• search
For bengaluru Updates
Allow Notification  

    ಆರ್.ಆರ್.ನಗರ ಫಲಿತಾಂಶ : 2724 ನೋಟಾ ಮತ ಚಲಾವಣೆ!

    By Gururaj
    |

    ಬೆಂಗಳೂರು, ಮೇ 31 : ವಿವಾದಗಳಿಂದಲೇ ಸುದ್ದಿ ಮಾಡಿದ್ದ ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಚುನಾವಣಾ ಫಲಿತಾಂಶ ಇಂದು ಪ್ರಕಟವಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ಅವರು 25 ಸಾವಿರ ಮತಗಳ ಅಂತರದಿಂದ ಜಯಗಳಿಸಿದ್ದಾರೆ.

    ರಾಜರಾಜೇಶ್ವರಿ ನಗರ ಕ್ಷೇತ್ರದ ಚುನಾವಣಾ ಫಲಿತಾಂಶದಲ್ಲಿ ಕುತೂಹಲ ಹುಟ್ಟಿಸಿರುವುದು ನೋಟಾ ಮತಗಳು.2,724 ನೋಟಾ ಮತಗಳು ಕ್ಷೇತ್ರದಲ್ಲಿ ಚಲಾವಣೆಯಾಗಿವೆ.

    ರಾಜರಾಜೇಶ್ವರಿ ನಗರ ಫಲಿತಾಂಶ LIVE: ನೋಟಾ 633, ಹುಚ್ಚಾ ವೆಂಕಟ್ 145!

    ನೋಟಾ (ಮೇಲಿನ ಯಾವ ಅಭ್ಯರ್ಥಿಗಳೂ ನನ್ನ ಆಯ್ಕೆ ಅಲ್ಲ) ಎಂದು 2724 ಜನರು ಮತ ಹಾಕಿದ್ದು, ಕುತೂಹಲಕ್ಕೆ ಕಾರಣವಾಗಿದೆ. ರಾಜರಾಜೇಶ್ವರಿ ನಗರದ ಚುನಾವಣಾ ಕಣ ಚುನಾವಣಾ ದಿನಾಂಕ ಘೋಷಣೆಗೂ ಮೊದಲೇ ಭಾರೀ ಸುದ್ದಿ ಮಾಡಿತ್ತು.

    ಬಿಜೆಪಿ ಬಹುಮತದ ಕನಸು ಭಗ್ನಗೊಳಿಸಿದ್ದು 'ನೋಟಾ'

    Rajarajeshwari Nagar : More than 900 NOTA votes registered

    ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ಅವರು ಕ್ಷೇತ್ರದಲ್ಲಿ ಕುಕ್ಕರ್, ಸೀರೆ, ನೀರಿನ ಕ್ಯಾನ್ ಹಂಚಿಕೆ ಮಾಡಿ ಮತದಾರರಿಗೆ ಆಮಿಷವೊಡ್ಡಿದ್ದಾರೆ ಎಂಬ ಆರೋಪಗಳು ಕೇಳಿಬಂದಿತ್ತು. ಮೇ 6ರಂದು ಕ್ಷೇತ್ರದ ವ್ಯಾಪ್ತಿಯಲ್ಲಿ 95 ಲಕ್ಷಕ್ಕೂ ಅಧಿಕ ಹಣ ಟ್ರಕ್‌ನಲ್ಲಿ ಪತ್ತೆಯಾಗಿತ್ತು.

    ಆರ್.ಆರ್.ನಗರ ಚುನಾವಣೆ ಮುಂದೂಡಿದ್ದು ಏಕೆ?

    ಜಾಲಹಳ್ಳಿ ಸಮೀಪದ ಎಸ್‌ಎಲ್‌ವಿ ಅಪಾರ್ಟ್‌ಮೆಂಟ್‌ನಲ್ಲಿ 9,746 ವೋಟರ್ ಐಡಿಗಳನ್ನು ಚುನಾವಣಾ ಆಯೋಗ ವಶಕ್ಕೆ ಪಡೆದುಕೊಂಡಿತ್ತು. ಈ ಕುರಿತು ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಈ ಎಲ್ಲಾ ಬೆಳವಣಿಗೆಗಳ ಹಿನ್ನಲೆಯಲ್ಲಿ ಜನರು ಹೆಚ್ಚು ನೋಟಾ ಮತಗಳನ್ನು ಹಾಕಿರುವ ಸಾಧ್ಯತೆ ಇದೆ.

    ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

    ಇನ್ನಷ್ಟು ಬೆಂಗಳೂರು ಸುದ್ದಿಗಳುView All

    English summary
    Rajarajeshwari Nagar assembly election result announced. 2724 None of the Above (NOTA) votes registered in assembly constituency.

    Oneindia ಬ್ರೇಕಿಂಗ್ ನ್ಯೂಸ್,
    ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X
    We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more