ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಂಧನ ಭೀತಿ: ಹೈದರಾಬಾದ್‌ನಲ್ಲಿ ಜಾಮೀನಿಗೆ ಮೊರೆ ಹೋದ ರೆಡ್ಡಿ

|
Google Oneindia Kannada News

ಬೆಂಗಳೂರು, ನವೆಂಬರ್ 7: ಆಂಬಿಡೆಂಟ್ ಹೆಸರಿನ ಚಿಟ್​ಫಂಡ್​ ಸಂಸ್ಥೆಯಲ್ಲಿ ನೂರಾರು ಕೋಟಿ ಅಕ್ರಮ ನಡೆದಿತ್ತು ಇದರಲ್ಲಿ ಭಾಗಿಯಾಗಿದ್ದ ಎನ್ನಲಾದ ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಇದೀಗ ಸಂಕಷ್ಟ ಎದುರಾಗಿದೆ. ಸಿಸಿಬಿ ಪೊಲೀಸರು ಅವರ ಬೆನ್ನಟ್ಟಿದ್ದಾರೆ ಹೀಗಾಗಿ ಹೈದರಾಬಾದ್‌ನಲ್ಲಿ ಜಾಮೀನಿಗೆ ಮೊರೆ ಹೋಗಿದ್ದಾರೆ ಎನ್ನಲಾಗುತ್ತಿದೆ.

ಹೈದರಾಬಾದ್‍ನಲ್ಲಿ ರೆಡ್ಡಿ ಮನೆ ಇದೆ. ಹೀಗಾಗಿ ನಿರೀಕ್ಷಣಾ ಜಾಮೀನಿಗೆ ಅಲ್ಲಿಂದಲೇ ಅರ್ಜಿ ಸಲ್ಲಿಸಲಿದ್ದಾರೆ ಎನ್ನುವ ಮಾಹಿತಿಯೊಂದು ಮೂಲಗಳಿಂದ ಲಭಿಸಿದೆ. ಜನಾರ್ದನ ರೆಡ್ಡಿ ಅವರು ರದ್ದಾದ ನೋಟುಗಳನ್ನು ಅಕ್ರಮವಾಗಿ ವರ್ಗಾಯಿಸಿಕೊಂಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಹೀಗಾಗಿ ವಿಚಾರಣೆಗೆ ಸಂಬಂಧಿಸಿದಂತೆ ಸದ್ಯದಲ್ಲಿಯೇ ಬೆಂಗಳೂರು ಸಿಸಿಬಿ ವಿಶೇಷ ತಂಡವು ಜನಾರ್ದನ ರೆಡ್ಡಿ ಅವರನ್ನು ಭೇಟಿ ಆಗಲಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಬಹುಕೋಟಿ ಮೋಸ ಪ್ರಕರಣ: ಸಿಸಿಬಿಯಿಂದ ಜನಾರ್ದನ ರೆಡ್ಡಿ ಹುಡುಕಾಟ ಬಹುಕೋಟಿ ಮೋಸ ಪ್ರಕರಣ: ಸಿಸಿಬಿಯಿಂದ ಜನಾರ್ದನ ರೆಡ್ಡಿ ಹುಡುಕಾಟ

ಸಾರ್ವಜನಿಕರಿಗೆ ವಂಚಿಸಿದ್ದ ಕಂಪೆನಿ ಜೊತೆಗೂಡಿ ಜನಾರ್ದನ ರೆಡ್ಡಿ ಅಮಾನೀಕರಣಗೊಂಡ ನೋಟುಗಳನ್ನು ವರ್ಗಾವಣೆ ಮಾಡಿಕೊಂಡಿದ್ದರು. ಈ ಪ್ರಕರಣದ ಪ್ರಮುಖ ಆರೋಪಿ ಜನಾರ್ದನ ರೆಡ್ಡಿ ಪಿಎಗಾಗಿ ಸಿಸಿಬಿ ತಂಡ ತೀವ್ರ ಶೋಧ ನಡೆಸುತ್ತಿದೆ. ದೇವನಹಳ್ಳಿ ರೇಸಾರ್ಟ್ ಬಳಿಯೂ ಸಿಸಿಬಿ ತಂಡ ತೆರಳಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

Reddy moves plea for bail in Hyderabad

ಜನಾರ್ದನ ರೆಡ್ಡಿ ಪಾಪಕ್ಕೆ ಮಕ್ಕಳಿಗೆ ಶಿಕ್ಷೆ ಆಗದಿರಲಿ: ಸಿದ್ದರಾಮಯ್ಯ ಟ್ವೀಟ್ ಜನಾರ್ದನ ರೆಡ್ಡಿ ಪಾಪಕ್ಕೆ ಮಕ್ಕಳಿಗೆ ಶಿಕ್ಷೆ ಆಗದಿರಲಿ: ಸಿದ್ದರಾಮಯ್ಯ ಟ್ವೀಟ್

ಜನಾರ್ದನ ರೆಡ್ಡಿ ಹಾಗೂ ಅವರ ಆಪ್ತ ಅಲಿಖಾನ್ ಪತ್ತೆಗಾಗಿ ಸಿಸಿಬಿ ತಂಡ ಚುರುಕು ಕಾರ್ಯಾಚರಣೆ ನಡೆಸಿದೆ. ಇತ್ತ ಜನಾರ್ದನ ರೆಡ್ಡಿ ಮೊಬೈಲ್ ಕೂಡ ಸ್ವಚ್ಡ್ ಆಫ್ ಆಗಿದೆ. ಹೀಗಾಗಿ ಅವರು ಪತ್ತೆ ಆಗುತ್ತಿದ್ದಂತೆ ಬಂಧಿಸುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. ಇದೀಗ ಬೆಂಗಳೂರು ಹೈದರಾಬಾದ್ ಸೇರಿದಂತೆ ವಿವಿಧೆಡೆ ಪೊಲೀಸರು ಜನಾರ್ದನ ರೆಡ್ಡಿ ಮತ್ತು ಅಲಿಖಾನ್ ಗೆ ಬಲೆ ಬೀಸಿದ್ದಾರೆ.

English summary
Former minister Janardhan Reddy has moved bail application in Hyderabad court who would likely to be arrested by Bengaluru CCB police.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X