ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಗೀಗುಡ್ಡ ದೇವಸ್ಥಾನದಿಂದ ಶೈಕ್ಷಣಿಕ ಪ್ರಗತಿಗೆ ವಿದ್ಯಾರ್ಥಿ ವೇತನ

ಪ್ರತಿಭಾನ್ವಿತ ವಿದ್ಯಾರ್ಥಿ/ವಿದ್ಯಾರ್ಥಿನಿಯರ ಶೈಕ್ಷಣಿಕ ಪ್ರಗತಿಗೆ ಅನುಕೂಲವಾಗುವ ನಿಟ್ಟಿನಲ್ಲಿ ರಾಗೀಗುಡ್ಡದ ಪ್ರಸನ್ನ ಆಂಜನೇಯ ಸ್ವಾಮಿ ದೇವಾಲಯದ ಚಾರಿಟೇಬಲ್ ಟ್ರಸ್ಟ್ ವಿದ್ಯಾರ್ಥಿ ವೇತನ ನೀಡಲಿದೆ.

By Balaraj Tantry
|
Google Oneindia Kannada News

ಬೆಂಗಳೂರು, ಏ 19: ಎಸ್ಎಸ್ಎಲ್ಸಿ ನಂತರ ಪ್ರತಿಭಾನ್ವಿತ ವಿದ್ಯಾರ್ಥಿ/ವಿದ್ಯಾರ್ಥಿನಿಯರ ಶೈಕ್ಷಣಿಕ ಪ್ರಗತಿಗೆ ಅನುಕೂಲವಾಗುವ ನಿಟ್ಟಿನಲ್ಲಿ ರಾಗೀಗುಡ್ಡದ ಶ್ರೀಪ್ರಸನ್ನ ಆಂಜನೇಯ ಸ್ವಾಮಿ ದೇವಾಲಯದ ಚಾರಿಟೇಬಲ್ ಟ್ರಸ್ಟ್ ವಿದ್ಯಾರ್ಥಿ ವೇತನ ನೀಡಲಿದೆ.

'ವಿದ್ಯಾನಿಧಿ' ಹೆಸರಿನಲ್ಲಿ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಟ್ರಸ್ಟ್ ಕಳೆದ ಕೆಲವು ವರ್ಷಗಳಿಂದ ನೀಡುತ್ತಾ ಬಂದಿದ್ದು, ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಇದುವರೆಗೆ ನೀಡಲಾಗಿದೆ. (SSLC ಪರೀಕ್ಷೆಗೆ ಇಂದು ಮಂಗಳ, ಕಾಲೇಜಿಗೆ ದಾರಿ ಯಾವುದಯ್ಯ)

Ragigudda temple trust distributing scholarships to students

(ಸಾಂದರ್ಭಿಕ ಚಿತ್ರ)

ಪ್ರಸಕ್ತ ವರ್ಷದ (2017-18) ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಎಸ್ಎಸ್ಎಲ್ಸಿ ನಂತರದ ವಿದ್ಯಾಭ್ಯಾಸಕ್ಕೆ, ಕಾಲೇಜುಗಳ ವಾರ್ಷಿಕ ಶುಲ್ಕಕ್ಕೆ ಅನುಗುಣವಾಗಿ ವಿದ್ಯಾರ್ಥಿ ವೇತನ ನೀಡಲಾಗುವುದು ಎಂದು ಟ್ರಸ್ಟ್ ಅಧಿಕಾರಿಗಳು ತಿಳಿಸಿದ್ದಾರೆ.

ಜಯನಗರ 9ನೇ ಬ್ಲಾಕಿನಲ್ಲಿರುವ ರಾಗೀಗುಡ್ದ ದೇವಾಲಯಕ್ಕೆ ಹೊಂದಿಕೊಂಡಿರುವ ಶಾಲೆಯ ಕಚೇರಿಯಲ್ಲಿ ಭಾನುವಾರ ಹೊರತು ಪಡಿಸಿ ವಾರದ ಎಲ್ಲಾ ದಿನ ಸಾಯಂಕಾಲ ಐದರಿಂದ ಆರು ಗಂಟೆಯೊಳಗೆ ಅರ್ಜಿಯನ್ನು ಪಡೆಯಬಹುದಾಗಿದೆ.

ಆಸಕ್ತ ವಿದ್ಯಾರ್ಥಿಗಳು ಇದೇ ಏಪ್ರಿಲ್ 25ನೇ ತಾರೀಕಿನೊಳಗೆ ಅರ್ಜಿಯನ್ನು ತುಂಬಿ ಶಾಲೆಯ ಕಚೇರಿಗೆ ನೀಡಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಶಾಲೆಯ ದೂರವಾಣಿ ಸಂಖ್ಯೆ 26587646/26594244 ಸಂಪರ್ಕಿಸಬಹುದಾಗಿದೆ.

ಅರ್ಜಿಯ ಜೊತೆಗೆ ನೀಡಬೇಕಾಗಿರುವ ಪ್ರಮಾಣಪತ್ರದ ಪ್ರತಿಯ ವಿವರಗಳನ್ನು ಅರ್ಜಿ ಪಡೆಯುವ ವೇಳೆ ಶಾಲೆಯ ಅಧಿಕಾರಿಗಳು ತಿಳಿಸಲಿದ್ದಾರೆ ಎಂದು ಟ್ರಸ್ಟಿನ ಕಾರ್ಯದರ್ಶಿಗಳು ತಿಳಿಸಿದ್ದಾರೆ.

English summary
Ragigudda Prasanna Anjaneya Swamy temple trust in Bengaluru distributing scholarships to deserving students who wants pursue education after SSLC. Last date for submitting the application - Apr 25, 2017.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X