. ನಗದನ್ನು ವಶಪಡಿಸಿಕೊಳ್ಳಲಾಗಿದೆ. [ಬೆಂಗಳೂರಿನ ಮಸಾಜ್ ಪಾರ್ಲರಲ್ಲಿ ಹೈಟೆಕ್ ವೇಶ್ಯಾವಾಟಿಕೆ]

Prostitution racket busted in Bengaluru : Minor rescued

7,000 ರು.ಗೆ ಮನೆಯನ್ನು ಬಾಡಿಗೆ ಪಡಿದಿದ್ದ ಇವರು, ಬಾಲಕಿ ಅಪ್ರಾಪ್ತೆ ಎಂದು ಗೊತ್ತಿದ್ದರೂ ಕೆಲಸ ಕೊಡಿಸುವ ನೆಪವೊಡ್ಡಿ ತಮ್ಮ ಬಲೆಗೆ ಬೀಳಿಸಿಕೊಂಡಿದ್ದರು. ಹಣ ಸಂಪಾದನೆ ಮಾಡುವ ಆಮಿಷ ತೋರಿಸಿ ಓರ್ವ ಗಿರಾಕಿಯಿಂದ ಎರಡೂವರೆ ಸಾವಿರ ರು. ಇಸಿದುಕೊಂಡು ಆಕೆಯನ್ನು ವೇಶ್ಯಾವಾಟಿಕೆಗೆ ತಳ್ಳಿದ್ದರು. [ವೇಶ್ಯಾವಾಟಿಕೆಯಲ್ಲಿ ಕರ್ನಾಟಕ ಬೇರೆ ರಾಜ್ಯಕ್ಕಿಂತ ಕಮ್ಮಿಯಿಲ್ಲ]

ಈ ವೇಶ್ಯಾವಾಟಿಕೆ ಜಾಲದಲ್ಲಿ ಇನ್ನೂ ಕೆಲವರು ಭಾಗಿಯಾಗಿದ್ದು, ತಲೆಮರೆಸಿಕೊಂಡವರಿಗಾಗಿ ಸಿಸಿಬಿ ಪೊಲೀಸರು ಜಾಲ ಬೀಸಿದ್ದಾರೆ. ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆ 2012, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 366(ಎ), 370, 370(ಎ), 373 ಮತ್ತು ಮಾನವ ಸಾಗಾಣಿಕೆ ತಡೆ ಕಾಯ್ದೆಯ 3, 4, 5 ಮತ್ತು 7ರ ಅಡಿಯಲ್ಲಿ ಕೇಸನ್ನು ದಾಖಲಿಸಿದ್ದಾರೆ. [ಅರಬ್ಬರ ನಾಡಿನಲ್ಲಿ ಯಶಸ್ವೀ "ಆಪರೇಷನ್ ನೈಜೀರಿಯಾ"]

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Two people have been arrested by City Crime Branch police in Bengaluru for running prostitution racket by luring the customers through a minor girl from West Bengal. Case has been filed under Immoral Traffic (Prevention) Act, Indian Penal Code and POCSO Act.
Please Wait while comments are loading...