ರಾಜೀವ್ ಗಾಂಧಿ ಆರೋಗ್ಯ ವಿವಿ ವೆಬ್‌ಸೈಟ್‌ ಹ್ಯಾಕ್‌

Posted By:
Subscribe to Oneindia Kannada

ಬೆಂಗಳೂರು, ಆಗಸ್ಟ್ 26 : ಬೆಂಗಳೂರಿನ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ವೆಬ್‌ಸೈಟ್ ಹ್ಯಾಕ್ ಆಗಿದೆ. ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಈ ಕುರಿತು ದೂರು ದಾಖಲಾಗಿದೆ.

ವಿವಿಯ ಮೌಲ್ಯಮಾಪನ ವಿಭಾಗದ ಕುಲಸಚಿವರು ಕೆಲವು ಮಾಹಿತಿ ಅಪ್‌ಲೋಡ್ ಮಾಡಲು ತಮ್ಮ  ಯೂಸರ್‌ ಐಡಿ ಬಳಸಿ  ಲಾಗ್‍ ಇನ್‍ ಆಗಲು ಪ್ರಯತ್ನಿಸಿದ್ದರು. ಈ ವೇಳೆ ವೆಬ್‌ಸೈಟ್ ಹ್ಯಾಕ್‌ ಆಗಿರುವುದು ಬೆಳಕಿಗೆ ಬಂದಿದೆ. ತಕ್ಷಣ ಪೊಲೀಸರಿಗೆ ದೂರು ನೀಡಲಾಗಿದೆ.[ಬೆಂಗಳೂರು ಸೈಬರ್ ಕ್ರೈಂ ಪೊಲೀಸ್ ಠಾಣೆ ಹೇಗಿದೆ ಗೊತ್ತಾ?]

cyber crime

ವಿವಿಯ www.rguhs.ac.in ವೆಬ್‌ಸೈಟ್‌ನಲ್ಲಿರುವ ಕೆಲವು ಮಾಹಿತಿಗಳನ್ನು ಕದಿಯಲಾಗಿದೆ. ಈ ಬಗ್ಗೆ ತನಿಖೆ ನಡೆಸಿ ಎಂದು ವಿವಿಯ ಕುಲಪತಿ ಡಾ.ಕೆ.ಎಸ್‌. ರವೀಂದ್ರನಾಥ್‌ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಪರೀಕ್ಷಾ ವಿಭಾಗದ ಸರ್ವರ್‌ನಲ್ಲಿದ್ದ ಮಾಹಿತಿಯನ್ನು ವೆಬ್‌ಸೈಟ್‌ಗೆ ಅಪ್‌ಲೋಡ್‌ ಮಾಡಲಾಗಿತ್ತು. ಆ ಮಾಹಿತಿಯನ್ನು ಹ್ಯಾಕ್‌ ಮಾಡಲಾಗಿದೆ.[ಸಿಲಿಕಾನ್ ಸಿಟಿ ಬೆಂಗಳೂರು ಈಗ 'ಸೈಬರ್ ಕ್ರೈಂ' ರಾಜಧಾನಿ]

ಕುಲಪತಿ ಕೆ.ಎಸ್‌. ರವೀಂದ್ರನಾಥ್‌ ಅವರು ವೆಬ್‌ಸೈಟ್ ಹ್ಯಾಕ್ ಆಗಿರುವ ಬಗ್ಗೆ ಮಾಹಿತಿ ನೀಡಿದ್ದು, 'ಪರೀಕ್ಷಾ ಅರ್ಜಿಗಳ ಮಾಹಿತಿಯನ್ನು ಅಪ್‌ಲೋಡ್‌ ಮಾಡಲಾಗಿತ್ತು. ಅದನ್ನು ಬಿಟ್ಟರೆ ಬೇರೆ ಯಾವುದೇ ಮಾಹಿತಿ ಇರಲಿಲ್ಲ. ಮಾಹಿತಿ ದುರುಪಯೋಗವಾಗಬಾರದು ಎಂದು ದೂರು ನೀಡಲಾಗಿದೆ' ಎಂದು ಹೇಳಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Bengaluru Rajiv Gandhi University of Health Sciences (RGUHS) website was hacked. University lodged one complaint at the Tilak Nagar police station and another at the cyber crime police station.
Please Wait while comments are loading...