ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಮಳೆ, ಹಲವೆಡೆ ಟ್ರಾಫಿಕ್‌ ಜಾಮ್

By Nayana
|
Google Oneindia Kannada News

ಬೆಂಗಳೂರು, ಮೇ 14: ಬೆಂಗಳೂರು ನಗರದಲ್ಲಿ ಕೆಲವೆಡೆ ಗಾಳಿ ಸಹಿತ ಆಲಿಕಲ್ಲು ಮಳೆಯಾಗಿದ್ದು ಅನೇಕ ಕಡೆಗಳಲ್ಲಿ ವಾಹನ ಸಂಚಾರ ಅಸ್ತವ್ಯಸ್ತವಾಗಿದೆ. ಎಂಜಿರಸ್ತೆ, ಮಲ್ಲೇಶ್ವರ, ವಿಧಾನಸೌಧ, ಟ್ರಿನಿಟಿ ವೃತ್ತ, ಕೆಆರ್‌ ಮಾರುಕಟ್ಟೆ, ರೇಸ್‌ಕೋರ್ಸ್‌ ರಸ್ತೆ ಸುತ್ತಮುತ್ತಲ ಪ್ರದೇಶದಲ್ಲಿ ಉತ್ತಮ ಮಳೆಯಾಗಿದೆ.

ಇನ್ನು ಹಲವೆಡೆ ಮೋಡ ಕವಿದ ವಾತಾವರಣವಿದ್ದು ಮಳೆ ಬರುವ ಸಾಧ್ಯತೆಗಳು ಗೋಚರಿಸಿದೆ. ಇನ್ನು ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇದೆ, ಇನ್ನೆರಡು ದಿನ ಮಳೆಯ ಅಬ್ಬರವಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನ ಹಲವೆಡೆ ಮತ್ತೆ ಮಳೆ: ಮೇ 15ರವರೆಗೂ ಸಾಧ್ಯತೆ ಬೆಂಗಳೂರಿನ ಹಲವೆಡೆ ಮತ್ತೆ ಮಳೆ: ಮೇ 15ರವರೆಗೂ ಸಾಧ್ಯತೆ

ಲಕ್ಷದ್ವೀಪ ಮತ್ತು ತಮಿಳುನಾಡು ಭಾಗದಲ್ಲಿ ಮೇಲ್ಮೈ ಸುಳಿಗಾಳಿ ನಿರ್ಮಾಣವಾಗಿದೆ. ದಕ್ಷಿಣ ಒಳನಾಡು ಹಾದುಹೋಗುವಂತೆ ಉತ್ತರ ಕರ್ನಾಟಕದಿಂದ ತಮಿಳುನಾಡಿನ ದಕ್ಷಿಣ ಭಾಗದವರೆಗೆ ಟ್ರಫ್ ನಿರ್ಮಾಣವಾಗಿದೆ. ಇದರ ಪ್ರಭಾವದಿಂದಲೇ ಮಳೆ ಮುನ್ಸೂಚನೆ ನೀಡಲಾಗಿದೆ.

Rain with hail stone brings chill in Bengaluru

ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 32ಡಿಗ್ರಿ ಸೆಲ್ಸಿಯಸ್, ಕನಿಷ್ಠ 216ಡಿಗ್ರಿ ಸೆಲ್ಸಿಯಸ್, ಕೆಐಎಎಲ್‌ನಲ್ಲಿ ಗರಿಷ್ಠ 32.6ಡಿಗ್ರಿ ಸೆಲ್ಸಿಯಸ್, ಕನಿಷ್ಠ 20ಡಿಗ್ರಿ ಸೆಲ್ಸಿಯಸ್, ಎಚ್‌ಎಎಲ್‌ನಲ್ಲಿ ಗರಿಷ್ಠ 32.1ಡಿಗ್ರಿ ಸೆಲ್ಸಿಯಸ್, ಕನಿಷ್ಠ 20.9 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಇನ್ನು 48 ಗಂಟೆಗಳ ಕಾಲ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ.

English summary
Rain with hail stone at various place in Bangalore has brought chilled weather on Monday afternoon.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X