ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೋಡ ಹೊದ್ದು ಮಲಗಿದ ಬೆಂಗಳೂರಿನ ಬೆಂಬಿಡದ ಮಳೆ

By Nayana
|
Google Oneindia Kannada News

Recommended Video

ಮೋಡ ಹೊದ್ದು ಮಲಗಿದ ಬೆಂಗಳೂರಿನ ಬೆಂಬಿಡದ ಮಳೆ | Oneindia Kannada

ಬೆಂಗಳೂರು, ಆಗಸ್ಟ್ 13: ದಕ್ಷಿಣ ಒಳನಾಡಿನಲ್ಲಿ ಮತ್ತೆ ಮುಂಗಾರು ಚುರುಕಾಗಿದೆ ಆದರೆ ಬೆಂಗಳೂರಿನಲ್ಲಿ ಮಾತ್ರ ತುಂತುರು ಮಳೆಗೆ ನಿಂತಿದೆ. ಮಳೆಯ ಪರಿಣಾಮ ಚಳಿಯೂ ಹೆಚ್ಚುತ್ತಿದೆ. ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಂತೆ ನಗರದಲ್ಲಿ ಮಳೆಯಾಗುತ್ತಿಲ್ಲ.

ಹಗಲಿನ ಬಹುತೇಕ ಸಮಯದಲ್ಲಿ ಮೋಡ ಕವಿದ ವಾತಾವರಣವಿದ್ದು, ಆಗಾಗ್ಗೆ ತುಂತುರು ಮಳೆ ಸುರಿಯುತ್ತಿದೆ. ಇದರಿಂದಾಗಿ ಹಗಲಿನಲ್ಲೂ ಚಳಿಯ ಅನುಭವವಾಗುತ್ತಿದೆ. ಕೆಲ ದಿನಗಳ ಹಿಂದಷ್ಟೇ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್‌ನಷ್ಟಿತ್ತು ಇದೀಗ 24 ಡಿಗ್ರಿ ಸೆಲ್ಸಿಯಸ್‌ಗೆ ಇಳಿಯಾಕೆಯಾಗಿದೆ.

ಕರಾವಳಿಯಲ್ಲಿ ಮುಂದುವರಿದ ಮಳೆ, ಹವಾಮಾನ ಇಲಾಖೆಯಿಂದ ಎಚ್ಚರಿಕೆಕರಾವಳಿಯಲ್ಲಿ ಮುಂದುವರಿದ ಮಳೆ, ಹವಾಮಾನ ಇಲಾಖೆಯಿಂದ ಎಚ್ಚರಿಕೆ

ಮೋಡ ಕವಿದ ವಾತಾವರಣ ಹಾಗೂ ಮುಂಗಾರಿನಿಂದ ಬೀಸುತ್ತಿರುವ ಗಾಳಿಯಿಂದ ಚಳಿ ಹೆಚ್ಚಾಗುತ್ತಿದೆ. ನಗರದ ಕೇಂದ್ರ ಭಾಗದಲ್ಲಿ ಗರಿಷ್ಠ 24.6 ಡಿಗ್ರಿ ಸೆಲ್ಸಿಯಸ್‌ ಇದ್ದರೆ ಕನಿಷ್ಠ 19.4 ಡಿಗ್ರಿ ಸೆಲ್ಸಿಯಸ್‌ ತಾಪಮಾನವಿದೆ. ಕೆಐಎಎಲ್‌ನಲ್ಲಿ ಕನಿಷ್ಠ 24.9ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ 19.1 ಡಿಗ್ರಿ ಸೆಲ್ಸಿಯಸ್‌, ಎಚ್‌ಎಎಲ್‌ನಲ್ಲಿ ಗರಿಷ್ಠ 25.5 ಡಿಗ್ರಿ ಸೆಲ್ಸಿಯಸ್‌ ಕನಿಷ್ಠ 19.1 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲಾಗಿದೆ.

Rain continue with chilled weather in Bengaluru

ಕೇರಳದಲ್ಲಿ ವರುಣನ ರುದ್ರನರ್ತನ: ಮೃತರ ಸಂಖ್ಯೆ 29 ಕ್ಕೇರಿಕೆಕೇರಳದಲ್ಲಿ ವರುಣನ ರುದ್ರನರ್ತನ: ಮೃತರ ಸಂಖ್ಯೆ 29 ಕ್ಕೇರಿಕೆ

ರಾಜ್ಯದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದ್ದು, ಸೋಮವಾರ ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಭಾನುವಾರ ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದೆ. ಮಲ್ಪೆ-ಗಂಗೊಳ್ಳಿ ಮತ್ತು ಭಟ್ಕಳ ಸಮುದ್ರ ವ್ಯಾಪ್ತಿಯಲ್ಲಿ ಅಲೆಗಳ ಬೋರ್ಗರೆತಕ್ಕೆ 3 ಆಳ ಸಮುದ್ರ ಮೀನುಗಾರಿಕೆ ಸಮುದ್ರ ಪಾಲಾಗಿವೆ. ಎಲ್ಲ 24 ಮೀನುಗಾರರನ್ನು ರಕ್ಷಿಸಲಾಗಿದೆ. ಆಗಸ್ಟ್ 15ರವರೆಗೂ ಇದೇ ರೀತಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

English summary
Cloudy with chilled weather in Bengaluru was receiving steady rain in last three days and weather experts said that rain will continue for this week.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X