ಇನ್ನೂ 2 ದಿನ ಬೆಂಗಳೂರಲ್ಲಿ ತುಂತುರು ಮಳೆ, ಶೀತಗಾಳಿ

Posted By: Gururaj
Subscribe to Oneindia Kannada

ಬೆಂಗಳೂರು, ನವೆಂಬರ್ 6 : ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಮತ್ತು ವಾಯುಭಾರ ಕುಸಿತ ಉಂಟಾಗಿದೆ. ಆದ್ದರಿಂದ, ಬೆಂಗಳೂರು ನಗರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ತುಂತುರು ಮಳೆಯಾಗುತ್ತಿದೆ. ಇನ್ನೂ ಎರಡು ದಿನ ಮಳೆ ಮುಂದುವರೆಯಲಿದೆ.

ಕಳೆದ ವಾರದಿಂದ ಬೆಂಗಳೂರು ನಗರದಲ್ಲಿ ಶೀತಗಾಳಿ ಬೀಸುತ್ತಿದ್ದು, ಭಾನುವಾರದಿಂದ ತುಂತುರು ಮಳೆಯಾಗುತ್ತಿದೆ. ವಾಯುಭಾರ ಕುಸಿತದ ಪರಿಣಾಮವಾಗಿ ಮಳೆಯಾಗುತ್ತಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹೇಳಿದೆ.

ಚೆನ್ನೈನಲ್ಲಿ ಭಾರೀ ಮಳೆ, ಬೆಂಗಳೂರಿನಲ್ಲಿ ಜಿಟಿಜಿಟಿ

rain

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಮೋಡ ಕವಿದ ವಾತಾವರಣ ಮುಂದುವರೆಯಲಿದೆ. ವಾಯುಭಾರ ಕುಸಿತದ ಪ್ರಭಾವ ಕಡಿಮೆಯಾದ ಬಳಿಕ, ಮಳೆ ಮತ್ತು ಶೀತಗಾಳಿಯೂ ಕಡಿಮೆಯಾಗಲಿದೆ ಎಂದು ಕೇಂದ್ರ ಮಾಹಿತಿ ನೀಡಿದೆ.

ಈಶಾನ್ಯ ಭಾಗದಿಂದ ತೇವಾಂಶ ಭರಿತ ಗಾಳಿ ಬೀಸುತ್ತಿರುವ ಪರಿಣಾಮ ರಾಜ್ಯದಲ್ಲಿ ಚಳಿಯ ಅನುಭವಾಗುತ್ತಿದೆ. ಬೆಂಗಳೂರು ನಗರದಲ್ಲಿ ಸರಾಸರಿ 19 ಡಿಗ್ರಿ ಸೆಲ್ಸಿಯಸ್‌ನಷ್ಟು ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬಾಗಲಕೋಟೆಯಲ್ಲಿ 13.4, ವಿಜಯಪುರದಲ್ಲಿ 13, ಧಾರವಾಡದಲ್ಲಿ 14.2 ರಷ್ಟು ಉಷ್ಣಾಂಶ ದಾಖಲಾಗಿದೆ.

ಕೊಚ್ಚಿಹೋಗುವಷ್ಟು ಮಳೆಯಾದರೂ ಯಾದಗಿರಿಯ ಈ ಪ್ರದೇಶದಲ್ಲಿ ಕುಡಿವ ನೀರಿಲ್ಲ!

ಬೆಂಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ತುಂತುರು ಮಳೆಯಾಗುತ್ತಿದೆ. ಇನ್ನೂ ಎರಡು ದಿನಗಳ ಕಾಲ ಬೆಂಗಳೂರು ಮತ್ತು ವಿವಿಧ ಜಿಲ್ಲೆಗಳಲ್ಲಿ ತುಂತುರು ಮಳೆ ಮುಂದುವರೆಯಲಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹೇಳಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Due to depression in Bay of Bengal Bengaluru an other districts of state have been receiving rainfall. Rain will continue for two more days, said Karnataka State Natural Disaster Monitoring Centre.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ