ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅತ್ಯಾಚಾರ ಎಸಗುವವರ ವಿರುದ್ಧ ಗೂಂಡಾ ಕಾಯ್ದೆ: ಜಿ. ಪರಮೇಶ್ವರ

By Ananthanag
|
Google Oneindia Kannada News

ಬೆಂಗಳೂರು, ಫೆಬ್ರವರಿ 7: ಮಹಿಳೆಯರು ಮತ್ತು ಮಕ್ಕಳ ಮೇಲೆ ಅತ್ಯಾಚಾರ ನಡೆಸುವ ಆರೋಪಿಗಳ ವಿರುದ್ಧ ಗೂಂಡಾ ಕಾಯ್ದೆ ಅನ್ವಯ ಕೇಸು ದಾಖಲಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ತಿಳಿಸಿದರು.

ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಶಾಸಕಿ ಶಶಿಕಲಾ ಹಾಗೂ ಜೆಡಿಎಸ್ ಶಾಸಕ ಕೆ.ಗೋಪಾಲಯ್ಯ ಅವರ ಪಶ್ನೆಗಳಿಗೆ ಉತ್ತರ ನೀಡಿದ ಗೃಹಸಚಿವರು, ಮಕ್ಕಳು ಮತ್ತು ಮಹಿಳೆಯರು ಮೇಲೆ ದೌರ್ಜನ್ಯ ತೆಡೆಗೆ ಗೂಂಡಾ ಕಾಯ್ದೆಯ ಕೇಸು ದಾಖಲಿಸಲಾಗುವುದು, ಅವರ ರಕ್ಷಣೆಗಾಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪ್ರತ್ಯೇಕವಾಗಿ ಮಹಿಳಾ ಕೆ.ಎಸ್.ಆರ್.ಪಿ ಬೆಟಾಲಿಯಾನ್ ಅಸ್ತ್ವಿತ್ವಕ್ಕೆ ತರಲಾಗುತ್ತಿದೆ. ಅಲ್ಲದೆ ಗಸ್ತು ತಿರುಗಲು ಅಭಯ ಎಂಬ ಗಸ್ತುವಾಹವನ್ನು ಒದಿಗಿಸಲಾಗುತ್ತಿದೆ ಎಂದರು.[ಲೈಂಗಿಕ ಪ್ರಕರಣ: ಮಹಿಳಾ ಆಯೋಗದ ವಿರುದ್ಧ ಕಾಂಗ್ರೆಸ್ ಕಿಡಿ]

rape on women and children, accused against filed the goonda act case: G.Parameshwara

2016 ರಲ್ಲಿ 303 ಮಹಿಳೆಯರ ಮೇಲಿನ ಹಲ್ಲೆ ಪ್ರಕರಣ, 1423 ದೌರ್ಜನ್ಯ ಪ್ರಕರಣ ದಾಖಲಾಗಿವೆ. 923 ಲೈಂಗಿಕ ಕಿರುಕುಳದಂತಹ ಪ್ರಕರಣಗಳು ದಾಖಲಾಗಿದ್ದರೆ, 255 ಸರಗಳ್ಳತನ ಪ್ರಕರಣ ದಾಖಲಾಗಿವೆ. ಇದರಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಕುರಿತ 1423 ಪ್ರಕರಣಗಳು ಪತ್ತೆಯಾಗಿವೆ. 743 ಲೈಂಗಿಕ ಕಿರುಕುಳ ಹಾಗೂ 150 ಸರಗಳ್ಳತನವನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.

ಇನ್ನು ಠಾಣೆಗಳಿಗೆ 20 ಸಾವಿರ ಪೊಲೀಸ್ ಕಾನ್ಸ್ ಸ್ಟೆಬಲ್ ಗಳು ಹಾಗೂ 1ಸಾವಿರ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಗಳನ್ನು ನೇಮಕ ಮಾಡಿಕೊಳ್ಳುವ ಚಿಂತನೆ ನಡೆಸಲಾಗಿದೆ. ಬೆಂಗಳೂರು ನಗರದಲ್ಲಿಯೇ 160 ಸಬ್ ಇನ್ಸ್ ಪೆಕ್ಟರ್ ಗಳು ಕೆಲಸ ಮಾಡುತ್ತಿದ್ದಾರೆ. ಜೊತೆಗೆ 2 ಸಾವಿರ ಕಾನ್ಸ್ ಸ್ಟೆಬಲ್ ಗಳನ್ನು ನೇಮಕ ಮಾಡಿಕೊಳ್ಳಲಾಗುವುದುವುದು. ಬೆಂಗಳೂರಿನಲ್ಲಿ ಇನ್ನೆರಡು ತಿಂಗಳಲ್ಲಿ 500 ಸಿಸಿಟಿವಿ ಕ್ಯಾಮೆರಾಗಳನ್ನು ಹೆಚ್ಚುವರಿಯಾಗಿ ಅಳವಡಿಸಲಾಗುವುದು ಇದರಿಂದ ಅಪರಾಧಗಳ ಸಂಖ್ಯೆ ಕ್ರಮೇಣ ಇಳಿಕೆಯಾಗುತ್ತದೆ ಎಂದು ತಿಳಿಸಿದರು.

English summary
Who carrying out rape on women and children, that accused against filed the case Application of goonda Act says, Home minister G.Parameshwara in Assembly.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X