ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದ್ವಿತೀಯ ಪಿಯುಸಿ ಪ್ರಶ್ನೆಪತ್ರಿಕೆ ಸಾಗಿಸುವ ವಾಹನಕ್ಕೆ ಜಿಪಿಎಸ್

|
Google Oneindia Kannada News

ಬೆಂಗಳೂರು, ಫೆಬ್ರವರಿ 20 : 2018ನೇ ಸಾಲಿನ ದ್ವಿತೀಯ ಪಿಯುಸಿ ಪ್ರಶ್ನೆಪತ್ರಿಕೆ ವಿತರಣೆಯಲ್ಲಿ ಲೋಪವಾಗದಂತೆ ಎಚ್ಚರವಹಿಸಲು ಪ್ರಶ್ನೆಪತ್ರಿಕೆ ವಿತರಿಸುವ ವಾಹನಗಳಿಗೆ ಜಿಪಿಎಸ್ ಟ್ರ್ಯಾಂಕಿಂಗ್ ಸಿಸ್ಟಂ ಅಳವಡಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.

ಗೃಹ ಸಚಿವ ರಾಮಲಿಂಗಾರೆಡ್ಡಿ ಜತೆ ಪರೀಕ್ಷಾ ಕಾರ್ಯಗಳ ಭದ್ರತೆ ಕುರಿತ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಪರೀಕ್ಷೆಯ ವಿವಿಧ ಹಂತಗಳಲ್ಲಿ ಭದ್ರತೆ ಕಾಪಾಡಲು ಹಾಗೂ ಪರೀಕ್ಷಾ ಗೌಪ್ಯ ವಸ್ತುಗಳನ್ನು ಪರೀಕ್ಷಾ ಕೇಂದ್ರಗಳಿಗೆ ಸಾಗಿಸುವ ಕಾರ್ಯದ ದಾಖಲೀಕರಣದ ಅವಶ್ಯಕತೆ ಇದೆ.

ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆ ಒಂದೇ ವೇದಿಕೆಯಲ್ಲಿ!ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆ ಒಂದೇ ವೇದಿಕೆಯಲ್ಲಿ!

ಈ ಹಿನ್ನೆಲೆಯಲ್ಲಿ ಮಾರ್ಚ್ ನಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷಾ ಕಾರ್ಯದಲ್ಲಿ ಬಳಸಿಕೊಳ್ಳಲಾಗುವ ಎಲ್ಲ ವಾಹನಗಳಿಗೆ ಕಡ್ಡಾಯವಾಗಿ ಜಿಪಿಎಸ್ ಟ್ರ್ಯಾಕಿಂಗ್ ವ್ಯವಸ್ಥೆ ಅಳವಡಿಸಲಾಗುತ್ತಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ.

Question paper logistic vehicle will have GPS devices

2017-18ನೇ ಸಾಲಿನ SSLC ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ2017-18ನೇ ಸಾಲಿನ SSLC ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

ಡಿಡಿಪಿಯುಗಳಿಗೆ ಸೂಚನೆ: ವಾರ್ಷಿಕ ಪರೀಕ್ಷೆಗಳಿಗೆ ಈಗಾಗಲೇ ರಚಿಸಲಾಗಿರುವ ಮಾರ್ಗವಾರು ಪ್ರಶ್ನೆಪತ್ರಿಕೆ ವಿತರಕರು ಬಳಸುವ ಎಲ್ಲ ವಾಹನಗಳಲ್ಲಿ ಜಿಪಿಎಸ್ ಟ್ರ್ಯಾಕಿಂಗ್ ವ್ಯವಸ್ಥೆ ಅಳವಡಿಸಿಕೊಳ್ಳುವಂತೆ ಜಿಲ್ಲಾ ಉಪ ನಿರ್ದೇಶಕರಿಗೆ ಸೂಚನೆ ನೀಡಲಾಗಿದೆ. ಜಿಪಿಎಸ್ ಅಳವಡಿಕೆಗಾಗಿ 1 ಲಕ್ಷ ರೂ ವರೆಗೆ ಅನುದಾನ ಬಳಸಿಕೊಳ್ಳಲು ಮಂಜೂರಾತಿ ನೀಡಲಾಗಿದೆ.

English summary
To prevent Malpractice in exam question paper, education department come up with new idea. this time logistic vehicle will have GPS devices.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X