ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸರಗಳ್ಳನನ್ನು ಹಿಡಿದಿದ್ದ ಚಂದ್ರಕುಮಾರ್‌ಗೆ ಸನ್ಮಾನ, ಉಡುಗೊರೆ

By Gururaj
|
Google Oneindia Kannada News

ಬೆಂಗಳೂರು, ಜೂನ್ 25 : ಕುಖ್ಯಾತ ಸರಗಳ್ಳ ಅಚ್ಚುತ್ ಕುಮಾರ್ ಬಂಧಿಸಿದ್ದ ಪೇದೆ ಚಂದ್ರಕುಮಾರ್‌ನನ್ನು ರವಿ ಡಿ.ಚನ್ನಣ್ಣನವರ್ ಇಂದು ಸನ್ಮಾನಿಸಿದರು. 1 ಲಕ್ಷ ರೂ. ನಗದು, ಒಂದು ಪಲ್ಸರ್ ಬೈಕ್‌ ಅನ್ನು ಬಹುಮಾನವಾಗಿ ಅವರಿಗೆ ನೀಡಲಾಗಿದೆ.

ಬೆಂಗಳೂರಿನ ದಕ್ಷಿಣ ವಿಭಾಗದ ಡಿಸಿಪಿ ರವಿ ಡಿ.ಚನ್ನಣ್ಣನವರ್ ಅವರು ಸೋಮವಾರ ಜ್ಞಾನ ಭಾರತಿ ಪೊಲೀಸ್ ಠಾಣೆಯ ಮುಖ್ಯಪೇದೆ ಚಂದ್ರಕುಮಾರ್ ಅವರನ್ನು ಸನ್ಮಾನಿಸಿದರು. ರಜೆ ನೀಡಿ ಕುಟುಂಬ ಸಮೇತ ಪ್ರವಾಸ ಹೋಗಲು ಅವಕಾಶ ನೀಡಿದರು.

ಸರಗಳ್ಳನನ್ನು ಹಿಡಿದ ಪೇದೆಗೆ ಒಂದು ತಿಂಗಳ ರಜೆ ಜೊತೆ ಹಲವು ಇನಾಮು ಸರಗಳ್ಳನನ್ನು ಹಿಡಿದ ಪೇದೆಗೆ ಒಂದು ತಿಂಗಳ ರಜೆ ಜೊತೆ ಹಲವು ಇನಾಮು

ಜೂನ್ 17ರ ರಾತ್ರಿ ಸುಮಾರು 8 ಗಂಟೆಯ ವೇಳೆಗೆ ಪಲ್ಸರ್ ಬೈಕ್‌ನಲ್ಲಿ ಹೋಗುತ್ತಿದ್ದ ಕುಖ್ಯಾತ ಸರಗಳ್ಳ ಅಚ್ಚುತ್ ಕುಮಾರ್ ಅವರ ಬೈಕ್ ಹಿಂಬಾಲಿಸಿದ್ದ ಚಂದ್ರಕುಮಾರ್ ಬೈಕ್‌ಗೆ ಡಿಕ್ಕಿ ಹೊಡೆದು ಅಚ್ಚುತ್ ಕುಮಾರ್ ಕೆಳಗೆ ಬೀಳಿಸಿ ಅವರನ್ನು ಬಂಧಿಸಿ ಸಾಹಸ ಮೆರೆದಿದ್ದರು.

Ravi D Channannavar honoured head constable Chandra Kumar

ಬೆಂಗಳೂರು ಮತ್ತು ತುಮಕೂರು ನಗರದಲ್ಲಿ ಸುಮಾರು 70 ಸರಗಳ್ಳತನ ಪ್ರಕರಣದಲ್ಲಿ ಅಚ್ಚುತ್ ಕುಮಾರ್ ಭಾಗಿಯಾಗಿದ್ದು, ಬೆಂಗಳೂರು ಪೊಲೀಸರು ಆತನಿಗಾಗಿ ನಿರಂತರವಾಗಿ ಹುಡುಕಾಟ ನಡೆಸುತ್ತಿದ್ದರು. ಚಂದ್ರಕುಮಾರ್‌ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತರು 1 ಲಕ್ಷ ರೂ. ಬಹುಮಾನ ಘೋಷಣೆ ಮಾಡಿದ್ದರು.

ಇಂದು ಪಶ್ಚಿಮ ವಿಭಾಗದ ಡಿಸಿಪಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಚಂದ್ರಕುಮಾರ್‌ ಅವರನ್ನು ಸನ್ಮಾನಿಸಿದ ರವಿ ಡಿ.ಚನ್ನಣ್ಣನವರ್ 1 ಲಕ್ಷ ರೂ. ಬಹುಮಾನ ನೀಡಿದರು. ಉಚಿತವಾಗಿ ದಕ್ಷಿಣ ಭಾರತ ಪ್ರವಾಸಕ್ಕೆ ತೆರಳುವ ಉಡುಗೊರೆ ನೀಡಿದರು.

Ravi D Channannavar honoured head constable Chandra Kumar

ಮಾಧ್ಯಮಗಳ ಜೊತೆ ಮಾತನಾಡಿದ ಚಂದ್ರಕುಮಾರ್, 'ಇಲಾಖೆ ನನ್ನನ್ನು ಗುರುತಿಸಿರುವುದು ಸಂತಸ ತಂದಿದೆ. ಮತ್ತಷ್ಟು ಜವಾಬ್ದಾರಿಯಿಂದ ಕೆಲಸ ಮಾಡಲು ಇದು ಪ್ರೇರಣೆಯಾಗಿದೆ' ಎಂದು ಹೇಳಿದರು.

English summary
Deputy Commissioner of Police South Division of the Bengaluru City Ravi D Channannavar honoured Chandra Kumar head constable of Jnanabharathi police station who arrested Achyut Kumar serial chain-snatcher who involved in more than 70 chain-snatching cases in Bengaluru and Tumakuru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X