ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಏಪ್ರಿಲ್ 25ರವರೆಗೂ ಮುಂದುವರೆಯಲಿರುವ ವರ್ಷಧಾರೆ!

|
Google Oneindia Kannada News

ಬೆಂಗಳೂರು, ಏಪ್ರಿಲ್ 21: ರಾಜ್ಯದಲ್ಲಿ ಬೇಸಿಗೆ ಮಳೆ ಮುಂದುವರೆದಿದ್ದು, ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆ ದಾಖಲಾಗಿದೆ. ಇನ್ನೂ ಮೂರು ದಿನಗಳ ಕಾಲ ರಾಜ್ಯಾದ್ಯಂತ ಮಳೆಯಾಗುವ ನಿರೀಕ್ಷೆ ಇದೆ.

ಏ.25ರವರೆಗೂ ರಾಜ್ಯದ ಹಲವೆಡೆ ಬಿರುಗಾಳಿ, ಗುಡುಗು, ಸಿಡಿಲು ಸಹಿತ ಮಳೆ ಮುಂದುವರೆಯುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮಲೆನಾಡಿನಾದ್ಯಂತ ಮಳೆಗಾಲದ ವಾತಾವರಣ ಸೃಷ್ಟಿಯಾಗಿದೆ.

 ಬೆಂಗಳೂರಿಗೆ ತಂಪೆರೆದ ಮಳೆ: ಇನ್ನೂ ಎರಡು ದಿನ ಮುಂದುವರಿಕೆ ಬೆಂಗಳೂರಿಗೆ ತಂಪೆರೆದ ಮಳೆ: ಇನ್ನೂ ಎರಡು ದಿನ ಮುಂದುವರಿಕೆ

ಚಾಮರಾಜನಗರ, ಚಿತ್ರದುರ್ಗ, ಕೊಡುಗೆ, ಮಂಡ್ಯ, ಮೈಸೂರು ಮತ್ತು ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಒಂದೆರೆಡು ದಿನ ಭಾರಿ ಮಳೆ ಮುಂದುವರೆಯಲಿದ್ದು, ಬೆಂಗಳೂರು ನಗರ ಹಾಗೂ ಗ್ರಾಮಾಂತರ, ಚಿಕ್ಕಬಳ್ಳಾಪುರ, ಬಾಗಲಕೋಟೆ, ಬೆಳಗಾವಿ, ಗದಗ, ಧಾರವಾಡ, ಹಾವೇರಿ, ಕೊಪ್ಪಳ ಮತ್ತು ರಾಯಚೂರಿನಲ್ಲಿ ಏ.23ರಂದು ಬಿರುಗಾಳಿ ಸಹಿತ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Rain continues four more days

ಉತ್ತರದಲ್ಲಿ ಬಿಸಿಲ ಬೇಗೆ: ರಾಜ್ಯದ ದಕ್ಷಿಣ ಭಾಗದಲ್ಲಿ ಮಳೆ ದಾಖಲಾಗುತ್ತಿದ್ದರೆ, ಉತ್ತರ ಕರ್ನಾಟಕದಲ್ಲಿ ಬಿಸಿಲ ಬೇಗೆ ಏರುತ್ತಿದೆ. ವಿಯಪುರ, ಬೀದರ್, ಕಲಬುರಗಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 40ಡಿಗ್ರಿ ಸೆಲ್ಸಿಯಸ್ ದಾಟಿದೆ. ಕಲಬುರಗಿಯಲ್ಲಿ ಗರಿಷ್ಠ ತಾಪಮಾನ 41.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಮುಂದಿನ ದಿನಗಳಲ್ಲಿ ಗರಿಷ್ಠ ತಾಪಮಾನ 42 ಡಿಗ್ರಿ ಸೆಲ್ಸಿಯಸ್ ದಾಟುವ ಮುನ್ಸೂಚನೆ ಇದೆ.

ಬೆಂಗಳೂರು ನಗರದಲ್ಲಿ ಗರಿಷ್ಠ 34.8ಡಿಗ್ರಿ ಸೆಲ್ಸಿಯಸ್, ಕನಿಷ್ಠ22.2 ಡಿಗ್ರಿ ಸೆಲ್ಸಿಯಸ್, ಕೆಐಎಎಲ್ ಗರಿಷ್ಠ 35.2 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21.2 ಡಿಗ್ರಿ ಸೆಲ್ಸಿಯಸ್, ಎಚ್‌ಎಎಲ್ ನಲ್ಲಿ ಗರಿಷ್ಠ 34 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20.9ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಕಲಬುರಗಿಯಲ್ಲಿ ಗರಿಷ್ಠ 41.8 ಡಿಗ್ರಿ ಉಷ್ಣಾಂಶ ದಾಖಲಾಗಿದೆ.

ಮೀನುಗಾರರಿಗೆ ಎಚ್ಚರಿಕೆ: ಉಡುಪಿ, ಮುರುಡೇಶ್ವರ ಗೋಕರ್ಣ ಭಾಗದಲ್ಲಿ ಏ.21 ಮತ್ತು 22 ರಂದು ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚಿಸಲಾಗಿದೆ. ಸಮುದ್ರದಲ್ಲಿ 2.5 ಮೀ. ಎತ್ತರದ ಅಲೆಗಳು ಏಳುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ.

English summary
Indian meteorological department has forecasted rain with heavy wind will continues four more days across Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X