ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು ಏರ್‌ಶೋ: ಸಂಪರ್ಕ ರಸ್ತೆಗಳ ಅಭಿವೃದ್ಧಿಗೆ ಯೋಜನೆ

|
Google Oneindia Kannada News

ಬೆಂಗಳೂರು, ಡಿಸೆಂಬರ್ 5: ಪ್ರತಿ 2 ವರ್ಷಗಳಿಗೊಮ್ಮೆ ನಡೆಯುವ ಬೆಂಗಳೂರು ಏರ್ ಶೋಗೆ ಬರುವ ಪ್ರವಾಸಿಗರಿಗೆ ಅನುಕೂಲ ಕಲ್ಪಿಸಲು ರಾಜ್ಯ ಸರ್ಕಾರ ವಿಶೇಷ ಯೋಜನೆ ರೂಪಿಸಿದೆ.

ಏರ್‌ ಶೋ ಬೆಂಗಳೂರಿನಿಂದ ಸ್ಥಳಾಂತರ : ಮೋದಿಗೆ ಎಚ್‌ಡಿಕೆ ಪತ್ರ ಏರ್‌ ಶೋ ಬೆಂಗಳೂರಿನಿಂದ ಸ್ಥಳಾಂತರ : ಮೋದಿಗೆ ಎಚ್‌ಡಿಕೆ ಪತ್ರ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಡೆಯಿಂದ ಏರ್‌ ಶೋ ವೀಕ್ಷಿಸಲು ಬರುವ ಸಾರ್ವಜನಿಕರು ಟ್ರಾಫಿಕ್ ಜಾಮ್‌ನಿಂದಾಗಿ ತತ್ತರಿಸುತ್ತಿರುವುದು ಪ್ರತಿ ಏರ್‌ಶೋ ವೇಳೆ ಕಂಡು ಬರುವ ಸಾಮಾನ್ಯ ಸಮಸ್ಯೆಯಾಗಿದೆ.

ಬೆಂಗಳೂರಿನಿಂದ ಏರ್ ಶೋ ಸ್ಥಳಾಂತರ?, ಪರಮೇಶ್ವರ ಟ್ವೀಟ್ ಬೆಂಗಳೂರಿನಿಂದ ಏರ್ ಶೋ ಸ್ಥಳಾಂತರ?, ಪರಮೇಶ್ವರ ಟ್ವೀಟ್

ಈ ಹಿನ್ನೆಲೆಯಲ್ಲಿ ಈ ಬಾರಿ ಏರ್‌ ಶೋ ವೇಳೆ ಬೆಂಗಳೂರು ನಗರದಲ್ಲಿ ಸಂಚಾರ ದಟ್ಟಣೆ ಉಂಟಾಗದಂತೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸುತ್ತ ಹಾಗೂ ಅದನ್ನು ಸಂಪರ್ಕಿಸುವ ರಸ್ತೆಗಳನ್ನು ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ 30 ಕೋಟಿ ರೂ.ಗಳ ವಿಶೇಷ ಯೋಜನೆ ರೂಪಿಸಿದೆ.

Road deveopment project following upcoming Bengaluru Airshow

ತಮಿಳುನಾಡಿನ ಕಣ್ಣೂರಿನಿಂದ ಬಾಗಲೂರು ಮೂಲಕ ವಿಮಾನ ನಿಲ್ದಾಣ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 7 ಹಾಗೂ ಬೆಂಗಳೂರು, ಚಿಕ್ಕಬಳ್ಳಾಪುರ ಮಾರ್ಗವನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 4ನ್ನು ಸಂಪರ್ಕಿಸುವ ಎಲ್ಲಾ ರಸ್ತೆಯ ಅಭಿವೃದ್ಧಿಗೆ ರಾಜ್ಯ ಮೂಲಸಂಪನ್ಮೂಲ ಇಲಾಖೆ ಈ ಯೋಜನೆ ರೂಪಿಸಿದೆ.

ಬುಧವಾರ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆ ಈ ಯೋಜನೆಗೆ ಅನುಮೋದನೆ ನೀಡಿದೆ.

English summary
The state government has decided to develop Highways and road in and around Kempegowda international airport including national highway 7and 4 folowing upcoming air show.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X