ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೌಲ್ಯಮಾಪನ ಬಹಿಷ್ಕಾರ: ಪಿಯು ಶಿಕ್ಷಕರ ಎಚ್ಚರಿಕೆ

|
Google Oneindia Kannada News

ಬೆಂಗಳೂರು, ಫೆಬ್ರವರಿ 13 : ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ವೇತನ ತಾರತಮ್ಯವನ್ನು ಸರ್ಕಾರ ಶೀಘ್ರ ಪರಿಹರಸಿಬೇಕು ಇಲ್ಲದಿದ್ದರೆ ಮೌಲ್ಯಮಾಪನ ಬಹಿಷ್ಕರಿಸಲಾಗುವುದು ಎಂದು ಉಪನ್ಯಾಸಕರ ಸಂಘ ಎಚ್ಚರಿಕೆ ನೀಡಿದೆ.

ಮೌಲ್ಯಮಾಪನ ವಿಷಯದ ಕುರಿತು ಸರ್ಕಾರ ಎಸ್ಮಾ ಜಾರಿ ಮಾಡಿದರೂ ಹೆದರುವುದಿಲ್ಲ. ಜೈಲಿಗೆ ಹೋಗಲೂ ಸಿದ್ಧ ಆದರೆ, ನಮ್ಮ ಸಮಸ್ಯೆಗಳನ್ನು ಹಾಗೂ ವೇತನ ತಾರತಮ್ಯವನ್ನು ಬಗೆಹರಿಸುವವರೆಗೆ ಹೋರಾಟ ಮುಂದುವರೆಯಲಿದೆ ಎಂದು ಸಂಘದ ಅಧ್ಯಕ್ಷ ತಿಮ್ಮಯ್ಯ ಹೇಳಿದ್ದಾರೆ.

ನಗರದ ಮೌರ್ಯ ಸರ್ಕಲ್ ಬಳಿ ವೇತನ ತಾರತಮ್ಯ ನಿವಾರಣೆಗಾಗಿ ಒತ್ತಾಯಿಸಿ ಕರಾಳ ಶಿವರಾತ್ರಿ ಆಚರಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದ ಉಪನ್ಯಾಸಕರು ಮತ್ತು ಪ್ರಾಂಶುಪಾಲರು ವೇತನ ತಾರತಮ್ಯವನ್ನು ಸರ್ಕಾರ ನಿವಾರಣೆ ಮಾಡಬೇಕು ಎಂದು ಒತ್ತಾಯಿಸಿದರು.

Pu lectures association threatens to boycott valuation

ಸಮಸ್ಯೆ ನಿವಾರಣೆಗೆ ಹಲವು ಬಾರಿ ಸರ್ಕಾರಕ್ಕೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಅನಿವಾರ್ಯವಾಗಿ ಮೌಲ್ಯಮಾಪನ ಬಹಿಷ್ಕರಿಸಲಾಗುತ್ತದೆ ಎಂದಿದ್ದಾರೆ.

English summary
PU lectures association threatens to boycott valuation. Lectures demanding for pay hike, but even in sixth pay commissiom there is no specific mention about PU lectures pay difference.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X