ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

3 ದಿನಗಳಲ್ಲಿ ಶಾಸಕ ಸ್ಥಾನಕ್ಕೆ ರಮೇಶ್ ರಾಜೀನಾಮೆ: ಸ್ಪಷ್ಟನೆ

|
Google Oneindia Kannada News

Recommended Video

ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಲಿದ್ದಾರಾ? | Oneindia Kannada

ಬೆಂಗಳೂರು, ಡಿಸೆಂಬರ್ 24: ರಮೇಶ್ ಜಾರಕಿಹೊಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎನ್ನುವ ಊಹಾಪೋಹಗಳಿಗೆ ತೆರೆ ಬಿದ್ದಿದೆ.

ರಮೇಶ್ ಜಾರಕಿಹೊಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡ್ತಾರಾ? ರಮೇಶ್ ಜಾರಕಿಹೊಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡ್ತಾರಾ?

ಇನ್ನು 3 ದಿನಗಳಲ್ಲಿ ರಾಜೀನಾಮೆ ನೀಡುತ್ತೇನೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಾನು ರಾಜೀನಾಮೆ ನೀಡುವುದು ಸತ್ಯ, ಇನ್ನು ಮೂರು ದಿನಗಳಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ.

ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಅವರ ಜೊತೆಗೆ ಚರ್ಚೆ ನಡೆಸುವುದಿಲ್ಲ, ಹಾಗೆಯೇ ಬಿಜೆಪಿಗೂ ಹೋಗುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಸಚಿವ ಸಂಪುಟದಿಂದ ತಮ್ಮನ್ನು ಕೈಬಿಟ್ಟಿರುವ ವಿಚಾರದಲ್ಲಿ ರಮೇಶ್ ಜಾರಕಿಹೊಳಿಗೆ ಬೇಸರವಾಗಿದ್ದು, ಅದರಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಾರೆ ಎನ್ನುವುದು ಗುಟ್ಟಾಗಿ ಉಳಿದಿಲ್ಲ.

ಈಗಾಗಲೇ ರಮೇಶ್ ಅವರು ಬಿಜೆಪಿಗೆ ಸೇರುತ್ತಿದ್ದಾರೆ ಎನ್ನುವ ಗುಸುಗುಸು ಕಾಂಗ್ರೆಸ್ ವಲಯದಲ್ಲಿ ಓಡಾಡಿತ್ತು. ಆದರೆ ನಾನು ಯಾವುದೇ ಕಾರಣಕ್ಕೂ ಬಿಜೆಪಿ ಸೇರುವುದಿಲ್ಲ.

ಆದರೆ ಕಾಂಗ್ರೆಸ್‌ನ ಶಾಸಕ ಸ್ಥಾನದಲ್ಲೂ ಇರುವುದಿಲ್ಲ ಇನ್ನು ಮೂರ್ನಾಲ್ಕು ದಿನಗಳಲ್ಲಿ ರಾಜೀನಾಮೆ ನೀಡುತ್ತೇನೆ, ರಾಜೀನಾಮೆ ಎಂದು ನೀಡುತ್ತೇನೆ ಎನ್ನುವುದನ್ನು ಕೂಡ ಬಹಿರಂಗಪಡಿಸುತ್ತೇನೆ ಎಂದು ತಿಳಿಸಿದ್ದಾರೆ.

ಐದಾರು ಬಾರಿ ಸಂಪುಟ ಸಭೆಗೆ ಗೈರು

ಐದಾರು ಬಾರಿ ಸಂಪುಟ ಸಭೆಗೆ ಗೈರು

ಕಳೆದ ಐದರಿಂದ ಆರು ಬಾರಿ ಸಚಿವ ಸಂಪುಟ ಸಭೆಗೆ ಹೋಗಿರಲಿಲ್ಲ. ಉರಿಯುವ ಬೆಂಕಿಗೆ ತುಪ್ಪ ಸುರಿದರು ಎಂಬಂತೆ ಮೊದಲೆ ಅಸಮಾಧಾನಗೊಂಡಿದ್ದ ರಮೇಶ್ ಜಾರಕಿಹೊಳಿಯನ್ನು ಸಂಪುಟದಿಂದ ಕೈ ಬಿಡಲಾಗಿತ್ತು. ಅವರ ಬದಲಿಗೆ ಸಹೋದರ ಸತೀಶ್ ಜಾರಕಿಹೊಳಿಯನ್ನು ಸಂಪುಟಕ್ಕೆ ತೆಗೆದುಕೊಳ್ಳುವ ಮೂಲಕ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯುವ ಪ್ರಯತ್ನವನ್ನು ಶಾಸಕಾಂಗ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ ನಡೆಸಿದರು.

ಆಡಳಿತ ಸ್ಥಾನದಲ್ಲಿದ್ದು ವಿರೋಧ ಪಕ್ಷ ಸ್ಥಾನ ನಿಭಾಯಿಸಿದ್ದರು

ಆಡಳಿತ ಸ್ಥಾನದಲ್ಲಿದ್ದು ವಿರೋಧ ಪಕ್ಷ ಸ್ಥಾನ ನಿಭಾಯಿಸಿದ್ದರು

ಕಾಂಗ್ರೆಸ್-ಜೆಡಿಎಸ್ ಸರ್ಕಾರ ರಚನೆಯಾದ ಮೇಲೆ ಆಡಳಿತ ಪಕ್ಷದಲ್ಲಿದ್ದರೂ ರಮೇಶ್ ಜಾರಕಿಹೊಳಿ ಒಂದು ರೀತಿ ವಿರೋಧ ಪಕ್ಷದ ನಾಯಕರ ಸ್ಥಾನವನ್ನು ನಿಭಾಯಿಸಿದ್ದರು. ಬೆಳಗಾವಿ ರಾಜಕಾರಣದಲ್ಲಿ ಸಚಿವ ಡಿ.ಕೆ.ಶಿವಕುಮಾರ್ ಹಸ್ತಕ್ಷೇಪ, ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ ಚುನಾವಣೆ, ಅಧಿಕಾರಿಗಳ ವರ್ಗಾವಣೆ ಸೇರಿದಂತೆ ಹಲವು ವಿಷಯಗಳಲ್ಲಿ ಅವರು ಸರ್ಕಾರದ ವಿರುದ್ಧ ಅಸಮಾಧಾನಗೊಂಡಿದ್ದರು.

ಕಾಂಗ್ರೆಸ್‌ಗೆ ಅಪಾಯ ಕಟ್ಟಿಟ್ಟ ಬುತ್ತಿ

ಕಾಂಗ್ರೆಸ್‌ಗೆ ಅಪಾಯ ಕಟ್ಟಿಟ್ಟ ಬುತ್ತಿ

ಮೊದಲೇ ಸರಳ ಬಹುಮತದಲ್ಲಿರುವ ಕಾಂಗ್ರೆಸ್-ಜೆಡಿಎಸ್ ನೇತೃತ್ವದ ಸರ್ಕಾರಕ್ಕೆ ಇನ್ನು ಕೆಲವು ಶಾಸಕರು ರಾಜೀನಾಮೆ ನೀಡಿದರೆ ಅಪಾಯ ಕಟ್ಟಿಟ್ಟ ಬುತ್ತಿ. ಇಂದು ಬೆಳಗ್ಗೆ ರಮೇಶ್ ಜಾರಕಿಹೊಳಿ ತಮ್ಮ ಆಪ್ತರೊಬ್ಬರ ಜೊತೆ ದೂರವಾಣಿಯಲ್ಲಿ ಮಾತನಾಡುತ್ತಿದ್ದರು. ಈ ವೇಳೆ ಅವರ ಬೆಂಬಲಿಗನೊಬ್ಬ ಅಣ್ಣಾ ನಿಮ್ಮನ್ನು ಸಚಿವ ಸ್ಥಾನದಿಂದ ಕೈಬಿಟ್ಟು ಅಪಮಾನ ಮಾಡಿದ್ದಾರೆ ಎಂದು ನೋವು ತೋಡಿಕೊಳ್ಳುತ್ತಾನೆ.

ಸಚಿವ ಸ್ಥಾನವೇ ಹೋದ ಮೇಲೆ ಯಾಕೆ ಶಾಸಕ ಸ್ಥಾನ

ಸಚಿವ ಸ್ಥಾನವೇ ಹೋದ ಮೇಲೆ ಯಾಕೆ ಶಾಸಕ ಸ್ಥಾನ

ಸಚಿವ ಸ್ಥಾನವೇ ಹೋದ ಮೇಲೆ ನನಗೆ ಶಾಸಕ ಸ್ಥಾನ ಏಕೆ, ಮುಂದಿನ ವಾರ ರಾಜೀನಾಮೆ ನೀಡುತ್ತೇನೆ ಎಂದು ರಮೇಶ್ ಜಾರಕಿಹೊಳಿ ತಮ್ಮ ಆಪ್ತರ ಜೊತೆ ದೂರವಾಣಿಯಲ್ಲಿ ಮಾತನಾಡಿರುವುದು ಬಹಿರಂಗಗೊಂಡಿದೆ. ಒಂದು ವೇಳೆ ರಮೇಶ್ ಜಾರಕಿಹೊಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ದೋಸ್ತಿ ಸರ್ಕಾರಕ್ಕೆ ಬಹುದೊಡ್ಡ ಕಂಟಕ ಎದುರಾಗುವುದರಲ್ಲಿ ಸಂದೇಹವಿಲ್ಲ.

English summary
Former minister Ramesh Jarkiholi clarified that He will give resignation to MLA post within 3 days.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X