ಬೆಂಗಳೂರಿನಲ್ಲಿ ಮುಂಜಾನೆಯೇ ಮಳೆ, ಜನರಿಗೆ ಕಿರಿಕಿರಿ

Posted By: Gururaj
Subscribe to Oneindia Kannada

ಬೆಂಗಳೂರು, ಸೆಪ್ಟೆಂಬರ್ 17 : ಉದ್ಯಾನ ನಗರಿ ಬೆಂಗಳೂರಿನಲ್ಲಿ ಶನಿವಾರದಿಂದ ಮತ್ತೆ ಮಳೆ ಆರಂಭವಾಗಿದೆ. ಭಾನುವಾರ ಮುಂಜಾನೆಯೇ ಮಳೆ ಸುರಿಯುತ್ತಿದೆ. ಇನ್ನೂ 48 ಗಂಟೆಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನಗರದ ಜನರ ಮುಂಜಾನೆಯ ವಾಕಿಂಗ್‌ಗೆ ಮಳೆ ಅಡ್ಡಿ ಮಾಡಿದೆ. ಭಾನುವಾರ ಹೊರಗೆ ಹೋಗಲು ಪ್ಲಾನ್ ಮಾಡಿದವರು ಮಳೆ ನೋಡಿ ಸುಮ್ಮನಾಗಿದ್ದಾರೆ. ಕೆ.ಆರ್.ಮಾರುಕಟ್ಟೆಯಲ್ಲಿ ಬೆಳಗಿನ ಖರೀದಿಗೆ ಮಳೆ ಅಡ್ಡಿ ಉಂಟುಮಾಡಿದೆ.

ಅಂತಿಮ ಕ್ಷಣಗಳನ್ನು ಎದುರಿಸುತ್ತಿರುವ ತೆರೆದ ಗುಂಡಿಗಳು!

rain in bengaluru

ನಗರದಲ್ಲಿ ಮೋಡ ಕವಿದ ವಾತಾವರಣವಿದ್ದು ಹಲವು ಬಡಾವಣೆಗಳಲ್ಲಿ ಮಳೆಯಾಗುತ್ತಿದೆ. ಜಯನಗರ, ಬಸವನಗುಡಿ, ಕೆ.ಆರ್.ಮಾರುಕಟ್ಟೆ, ಮೆಜೆಸ್ಟಿಕ್ ಸುತ್ತ-ಮುತ್ತ ಮಳೆ ಜೋರಾಗಿದೆ.

ಮಲ್ಲಿಗೆ ಹೂವಿನ ಪರಿಮಳದಲ್ಲಿ ತಣಿಯುವ ಮಳೆಯ ಹನಿ

ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳ ಅವಧಿಯಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಭಾರೀ ಮಳೆಯಿಂದಾಗಿ ಹೆಸರಘಟ್ಟ ಕೆರೆಗೆ ಜೀವಕಳೆ

ಆಗಸ್ಟ್ 14ರಿಂದ ಬೆಂಗಳೂರು ನಗರದಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಸೆಪ್ಟೆಂಬರ್ ತಿಂಗಳ ಮೊದಲ ಹತ್ತು ದಿನಗಳ ಕಾಲ ಭಾರೀ ಮಳೆ ಸುರಿದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತ್ತು.

ಚಿತ್ರಗಳು : ಕೆಂಗೇರಿಯಲ್ಲಿ ರಸ್ತೆ ಜಲಾವೃತ, ಮೀನು ಹಿಡಿದ ಜನರು

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Bengaluru city receiving continuous rainfall since couple of days. Meteorological department said, rain will continue for at least the next 48 hours.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ