ರವೀಂದ್ರ ಕಲಾಕ್ಷೇತ್ರದಲ್ಲಿ ಏ.24ರಂದು ರಾಜ್ ಜನ್ಮದಿನೋತ್ಸವ

Posted By:
Subscribe to Oneindia Kannada

ಬೆಂಗಳೂರು, ಏಪ್ರಿಲ್ 23 : ರಾಜ್ಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಶ್ರಯದಲ್ಲಿ ದಿವಂಗತ ಡಾ. ರಾಜ್ ಕುಮಾರ್ ಅವರ 88ನೇ ಜನ್ಮದಿನದ ಅಂಗವಾಗಿ ಏಪ್ರಿಲ್ 24ರಂದು ಸಂಜೆ 6 ಗಂಟೆಗೆ ಬೆಂಗಳೂರಿನ ಜೆ.ಸಿ. ರಸ್ತೆಯಲ್ಲಿನ ರವೀಂದ್ರ ಕಲಾಕ್ಷೇತ್ರದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಸಮಾರಂಭದ ಉದ್ಫಾಟನೆಯನ್ನು ರಾಜ್ಯ ಮೂಲಭೂತ ಸೌಲಭ್ಯ ಅಭಿವೃದ್ದಿ, ವಾರ್ತಾ ಹಾಗೂ ಹಜ್ ಖಾತೆ ಸಚಿವ ಆರ್. ರೋಷನ್ ಬೇಗ್ ಅವರು ನೆರವೇರಿಸಲಿದ್ದಾರೆ. ಕೇಂದ್ರ ರಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಅನಂತಕುಮಾರ್, ವಿಧಾನ ಪರಿಷತ್ ಸಭಾಪತಿ ಡಿ.ಹೆಚ್. ಶಂಕರಮೂರ್ತಿ, ರಾಜ್ಯ ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಅವರು ಉಪಸ್ಥಿತರಿರಲಿದ್ದಾರೆ.

ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಬೆಂಗಳೂರು ಅಭಿವೃದ್ಧಿ ಹಾಗೂ ನಗರ ಯೋಜನೆ ಸಚಿವ ಕೆ.ಜೆ. ಜಾರ್ಜ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ, ಉಪಸಭಾಪತಿ ಮರೀತಿಬ್ಬೇಗೌಡ, ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್, ಉಪಾಧ್ಯಕ್ಷ ಎನ್.ಹೆಚ್. ಶಿವಶಂಕರರೆಡ್ಡಿ, ಹಿರಿಯ ಚಲನಚಿತ್ರ ನಿರ್ಮಾಪಕರಾದ ಪಾರ್ವತಮ್ಮ ರಾಜ್‌ಕುಮಾರ್ ಅವರು ಪಾಲ್ಗೊಳ್ಳಲಿದ್ದಾರೆ. [ಪ್ರತಿಯೊಬ್ಬರೂ ನೋಡಲೇಬೇಕಾದ ರಾಜ್ ಕುರಿತ ವಿಡಿಯೋ]

Rajkumar birthday celebration at Ravindra Kalakshetra

ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಆರ್.ವಿ. ದೇವರಾಜ್ ವಹಿಸುವರು. ಸಮಾರಂಭದಲ್ಲಿ ಕನ್ನಡ ಚಿತ್ರರಂಗದ ಪ್ರಮುಖ ಕಲಾವಿದರಾದ ಡಾ. ಶ್ರೀನಾಥ್, ವಿ. ರವಿಚಂದ್ರನ್, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಕೃತಿ 'ಡಾ. ರಾಜ್‌ಕುಮಾರ್ ಸಮಗ್ರ ಚರಿತ್ರೆ'ಯ ಲೇಖಕ ದೊಡ್ಡ ಹಲ್ಲೂರು ರುಕ್ಕೋಜಿ, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಎಸ್.ವಿ. ರಾಜೇಂದ್ರಸಿಂಗ್ ಬಾಬು, ಕಂಠೀರವ ಸ್ಟುಡಿಯೋ ಅಧ್ಯಕ್ಷರಾದ ವಿಜಯಲಕ್ಷ್ಮೀ ಅರಸು ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ. ರಾ. ಗೋವಿಂದು ಅವರು ಭಾಗವಹಿಸುತ್ತಿದ್ದಾರೆ.

ಅಂದು ಸಂಜೆ 5 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಹಿನ್ನಲೆ ಗಾಯಕಿ ಡಾ. ಶಮಿತಾ ಮಲ್ನಾಡ್ ಮತ್ತು ತಂಡದವರಿಂದ ಡಾ. ರಾಜ್‌ಕುಮಾರ್ ಅವರ ಅಭಿನಯದ ಚಲನಚಿತ್ರಗಳ ಗಾಯನ ಹಾಗೂ ನೃತ್ಯ ಪ್ರದರ್ಶನ ಏರ್ಪಡಿಸಲಾಗಿದೆ. [ರಾಜ್ ಯೂಸ್ಲೆಸ್ ನಟ ಅನ್ನೋಕೆ ಎಷ್ಟು ಧೈರ್ಯ ಇವನಿಗೆ?]

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Natasarvabhouma Dr Rajkumar's 88th birthday will be celebrated by Karnataka information and public relations department at Ravindra Kalakshetra on JC Road in Bengaluru on 24th April, 2016. Parvathamma Rajkumar and other degnitaries will be participating.
Please Wait while comments are loading...