ಬೆಂಗಳೂರಿನಲ್ಲಿ ಹಾಡಹಗಲೇ ರೌಡಿ ಶೀಟರ್ ಹತ್ಯೆ

Posted By:
Subscribe to Oneindia Kannada

ಬೆಂಗಳೂರು, ಜನವರಿ 13 : ಬೆಂಗಳೂರಿನಲ್ಲಿ ಹಾಡಹಗಲೇ ರೌಡಿ ಶೀಟರ್‌ನನ್ನು ಕೊಚ್ಚಿ ಕೊಲೆ ಮಾಡಲಾಗಿದೆ. ಹೆಬ್ಬಾಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಬುಧವಾರ ಬೆಳಗ್ಗೆ ಹೆಬ್ಬಾಳ ಬಳಿಯ ಗುಡ್ಡದಹಳ್ಳಿ ಸರ್ಕಲ್ ಬಳಿ ಅಂಗಡಿ ಮುಂದೆಯೇ ರೌಡಿ ಶೀಟರ್ ಸತೀಶ್ ಅಲಿಯಾಸ್ ಗುಂಡನನ್ನು (30) ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿದ್ದಾರೆ. [ಹೆಬ್ಬಾಳ ಕ್ಷೇತ್ರದ ಉಪ ಚುನಾವಣೆ ದಿನಾಂಕ ಪ್ರಕಟ]

murder

ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ ಸೇರಿದಂತೆ ಸತೀಶ್ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿದ್ದವು. ಹಳೆ ದ್ವೇಷದಿಂದಾಗಿ ಈ ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. [ಹೆಬ್ಬಾಳ ಅಪಘಾತದಲ್ಲಿ ಸತ್ತ ಅರ್ಪಿತಾಗೆ ಅಶ್ರು ತರ್ಪಣ]

ರಸ್ತೆ ಸುತ್ತಮತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಆರೋಪಿಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.

ಬಿಎಂಟಿಸಿ ಬಸ್ಸಿಗೆ ಬೈಕ್ ಸವಾರ ಬಲಿ : ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟ ಘಟನೆ ಶಾಂತಿನಗರ ಬಸ್ ನಿಲ್ದಾಣದ ಸಮೀಪದಲ್ಲಿ ಬುಧವಾರ ಬೆಳಗ್ಗೆ ನಡೆದಿದೆ. ಮೃತಪಟ್ಟವರನ್ನು ಕೇರಳ ಮೂಲದ ಅಜಿತ್ (24) ಎಂದು ಗುರುತಿಸಲಾಗಿದೆ.

ಮಹಾಲಕ್ಷ್ಮಿ ಲೇಔಟ್‌ನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಅಜಿತ್ ಇಂದು ಬೆಳಗ್ಗೆ 8.20ರ ಸುಮಾರಿಗೆ ಬೈಕ್‌ನಲ್ಲಿ ಹೋಗುತ್ತಿದ್ದಾಗ, ಶಾಂತಿನಗರ ಬಸ್ ನಿಲ್ದಾಣ ಬಳಿ ಬಿಎಂಟಿಸಿ ಬಸ್ ಬೈಕ್‌ಗೆ ಡಿಕ್ಕಿ ಹೊಡೆದಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
A rowdy-sheeter Satish (30) was murdered allegedly by members of his rival gang at Hebbal, Bengaluru on Wednesday morning. Hebbal Police visited the spot.
Please Wait while comments are loading...