ನಿವೃತ್ತ ಐಪಿಎಸ್ ಅಧಿಕಾರಿ ಬಿಪಿನ್ ಗೋಪಾಲಕೃಷ್ಣ ನಿಧನ

Posted By:
Subscribe to Oneindia Kannada

ಬೆಂಗಳೂರು, ಏಪ್ರಿಲ್ 07 : ನಿವೃತ್ತ ಐಪಿಎಸ್ ಅಧಿಕಾರಿ ಬಿಪಿನ್ ಗೋಪಾಲಕೃಷ್ಣ ಅವರು ವಿಧಿವಶರಾಗಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಗುರುವಾರ ಮುಂಜಾನೆ ಮಲ್ಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಮೂಲತಃ ಆಂಧ್ರಪ್ರದೇಶದ ನೆಲ್ಲೂರಿನವರಾದ ಬಿಪಿನ್ ಗೋಪಾಲಕೃಷ್ಣ (63) ಅವರು 1982ರಲ್ಲಿ ಐಪಿಎಸ್ ಪರೀಕ್ಷೆ ಪಾಸು ಮಾಡಿ ಕರ್ನಾಟಕದಲ್ಲಿ ಸೇವೆ ಆರಂಭಿಸಿದ್ದರು. 2015ರ ಜುಲೈನಲ್ಲಿ ಸೇವೆಯಿಂದ ನಿವೃತ್ತರಾಗಿದ್ದರು.

bipin gopalakrishna

ಉಡುಪಿ, ಚಿಕ್ಕಮಗಳೂರು, ಕಲಬುರಗಿ, ಮೈಸೂರು ಜಿಲ್ಲೆಗಳಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಬಿಪಿನ್ ಗೋಪಾಲಕೃಷ್ಣ ಅವರು ಸೇವೆ ಸಲ್ಲಿಸಿದ್ದರು. ಮೈಸೂರು ನಗರದ ಪೊಲೀಸ್ ಆಯುಕ್ತರಾಗಿ, ಬೆಂಗಳೂರು ನಗರದ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿ (ಕಾನೂನು ಮತ್ತು ಸುವ್ಯವಸ್ಥೆ), ಸಿಐಡಿ ಡಿಜಿಪಿಯಾಗಿ ಕಾರ್ಯ ನಿರ್ವಹಿಸಿದ್ದರು. [ಸ್ಫೋಟ ತನಿಖೆಗಾಗಿ ಬಿಪಿನ್‌ ಗೋಪಾಲಕೃಷ್ಣ ಮುಂಬೈಗೆ]

ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಐಜಿಪಿಯಾಗಿ, ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿಯಾಗಿ ಸೇವೆ ಸಲ್ಲಿಸಿದ್ದರು. 2000 ಹಾಗೂ 2006ರಲ್ಲಿ ಗೋಪಾಲಕೃಷ್ಣ ಅವರಿಗೆ ರಾಷ್ಟ್ರಪತಿಗಳ ಪೊಲೀಸ್ ಪದಕ ಲಭಿಸಿತ್ತು.

ರಾಜ್ಯದ ಡಿಜಿ, ಐಜಿಪಿ ಹುದ್ದೆಗೆ ಸುಶಾಂತ್ ಮಹಾಪಾತ್ರ, ಆರ್.ಕೆ. ದತ್ತ ಅವರ ಹೆಸರಿನ ಜೊತೆ ಬಿಪಿನ್‌ ಗೋಪಾಲಕೃಷ್ಣ ಹೆಸರು ಕೇಳಿಬಂದಿತ್ತು. ಅಂತಿಮವಾಗಿ ಓಂ ಪ್ರಕಾಶ್ ಅವರು ಡಿಜಿ, ಐಜಿಪಿಯಾಗಿ ನೇಮಕವಾಗಿದ್ದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Former IPS officer Bipin Gopalakrishna (63) died in Mallya Hospital, Bengaluru on April 7, 2016. 1982 batch IPS officer Bipin Gopalakrishna retired on July 2015.
Please Wait while comments are loading...