ತಾಂಜೇನಿಯಾ ಯುವತಿ ಮೇಲೆ ಹಲ್ಲೆ, ವರದಿ ಕೇಳಿದ ರಾಹುಲ್

Posted By:
Subscribe to Oneindia Kannada

ಬೆಂಗಳೂರು, ಫೆಬ್ರವರಿ 04 : ಉದ್ಯಾನ ನಗರಿ ಬೆಂಗಳೂರಿನಲ್ಲಿ ತಾಂಜೇನಿಯಾ ಮೂಲದ ಯುವತಿ ಮೇಲೆ ನಡೆದ ಹಲ್ಲೆಯನ್ನು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಖಂಡಿಸಿದ್ದಾರೆ. ರಾಹುಲ್ ಗಾಂಧಿ ಅವರು ಘಟನೆ ಕುರಿತು ವರದಿ ನೀಡುವಂತೆ ಕರ್ನಾಟಕ ಕಾಂಗ್ರೆಸ್‌ಗೆ ಸೂಚಿಸಿದ್ದಾರೆ.[ವಿಡಿಯೋ : ತಾಂಜಾನಿಯಾ ಮಹಿಳೆ ಮೇಲೆ ದಾಳಿ]

ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರು ಗುರುವಾರ ಬೆಳಗ್ಗೆ ಈ ಕುರಿತು ಟ್ವಿಟ್ ಮಾಡಿದ್ದು, ರಾಹುಲ್ ಗಾಂಧಿ ಅವರು ಯುವತಿ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿದ್ದಾರೆ. ಈ ಬಗ್ಗೆ ವರದಿ ನೀಡುವಂತೆ ಸೂಚನೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ. ಜನವರಿ 31ರ ರಾತ್ರಿ ತಾಂಜೇನಿಯಾ ಮೂಲದ ಯುವತಿಯನ್ನು ಅರೆಬೆತ್ತಲೆಗೊಳಿಸಿ ಹಲ್ಲೆ ಮಾಡಲಾಗಿತ್ತು. [ತಾಂಜಾನಿಯಾ ಯುವತಿಯ ಬೆತ್ತಲೆಗೊಳಿಸಿ ಹಲ್ಲೆ]

rahul gandhi

4 ಜನರ ಬಂಧನ : ಸೋಲದೇವನಹಳ್ಳಿ ಸಮೀಪದ ಗಣಪತಿಪುರದಲ್ಲಿ ಸ್ಥಳೀಯರು ತಾಂಜೇನಿಯಾ ಮೂಲದ ಯುವತಿಯನ್ನು ಅರೆಬೆತ್ತಲೆಗೊಳಿಸಿ ಹಲ್ಲೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಸೋಲದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ. [ಮಹಿಳಾ ದೌರ್ಜನ್ಯ ವಿರುದ್ಧ ದನಿಯಾದ ವಾಮಾ ಬಲ್ದೋಟ]

ರಾಹುಲ್ ಗಾಂಧಿ ಅವರು ಘಟನೆಯನ್ನು ತೀವ್ರವಾಗಿ ಖಂಡಿಸಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಘಟನೆ ಕುರಿತು ವಿವರವಾದ ವರದಿ ನೀಡುವಂತೆ ಕರ್ನಾಟಕ ಕಾಂಗ್ರೆಸ್‌ಗೆ ಸೂಚಿಸಿದ್ದಾರೆ.

ಜನವರಿ 31ರಂದು ಯುವತಿ ಮೇಲೆ ಹಲ್ಲೆ ನಡೆದ ಸ್ಥಳಕ್ಕೆ ಗುರುವಾರ ಬೆಳಗ್ಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಮತ್ತು ಬೆಂಗಳೂರು ನಗರ ಪೊಲೀಸ್ ಆಯುಕ್ತ ಎನ್‌.ಎಸ್.ಮೇಘರಿಕ್ ಅವರು ಭೇಟಿ ನೀಡಿದ್ದು, ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಂದ ಮಾಹಿತಿ ಸಂಗ್ರಹಣೆ ಮಾಡುತ್ತಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Congress vice president Rahul Gandhi condemned the attack on Tanzanian girl in Bengaluru said Digvijaya Singh Karnataka Congress in-charge and AICC General secretary
Please Wait while comments are loading...