ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಡಿಸೆಂಬರ್‌ನಲ್ಲಿ ಬಿಬಿಎಂಪಿ ಉಪಮೇಯರ್, ಸಮಿತಿ ಚುನಾವಣೆ?

|
Google Oneindia Kannada News

ಬೆಂಗಳೂರು, ನವೆಂಬರ್ 21: ಉಪ ಮೃಯರ್ ರಮೀಳಾ ಉಮಾಶಂಕರ್ ನಿಧನದ ನಂತರ ತೆರವಾದ ಸ್ಥಾನ ಹಾಗೂ ಸಮಿತಿಗಳ ಅಧ್ಯಕ್ಷರ ಸ್ಥಾನಕ್ಕೆ ಡಿಸೆಂಬರ್ ಮೊದಲ ವಾರದಲ್ಲಿ ಚುನಾವಣೆ ನಡೆಯಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಉಪಮೇಯರ್ ಹಾಗೂ ಸ್ಥಾಯಿ ಸಮಿತಿಗಳಿಗೆ ಚುನಾವಣೆ ಅಗತ್ಯ ಮತದಾರರ ಪಟ್ಟಿ ಸಿದ್ಧಪಡಿಸಿರುವ ಪಾಲಿಕೆ ಅಧಿಕಾರಿಗಳು, ಚುನಾವಣೆಗೆ ದಿನಾಂಕ ನಿಗದಿ ಕೋರಿ ಚುನಾವಣಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.

ಹೃದಯಾಘಾತದಿಂದ ಬಿಬಿಎಂಪಿ ಉಪಮೇಯರ್ ರಮೀಳಾ ಉಮಾಶಂಕರ್ ನಿಧನಹೃದಯಾಘಾತದಿಂದ ಬಿಬಿಎಂಪಿ ಉಪಮೇಯರ್ ರಮೀಳಾ ಉಮಾಶಂಕರ್ ನಿಧನ

ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಆಡಳಿತದ ನಾಲ್ಕನೇ ಮೇಯರ್ ಆಯ್ಕೆ ಚುನಾವಣೆ ಸಂದರ್ಭದಲ್ಲೇ ಉಪ ಮೇಯರ್ ಚುನಾವಣೆ ನಡೆದಿತ್ತು ಆದರೆ ಉಪಮೇಯರ್ ನಿಧನದಿಂದಾಗಿ ಆ ಸ್ಥಾನ ತೆರವಾಗಿದೆ.

Re election for Deputy mayor post likely in December

ಆಕಾಂಕ್ಷಿಗಳು ಯಾರ್ಯಾರಿದ್ದಾರೆ: ಉಪ ಮೇಯರ್ ಸ್ಥಾನಕ್ಕೆ ಜೆಡಿಎಸ್ ನಲ್ಲಿ ಆಕಾಂಕ್ಷಿಗಳ ನಡುವೆ ಭಾರಿ ಪೈಪೋಟಿ ನಡೆದಿದೆ. ಪಾಲಿಕೆ ಜೆಡಿಎಸ್ ನಾಯಕಿ ನೇತ್ರಾ ನಾರಾಯಣ್, ಸದಸ್ಯರಾ್ ಇಮ್ರಾನ್ ಪಾಷಾ, ಭದ್ರೇಗೌಡ ಹಾಗೂ ರಾಜಶೇಖರ್ ತೀವ್ರ ಕಸರತ್ತು ನಡೆಸಿದ್ದಾರೆ.

ಬೆಂಗಳೂರಿನ 52ನೇ ಮೇಯರ್ ಆಗಿ ಗಂಗಾಂಬಿಕೆ ಆಯ್ಕೆ ಬೆಂಗಳೂರಿನ 52ನೇ ಮೇಯರ್ ಆಗಿ ಗಂಗಾಂಬಿಕೆ ಆಯ್ಕೆ

ಅದೇ ರೀತಿ 12 ಸ್ಥಾಯಿ ಸಮಿತಿಗಳ ಅಧ್ಯಕ್ಷ ಹುದ್ದೆಗಳು ಕಳೆದ ವರ್ಷದಂತೆಯೇ ಕಾಂಗ್ರೆಸ್, ಜೆಡಿಎಸ್ ಮತ್ತು ಪಕ್ಷೇತರ ನಡುವೆ ಹಂಚಿಕೆಯಾಗಲಿದೆ. ಮೇಯರ್ ಸ್ಥಾನ ಕಾಂಗ್ರೆಸ್ ಗೆ ನೀಡಿರುವುದರಿಂದ ಆರ್ಥಿಕ ಸ್ಥಾಯಿ ಸಮಿತಿ ಮತ್ತೆ ಜೆಡಿಎಸ್ ಪಾಲಾಗುವ ಸಾಧ್ಯತೆ ಇದೆ.

English summary
With the sudden demise of Ramila Umashankar, the election for the post of deputy mayor will have to be held soon. According to highly placed sources in the Congress, it will most likely be held along with elections to the 12 different standing committees of the Bruhat Bengaluru Mahanagara Palike (BBMP). The term of the incumbent standing committees comes to an end on November 9, and the elections may be held on December first week.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X